ಚಿತ್ರದುರ್ಗ: ಪತ್ನಿಯ ಶೀಲ ಶಂಕಿಸಿ ಕೊಲೆಗೈದ ಆರೋಪಿ ಎಂ.ಮೆಹಬೂಬ್ ಬಾಷಾಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ಕಠಿಣ ಜೀವಾವಧಿ ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಹೊಸಪೇಟೆಯ ಕಮಲಾಪುರದ ಮೆಹಬೂಬ್ ಬಾಷಾ ತನ್ನ ಪತ್ನಿ ಅಮೀನಾಭಾನು ಶೀಲಶಂಕಿಸಿ 2021ರ ಸೆ.10ರಂದು ಚಿತ್ರದುರ್ಗದ ಚಳ್ಳಕೆರೆ ರಸ್ತೆಯಲ್ಲಿ ಚಾಕುವಿನಿಂದ ಚುಚ್ಚಿ ಕೊಲೆಗೈದಿದ್ದ. ಈ ಕುರಿತು ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಪೂರೈಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ರೋಣಾ ವಾಸುದೇವ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಠಿಣ ಜೀವಾವಧಿ ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಧಾನ ಸರ್ಕಾರಿ ಅಭಿಯೋಜಕ ಬಿ.ಗಣೇಶ್‌ನಾಯ್ಕ ವಾದ ಮಂಡಿಸಿದ್ದರು.