25.5 C
Bangalore
Monday, December 16, 2019

ಶುದ್ಧ ನೀರಿಗಾಗಿ ಪರದಾಟ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಮುಸ್ಲಿಂರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ

* ಸಾಮರಸ್ಯಕ್ಕೆ ಮುನ್ನುಡಿ ಬರೆದ ಕಾರ್ಯಕ್ರಮವಿಜಯವಾಣಿ ಸುದ್ದಿಜಾಲ ಬಳ್ಳಾರಿನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ...

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ರಟ್ಟಿಹಳ್ಳಿ: ಅಧಿಕಾರಿಗಳ ನಿರ್ಲಕ್ಷ್ಯ, ಅಸಮರ್ಪಕ ನಿರ್ವಹಣೆಯಿಂದ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿದ್ದು, ಸಾರ್ವಜನಿಕರು ಶುದ್ಧ ನೀರಿಗಾಗಿ ಸಮಸ್ಯೆ ಎದುರಿಸುತ್ತಿದ್ದಾರೆ.

- Advertisement -

2017-18ನೇ ಸಾಲಿನಲ್ಲಿ ಗ್ರಾಮೀಣ ಕುಡಿಯುವ ನೀರು ಯೋಜನೆಯಡಿ ಪಟ್ಟಣದ ಕಾರಂಜಿ ಸರ್ಕಲ್, ಕಬ್ಬಿಣಕಂತಿಮಠ ಮತ್ತು ಟಿಪ್ಪು ನಗರದಲ್ಲಿ 3 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಇದರಲ್ಲಿ 2 ಘಟಕಗಳು ಸಂಪೂರ್ಣ ಸ್ಥಗಿತಗೊಂಡಿವೆ. ಒಂದು ಘಟಕ ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ಗುತ್ತಿಗೆದಾರರಿಗೆ 5 ವರ್ಷ ಘಟಕಗಳನ್ನು ನಿರ್ವಹಣೆ ಮಾಡುವಂತೆ ಒಪ್ಪಿಗೆ ಪಡೆಯಲಾಗಿದೆ. ಆದರೆ, ಇವರು ಸಮರ್ಪಕವಾಗಿ ನಿರ್ವಹಣೆ ಮಾಡದಿರುವುದರಿಂದ ಘಟಕಗಳಲ್ಲಿ ಹಲವಾರು ಸಮಸ್ಯೆಗಳು ಉಂಟಾಗಿವೆ.

ಕಾರಂಜಿ ಸರ್ಕಲ್​ನಲ್ಲಿ ಇರುವ ಘಟಕದ ವಿದ್ಯುತ್ ಬಿಲ್ ಪಾವತಿಸದ ಕಾರಣ ಕಳೆದ 8-10 ದಿನಗಳಿಂದ ಹೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ. ಹೀಗಾಗಿ, ನೀರು ಬಾರದೆ ಘಟಕವು ಸ್ಥಗಿತವಾಗಿದೆ. ಕಬ್ಬಿಣ ಕಂತಿಮಠದ ಬಳಿ ಇರುವ ಮತ್ತೊಂದು ಘಟಕವೂ ದುರಸ್ತಿಗೆ ಬಂದಿದೆ. ಟಿಪ್ಪು ನಗರದಲ್ಲಿನ ಒಂದು ಘಟಕದಲ್ಲಿ ಮಾತ್ರ ನೀರು ದೊರೆಯುತ್ತಿದೆ.

ಸಮಸ್ಯೆಗಳ ಆಗರ
ಕಾರಂಜಿ ಸರ್ಕಲ್​ನಲ್ಲಿನ ಘಟಕದಲ್ಲಿ ಟ್ಯಾಂಕ್​ಅನ್ನು ಹಲವು ತಿಂಗಳಿನಿಂದ ಸ್ವಚ್ಛತೆ ಮಾಡದೇ ಇರುವುದರಿಂದ ನೀರು ಅಶುದ್ಧವಾಗಿದೆ. ಕೆಲವೆಡೆ ನೀರು ಸಹ ಸೋರಿಕೆಯಾಗುತ್ತಿರುವುದರಿಂದ ಕ್ರಿಮಿ ಕೀಟಗಳು ಕಾಣುತ್ತಿವೆ. ಘಟಕದ ಅಕ್ಕ ಪಕ್ಕ ಅಸ್ವಚ್ಛತೆ ಹರಡಿದೆ. ಅಲ್ಲದೆ, ಕೆಲವು ಕಿಡಿಗೇಡಿಗಳು ಇಲ್ಲಿಯೇ ಬಹಿರ್ದೆಸೆ ಮಾಡುತ್ತಿದ್ದಾರೆ. ನೀರು ಸೋರಿಕೆಯಿಂದ ವಿದ್ಯುತ್ ಶಾರ್ಟ್​ಸರ್ಕ್ಯೂಟ್ ಆಗುವ ಸಂಭವವಿದೆ. ಈ ಎಲ್ಲ ಸಮಸ್ಯೆ ಸರಿಪಡಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ.

ಕಾರಂಜಿ ಸರ್ಕಲ್​ನಲ್ಲಿ ಇರುವ ಶುದ್ಧ ನೀರಿನ ಘಟಕದ ವಿದ್ಯುತ್ ಬಿಲ್ ಪಾವತಿಸದ ಕಾರಣ ಕಳೆದ 10 ದಿನಗಳಿಂದ ಇಲ್ಲಿ ಶುದ್ಧ ನೀರು ದೊರೆಯುತ್ತಿಲ್ಲ. ಅಲ್ಲದೆ, ಈ ಘಟಕದಲ್ಲಿ ಹಲವಾರು ಸಮಸ್ಯೆಗಳಿದ್ದು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹರಿಸಬೇಕು.
-ಯಲ್ಲಪ್ಪ ಮರಾಠೆ, ಸ್ಥಳೀಯ ನಿವಾಸಿ

ಕಬ್ಬಿಣಕಂತಿಮಠದ ಬಳಿ ಇರುವ ಶುದ್ಧ ಕುಡಿಯುವ ನೀರಿನ ಘಟಕವು ತಿಂಗಳಿಗೆ 15 ದಿನ ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ಇದಕ್ಕೆ ಸಂಬಂಧಿಸಿದ ಸಿಬ್ಬಂದಿಗೆ ದುರಸ್ತಿ ಮಾಡುವಂತೆ ಹಲವಾರು ಬಾರಿ ದೂರವಾಣಿ ಕರೆ ಮಾಡಿದರೂ ಪ್ರಯೋಜನವಾಗುತ್ತಿಲ್ಲ.
-ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಕಬ್ಬಿಣಕಂತಿಮಠ ರಟ್ಟಿಹಳ್ಳಿ

ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕಿನಲ್ಲಿ ಒಟ್ಟು 36 ಶುದ್ಧ ಕುಡಿಯುವ ನೀರಿನ ಘಟಕಗಳು ಇವೆ. ಇದರಲ್ಲಿ 35 ಘಟಕಗಳು ಹೆಸ್ಕಾಂನಲ್ಲಿ ಎಲ್.ಟಿ. 6 ಎಂದು ದಾಖಲಾಗಿದ್ದು, ಇವುಗಳಿಗೆ ವಿದ್ಯುತ್ ಬಿಲ್ ಕಡಿಮೆ ಬರುತ್ತಿದೆ. ಆದರೆ, ಕಾರಂಜಿ ಸರ್ಕಲ್​ನಲ್ಲಿನ ಘಟಕವು ಎಲ್.ಟಿ. 3 ಎಂದು ನೋಂದಣಿಯಾಗಿರುವುದರಿಂದ ವಿದ್ಯುತ್ ಬಿಲ್ ಹೆಚ್ಚಿಗೆ ಬರುತ್ತಿದೆ. ಅದನ್ನು ಸರಿಪಡಿಸಿ ಜು. 2ರಂದು ನೀರು ದೊರೆಯುವಂತೆ ಮಾಡಲಾಗುವುದು. ಸಮರ್ಪಕ ನಿರ್ವಹಣೆಗೆ ಹೊಸ ಸಿಬ್ಬಂದಿಯನ್ನು ನೇಮಿಸುವಂತೆ ಸೂಚಿಸಲಾಗಿದೆ.
-ರಮೇಶ ಕುಮಾರ್ ಸಹಾಯಕ ಇಂಜಿನಿಯರ್,
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಉಪವಿಭಾಗ.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...