20.4 C
Bengaluru
Sunday, January 19, 2020

ಶುದ್ಧ ನೀರಿಗಾಗಿ ಹಳ್ಳಿಗರ ಅಲೆದಾಟ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ರಾಣೆಬೆನ್ನೂರ: ಜನರಿಗೆ ಶುದ್ಧ ನೀರು ಪೂರೈಸಲು ತಾಲೂಕಿನ ಬಹುತೇಕ ಗ್ರಾಮ, ತಾಂಡಾಗಳಲ್ಲಿ ಸ್ಥಾಪಿಸಿದ ಘಟಕಗಳು ಅಧಿಕಾರಿಗಳ ನಿಷ್ಕಾಳಜಿಯಿಂದ ಹಲವೆಡೆ ಸ್ಥಗಿತವಾಗಿವೆ. ಇದರಿಂದಾಗಿ ಹಳ್ಳಿಗರಿಗೆ ಬೋರ್​ವೆಲ್ ನೀರೇ ಗತಿಯಾಗಿದೆ.

ಘಟಕಗಳು ಸ್ಥಗಿತವಾಗಿ ವರ್ಷಗಳೇ ಗತಿಸಿದರೂ ಹಿಂದಿನ ಶಾಸಕ ಆರ್. ಶಂಕರ ಅಧಿಕಾರಿಗಳಿಗೆ ಒತ್ತಡ ಹೇರಿ ದುರಸ್ತಿಪಡಿಸಲಿಲ್ಲ. ಈಗ ಆಯ್ಕೆಯಾದ ಶಾಸಕ ಅರುಣಕುಮಾರ ಪೂಜಾರ ಅವರಾದರೂ ಹಳ್ಳಿಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂಬುದು ಗ್ರಾಮೀಣರ ಒತ್ತಾಸೆಯಾಗಿದೆ.

ಕೆಟ್ಟು ನಿಂತ ಘಟಕಗಳೇ ಹೆಚ್ಚು: ತಾಲೂಕಿನಲ್ಲಿ 108 ಗ್ರಾಮ, 22 ತಾಂಡಾಗಳಿವೆ. ಭೂಸೇನಾ ನಿಗಮ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ತಾಲೂಕಿನ ಗ್ರಾಮ ಹಾಗೂ ತಾಂಡಾಗಳಲ್ಲಿ ಒಟ್ಟು 151 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಅವುಗಳಲ್ಲಿ 26 ಘಟಕಗಳಿಗೆ ಇನ್ನೂ ಚಾಲನೆಯೇ ದೊರೆತಿಲ್ಲ. ಚಾಲನೆ ದೊರೆತ 125 ಘಟಕಗಳಲ್ಲಿ ಕೆಟ್ಟ ನಿಂತ ಘಟಕಗಳೇ ಹೆಚ್ಚು. ಹೀಗಾಗಿ ಹಳ್ಳಿಗರು ಅಶುದ್ಧ ಅಥವಾ ಬೋರ್​ವೆಲ್​ನ ಫ್ಲೋರೈಡ್ ನೀರನ್ನೇ ಕುಡಿಯಬೇಕಾದ ಅನಿವಾರ್ಯತೆ ಎದುರಾಗಿದೆ.

ಶುದ್ಧ ನೀರಿನ ಘಟಕಗಳನ್ನು ದುರಸ್ತಿಪಡಿಸಬೇಕಾದ ಅಧಿಕಾರಿಗಳು ತಾಂತ್ರಿಕ ದೋಷ, ವಿದ್ಯುತ್ ಪೂರೈಕೆ, ಪೈಪ್​ಲೈನ್ ಒಡೆದಿರುವುದು ಮತ್ತಿತರ ಸಮಸ್ಯೆಗಳನ್ನು ಹೇಳುತ್ತ ಕಾಲಹರಣ ಮಾಡುತ್ತಿದ್ದಾರೆ ಎಂದು ಗ್ರಾಮೀಣರು ಆರೋಪಿಸುತ್ತಿದ್ದಾರೆ.

ಗಡಸು ನೀರೇ ಗತಿ: ಬಹುತೇಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಹೊರತುಪಡಿಸಿದರೆ ಬೋರ್​ವೆಲ್ ನೀರನ್ನೇ ಪೂರೈಸಲಾಗುತ್ತಿದೆ. ಈ ಬಾರಿ ಹೆಚ್ಚು ಮಳೆ ಸುರಿದಿದ್ದರಿಂದ ಈಗ ಬೋರ್​ನಿಂದ ಮಣ್ಣು ಮಿಶ್ರಿತ ಕೆಂಪು ನೀರು ಬರುತ್ತಿದೆ. ಸಂಗ್ರಹಿಸಿಟ್ಟ ಒಂದೇ ದಿನದಲ್ಲಿ ದುರ್ವಾಸನೆ ಬರುತ್ತಿದೆ. ಅದನ್ನು ಸೇವಿಸಲಾಗುತ್ತಿಲ್ಲ. ಕುಡಿದರೂ ರೋಗದ ಭೀತಿ ಇದೆ. ಇದರಿಂದ ಬೇಸತ್ತಿರುವ ಜನತೆ ಅಕ್ಕಪಕ್ಕದ ಗ್ರಾಮಗಳ ಆರಂಭವಿರುವ ಶುದ್ಧ ನೀರಿನ ಘಟಕಗಳನ್ನು ಹುಡುಕಿ ನೀರು ತರುತ್ತಿದ್ದಾರೆ.

ಬಾರದ ಅಧಿಕಾರಿಗಳು: ಗ್ರಾಮ ಹಾಗೂ ತಾಂಡಾಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಬಂದ್ ಆಗಿರುವ ವಿಷಯವನ್ನು ಗ್ರಾಪಂ, ಭೂ ಸೇನಾ ನಿಗಮ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಅಧಿಕಾರಿಗಳ ಗಮನಕ್ಕೆ ತಂದರೂ ಕ್ಯಾರೇ ಎನ್ನುತ್ತಿಲ್ಲ. ನಾನಾ ಕಾರಣ ಹೇಳಿ ಇಂದು-ನಾಳೆ ಎಂದು ಜಾರಿಕೊಳ್ಳುತ್ತಿದ್ದಾರೆ. ತಾಲೂಕಿನಲ್ಲಿ ತುಂಗಭದ್ರಾ, ಕುಮದ್ವತಿ ನದಿಗಳು ಹರಿದಿದ್ದರೂ ಇಂದಿಗೂ ಶುದ್ಧ ನೀರಿಗೆ ತತ್ವಾರವಾಗಿದೆ. ನೂತನ ಶಾಸಕ ಅರುಣಕುಮಾರ ಪೂಜಾರ ಅವರು ಸ್ಥಗಿತವಾದ ಶುದ್ಧ ನೀರಿನ ಘಟಕಗಳನ್ನು ಪುನಃ ಆರಂಭಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಹಳ್ಳಿಗರು ಒತ್ತಾಯಿಸಿದ್ದಾರೆ.

ತಾಲೂಕಾಡಳಿತ, ಶಾಸಕರ ನಿರ್ಲಕ್ಷ್ಯಂದ ಶುದ್ಧ ನೀರಿನ ಘಟಕಗಳು ಸ್ಥಗಿತವಾಗಿವೆ. ಅಧಿಕಾರಿಗಳಿಗೆ ಎಷ್ಟು ಬಾರಿ ತಿಳಿಸಿದರೂ ಪ್ರಯೋಜನವಾಗಿಲ್ಲ. ಶುದ್ಧ ನೀರಿಲ್ಲದ ಕಾರಣ ಮಕ್ಕಳು, ವೃದ್ಧರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕೂಡಲೆ ನೀರಿನ ಘಟಕಗಳನ್ನು ದುರಸ್ತಿ ಪಡಿಸಬೇಕು.
| ಬೀರಪ್ಪ ಲಮಾಣಿ, ತಾಂಡಾ ನಿವಾಸಿ


ಹಳ್ಳಿಗಳಲ್ಲಿ ಎಷ್ಟು ಕಡೆ ಶುದ್ಧ ಕುಡಿಯುವ ನೀರಿನ ಘಟಕಗಳು ಬಂದ್ ಆಗಿವೆ ಎಂಬ ಮಾಹಿತಿ ಪಡೆದು ಇಲಾಖೆ ಅಧಿಕಾರಿಗಳೊಂದಿಗೆ ರ್ಚಚಿಸುತ್ತೇನೆ. ಎಲ್ಲ ನೀರಿನ ಘಟಕಗಳನ್ನು ಕೂಡಲೆ ದುರಸ್ತಿಪಡಿಸಲು ಸೂಚಿಸಲಾಗುವುದು.
| ಅರುಣಕುಮಾರ ಪೂಜಾರ, ಶಾಸಕ, ರಾಣೆಬೆನ್ನೂರ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...