21.7 C
Bengaluru
Tuesday, January 21, 2020

ಶುದ್ಧ ನೀರಿನ ಘಟಕಗಳಿಗಿಲ್ಲ ಉದ್ಘಾಟನೆ ಭಾಗ್ಯ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಸಿದ್ದು ಕೆರಿಗೊಂಡ
ಮೋರಟಗಿ:  ಸರ್ಕಾರ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಲಕ್ಷಗಟ್ಟಲೇ ಹಣ ವ್ಯಯಿಸಿ ಸ್ಥಳೀಯ ಜನತಾ ಕಾಲನಿಯಲ್ಲಿ ಮತ್ತು ಬಜಾರ್ ಮುಖ್ಯ ರಸ್ತೆ ಪಕ್ಕದಲ್ಲಿ ಸೇರಿದಂತೆ ಒಟ್ಟು ಎರಡು ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದ್ದು ಲ್ಯಾಂಡ್ ಆರ್ಮಿ ಅಧಿಕಾರಿಗಳ ನಿರ್ಲಕ್ಷೃದಿಂದ ಇದುವರೆಗೂ ಉದ್ಘಾಟನೆಯಾಗಿಲ್ಲ.

ಎರಡೂ ನೀರಿನ ಘಟಕಗಳು ತುಕ್ಕು ಹಿಡಿದಿದ್ದು ಜನರ ತೆರಿಗೆ ಹಣ ಪೋಲಾಗುತ್ತಿದೆ. ನಿತ್ಯ ಸಾರ್ವಜನಿಕರು ಶುದ್ಧ ಕುಡಿಯುವ ನೀರಿಗಾಗಿ ಅಲೆದಾಡುವಂತಾಗಿದೆ. ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಯಾವೊಬ್ಬ ಅಧಿಕಾರಿ ಕುಂಟು ನೆಪ ಹೇಳುವಂತಿಲ್ಲ ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ ಮಾಡಿದ್ದರೂ ಅದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲದಂತಾಗಿದೆ.

ಮೋರಟಗಿ ಗ್ರಾಮ ಜಿಲ್ಲಾ ಪಂಚಾಯಿತಿ ಕೇಂದ್ರ ಬಿಂದುವಾಗಿದ್ದು ಅಂದಾಜು 10 ಸಾವಿರ ಜನಸಂಖ್ಯೆ ಹೊಂದಿದೆ. ಪ್ರತಿ ಮಂಗಳವಾರಕ್ಕೊಮ್ಮೆ ಸಂತೆಗೆ ಬರುವ ಸುತ್ತಮುತ್ತಲಿನ 10-12 ಗ್ರಾಮಗಳ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಕುಡಿಯಲು ನೀರಿಲ್ಲದೆ ಹೋಟೆಲ್‌ಗಳನ್ನು ಹುಡುಕುತ್ತ ಅಲೆದಾಡಬೇಕಾಗಿದೆ. ಹೋಟೆಲ್‌ಗಳಲ್ಲಿ ಚಹಾ ಕುಡಿದರೆ ಮಾತ್ರ ನೀರು ಕೊಡುತ್ತೇವೆ ಎಂದು ಮಾಲೀಕರು ಹೇಳುವುದರಿಂದ ಸಂತೆ ವ್ಯಾಪಾರಕ್ಕೆ ಬರುವ ಸಾರ್ವಜನಿಕರು, ವ್ಯಾಪಾರಸ್ಥರು ಎರಡೂ ಶುದ್ಧ ಕುಡಿಯುವ ನೀರಿನ ಘಟಕಗಳು ಪ್ರಾರಂಭವಾಗುವುದನ್ನು ಚಾತಕ ಪಕ್ಷಿಯಂತೆ ಕಾಯುವಂತಾಗಿದೆ.

ಸಾರ್ವಜನಿಕರು, ವ್ಯಾಪಾರಸ್ಥರ ಆಕ್ರೋಶ
ಗ್ರಾಮದಲ್ಲಿ 2 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು ನಮಗೆಂದು ಅಲ್ಲಿನ ನೀರು ಸಿಕ್ಕಿಲ್ಲ. ಸುಮ್ಮನೆ ಬಣ್ಣ ಬಣ್ಣದ ಡಬ್ಬಿ ತಂದಿಟ್ಟು ಬಿಲ್ ತಗೊಂಡಿದ್ದಾರೆ. ಚುನಾವಣೆ ವೇಳೆ ರಾಜಕಾರಣಿಗಳು ಕೇವಲ ಓಟು ಕೇಳಲು ಮನೆ ಬಂದು ಆಗಲಾರದ ಭರವಸೆಯೆಲ್ಲ ಕೊಡುತ್ತಾರೆ. ಗೆದ್ದು ಹೋದ ಮೇಲೆ ಮರಳಿ ಮುಖ ತೋರಿಸಲ್ಲ. ಇಲ್ಲಿವರೆಗೆ ಯಾವುದೇ ಅಧಿಕಾರಿಗಳು ಅಥವಾ ಜನಪ್ರತಿನಿಧಿಗಳು ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಂದ ಸಂತೆಗೆ ಬರುವ ವ್ಯಾಪಾರಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಹೊಸದಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಗ್ರಾಮದಲ್ಲಿನ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳ ಸಮಸ್ಯೆ ಕುರಿತು ಲ್ಯಾಂಡ್ ಆರ್ಮಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಒಂದು ವಾರದಲ್ಲಿ ಸಂಪೂರ್ಣ ಕೆಲಸ ಮುಗಿಸಿ ಗ್ರಾಪಂಗೆ ಹಸ್ತಾಂತರ ಮಾಡುತ್ತೇವೆ ಎಂದು ಲ್ಯಾಂಡ್ ಆರ್ಮಿ ಅಧಿಕಾರಿಗಳು ತಿಳಿಸಿದ್ದಾರೆ.
ಎಂ.ಬಿ. ಸೊನ್ನಗಿ, ಪಿಡಿಒ, ಮೋರಟಗಿ

ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳು ಇದ್ದು ಇಲ್ಲದಂತಾಗಿ ಜನರು ನೀರಿಗಾಗಿ ಪರಿತಪಿಸುವಂತಾಗಿದೆ. ಘಟಕಗಳು ತುಕ್ಕು ಹಿಡಿದು ಹಾಳಾಗಿದ್ದು ಇದುವರೆಗೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ಅಧಿಕಾರಿಗಳು ಎಚ್ಚೆತ್ತುಕೊಂಡು ಕೂಡಲೇ ಜನರಿಗೆ ಶುದ್ಧ ನೀರು ಸಿಗುವಂತೆ ಮಾಡಬೇಕು. ಇಲ್ಲದಿದ್ದರೆ ತಾಪಂ ಹಾಗೂ ಗ್ರಾಪಂ ಕಚೇರಿಗಳಿಗೆ ಬೀಗ ಜಡಿದು ಪ್ರತಿಭಟನೆ ಮಾಡುವುದು ಅನಿವಾರ್ಯ.
ಭೂತಾಳಿ ಖಾನಾಪುರ, ಗ್ರಾಮಸ್ಥ

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...