ಶಿಸ್ತನ್ನು ರೂಢಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಲಹೆ

blank

ಚಿತ್ರದುರ್ಗ: ನಾಯಕತ್ವ ಗುಣಗಳು ವಿದ್ಯಾರ್ಥಿಗಳು ಅವರ ಜೀವನದಲ್ಲಿ ಅತ್ಯುತ್ತಮ ಸಾಧನೆಗೆ ಸಹಕಾರಿಯಾಗುತ್ತವೆ ಎಂದು ಜಿಲ್ಲಾ ಅಗ್ನಿಶಾ ಮಕ ದಳದ ಅಧಿಕಾರಿ ಸೋಮಶೇಖರ್ ಬಿ.ಅಗಡಿ ಹೇಳಿದರು. ನಗರದ ವಿದ್ಯಾ ವಿಕಾಸ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ಶಾ ಲಾ ಮಟ್ಟದ ಇನ್ವೆಸ್ಟಿಟ್ಯುರ್ ಉದ್ಘಾಟನಾ ಕಾರ‌್ಯಕ್ರಮದಲ್ಲಿ ಮಾತನಾಡಿದ ಅವರು,ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ರೂಢಿಸಿ ಕೊಳ್ಳಬೇಕೆಂದರು.
ಕಾರ‌್ಯಕ್ರಮ ಉದ್ಘಾಟಿಸಿದ ಸಂಸ್ಥೆ ಕಾರ‌್ಯದರ್ಶಿ ಬಿ.ವಿಜಯ್‌ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಧನಾತ್ಮಕ ಗುಣಗಳನ್ನು ರೂಢಿಸಿ ಕೊಳ್ಳಲು ಈ ಕಾರ್ಯಕ್ರಮ ನೆರವಾಗಲಿದೆ.ಪಠ್ಯದಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಳ್ಳುವುದರ ಜತೆಗೆ ಪಠ್ಯೇತರ ಚಟುವಟಿಕೆ ಗಳಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.ಬಾಲ್ಯದಿಂದಲೇ ಶಿಸ್ತು,ಗುರು,ಹಿರಿಯರಲ್ಲಿ ಗೌರವ,ಭಕ್ತಿಯನ್ನು ಬೆಳೆಸಿ ಕೊಳ್ಳ ಬೇಕೆಂದು ವಿದ್ಯಾರ್ಥಿಗಳಿಗೆ ಸೂಚಿಸಿದರು. 2025-26ನೇ ಸಾಲಿನ ಶಾಲಾ ನಾಯಕರಾಗಿ ಎಂ.ಚಕ್ಷು ದೀಕ್ಷಿತ್ ಹಾಗೂ ಟಿ.ಜಿ.ಪುಣ್ಯ ಆಯ್ಕೆಯಾದರು.
ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎಸ್.ಎಂ ಪೃಥ್ವೀಶ,ನಿರ್ದೇಶಕಿ ಸುನೀತಾ ವಿಜಯ್‌ಕುಮಾರ್,ಮುಖ್ಯಶಿಕ್ಷಕ ಎನ್.ಜಿ.ತಿಪ್ಪೇಸ್ವಾಮಿ ಐಸಿಎಸ್‌ಸಿ ಪ್ರಾಚಾರ‌್ಯ ಪಿ.ಬಸವರಾಜಯ್ಯ ಇತರರು ಇದ್ದರು. ವಿದ್ಯಾರ್ಥಿಗಳಾದ ಸೈಯೇದಾ ಸಫಾ ಸುಹಾನಿ ನಿರೂಪಿಸಿದರು, ಎಂ.ಬಿ.ಹಂಸ ಸ್ವಾಗತಿಸಿ,ಎಸ್.ಮೋನಿಷಾ ವಂದಿಸಿದರು.
—-

Share This Article

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…