16 C
Bangalore
Thursday, December 12, 2019

ಶೂ ಖರೀದಿಯಲ್ಲ್ಲಿ ಅಕ್ರಮದ ವಾಸನೆ

Latest News

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ರಾಮನಗರ: ಸರ್ಕಾರಿ ಶಾಲೆ ಮಕ್ಕಳ ಅನುಕೂಲಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡುತ್ತಲೇ ಇರುತ್ತದೆ. ಆದರೆ, ಪ್ರತಿ ಯೋಜನೆಯಲ್ಲೂ ನುಂಗುಬಾಕರು ಹಣ ಮಾಡುವ ಜಾಡು ಹುಡುಕುತ್ತಲೇ ಇರುತ್ತಾರೆ. ಇದೀಗ ಶಾಲಾ ಮಕ್ಕಳ ಶೂ ಖರೀದಿಯಲ್ಲಿಯೂ ಹಣ ಮಾಡುವ ಕೆಲಸ ಶಿಕ್ಷಣ ಇಲಾಖೆೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಎನ್ನುವ ದೂರು ಕೇಳಿ ಬಂದಿವೆ.

ಸರ್ಕಾರಿ ಶಾಲೆ ಮಕ್ಕಳಿಗೆ ಶೂ ನೀಡುವ ಯೋಜನೆಯನ್ನು 2016-17ನೇ ಸಾಲಿನಲ್ಲಿ ಸರ್ಕಾರ ಜಾರಿಗೆ ತಂದಿದೆ. ಆದರೆ, ಇದೀಗ ಶೂ ಖರೀದಿ ವೇಳೆ ಕಮಿಷನ್ ವ್ಯಾಪಾರಕ್ಕೆ ಇಳಿದಿರುವ ಕೆಲವು ಶಾಲೆಗಳ ಶಿಕ್ಷಕ ವೃಂದ, ಗುಣಮಟ್ಟದ ಶೂ ಖರೀದಿ ಬದಲು ಕಮಿಷನ್ ಆಸೆಗೆ ಬಿದ್ದು ಕಳಪೆಮಟ್ಟದ ಶೂಗಳನ್ನು ನೀಡಲು ಮುಂದಾಗಿದೆ.

30 ರೂ.ನಿಂದ ಬಿಡ್ ಆರಂಭ: ಜಿಲ್ಲೆಯಲ್ಲಿ ಸುಮಾರು 1,400 ಸರ್ಕಾರಿ ಶಾಲೆಗಳಿದ್ದು, ಈ ಎಲ್ಲ ಮಕ್ಕಳಿಗೂ ಪ್ರತಿ ವರ್ಷ ಶೂ ಖರೀದಿಸಿ ನೀಡಬೇಕಿರುವ ಜವಾಬ್ದಾರಿ, ಆಯಾ ಶಾಲೆಯ ಮುಖ್ಯಸ್ಥರ ಮೇಲಿರುತ್ತದೆ. ಆದರೆ, ಶೂ ಖರೀದಿಯಲ್ಲಿ, ಪೂರೈಕೆದಾರರ ಬಳಿ ಕಮೀಷನ್‌ಗೆ ಬೇಡಿಕೆ ಇಡುತ್ತಿರುವ ಕೆಲ ಶಾಲಾ ಶಿಕ್ಷಕರು ಮತ್ತು ಎಸ್‌ಡಿಎಂಸಿಯವರು ಪ್ರತಿ ಜೊತೆ ಶೂ ಖರೀದಿಗೆ 30 ರೂ. ಕಮೀಷನ್‌ಗೆ ಬೇಡಿಕೆ ಇಡುತ್ತಾರೆ. ಇದು ಪೂರೈಕೆದಾರರ ನಡುವಿನ ಪೈಪೋಟಿಯಿಂದಾಗಿ ಕೆಲವು ಕಡೆಗಳಲ್ಲಿ 75 ರೂ.ವರೆಗೂ ಏರಿಕೆ ಆಗುತ್ತಿದೆ. ಒಂದು ವೇಳೆ ಪೂರೈಕೆದಾರ ಗುಣಮಟ್ಟದ ಶೂ ಪೂರೈಕೆ ಮಾಡುತ್ತೇನೆ, ಕಮಿಷನ್ ನೀಡಲು ಸಾಧ್ಯವಿಲ್ಲ ಎಂದರೆ ಅಂತಹ ಪೂರೈಕೆದಾರನನ್ನು ದೂರವಿಡುವ ಕೆಲಸವೂ ಸದ್ದಿಲ್ಲದೆ ನಡೆಯುತ್ತಿದೆ.

ನಿಯಮ ಹೇಳುವುದೇನು?: ಶೂ ಖರೀದಿಸಿ ಮಕ್ಕಳಿಗೆ ನೀಡಲು ಸರ್ಕಾರ ನಿಯಮ ರೂಪಿಸಿದೆ. ಅದರಂತೆ ಆಯಾ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಶಾಲೆಯ ಮುಖ್ಯಶಿಕ್ಷಕರು ವಿದ್ಯಾರ್ಥಿಗಳ ಹಾಜರಾತಿಗೆ ಅನುಗುಣವಾಗಿ ಶೂ ಖರೀದಿ ಮಾಡಿ ವಿತರಣೆ ಮಾಡಬೇಕು. 1ರಿಂದ 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತಲಾ 265 ರೂ., 6-8ನೇ ತರಗತಿ ವಿದ್ಯಾರ್ಥಿಗಳಿಗೆ 295 ರೂ. ಹಾಗೂ 9-10ನೇ ತರಗತಿ ವಿದ್ಯಾರ್ಥಿಗಳಿಗೆ 325 ರೂ. ವೆಚ್ಚದಲ್ಲಿ ಶೂ ಮತ್ತು ಎರಡು ಜೊತೆ ಕಾಲು ಚೀಲ ಖರೀದಿ ಮಾಡಬೇಕು ಹಾಗೂ ಸರ್ಕಾರ ನಿಗದಿ ಮಾಡಿರುವ ಬ್ರಾಂಡ್ ಶೂಗಳನ್ನೇ ಖರೀದಿ ಮಾಡಬೇಕು ಎನ್ನುವ ನಿಯಮವೂ ಇದೆ. ಆದರೆ, ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಕೆಲವು ಕಡೆಗಳಲ್ಲಿ ಶಿಕ್ಷಕರು ನೇರವಾಗಿ ಕಮಿಷನ್ ಆಸೆ ಬಿದ್ದರೆ, ಕೆಲವು ಶಾಲೆಗಳಲ್ಲಿ ಶಿಕ್ಷಣ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳನ್ನು ಶಿಫಾರಸು ಮಾಡುವ ಕೆಲಸ ಮಾಡುತ್ತಿದೆ ಎನ್ನುವ ಆರೋಪಗಳೂ ಕೇಳಿ ಬಂದಿವೆ. ಗುಣಮಟ್ಟ ಖಾತ್ರಿ ಮಾಡುವವರು ಯಾರೂ ಇಲ್ಲ.

ಸರ್ಕಾರದಿಂದ ಹಣ ಬಂದಿಲ್ಲ: ಮಧ್ಯಮ ಅವಧಿ ಪರೀಕ್ಷೆಗಳು ಆರಂಭಗೊಂಡು ಇನ್ನೇನು ದಸರಾ ರಜೆ ಆರಂಭವಾಗುವ ಸಮಯವಾಗಿದೆ. ಆದರೆ ಜಿಲ್ಲೆಯಲ್ಲಿ ಈಗ ಮಕ್ಕಳಿಗೆ ಶೂ ವಿತರಣೆ ನಡೆಯುತ್ತಿದೆ. ಆದರೆ, ವಿಳಂಬಕ್ಕೆ ಸರ್ಕಾರ ಹಣ ಮಂಜೂರು ಮಾಡದೇ ಇರುವ ಕಾರಣವನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಇದರ ಹೊರತಾಗಿಯೂ ಇಲಾಖೆ ನಿರ್ದೇಶನದ ಮೇರೆಗೆ ಪೂರೈಕೆದಾರರ ಮನವೊಲಿಸಿ, ಸರ್ಕಾರದಿಂದ ಹಣ ಬಂದ ನಂತರ ಹಣ ನೀಡುವ ಭರವಸೆ ನೀಡಿ ಶೂ ಖರೀದಿ ಮಾಡಿ ಮಕ್ಕಳಿಗೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಈವರೆಗೆ ಜಿಲ್ಲೆಯಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಶಾಲೆಗಳಲ್ಲಿ ಶೂ ಖರೀದಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಗುಣಮಟ್ಟದ ಕಾಳಜಿ ತೋರಿ: ಸರ್ಕಾರಿ ಶಾಲೆ ಮಕ್ಕಳನ್ನು ಖಾಸಗಿ ಶಾಲೆ ಮಕ್ಕಳಿಗೆ ಸಮನಾಗಿ ಕಾಣುವ ಉದ್ದೇಶದಿಂದಲೇ ಶೂ ಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿದೆ. ಆದರೆ, ಈಗ ಕೆಲವು ಶಾಲೆಗಳಲ್ಲಿ ಕಮಿಷನ್ ಆಸೆಗಾಗಿ ಕಳಪೆ ಶೂಗಳನ್ನು ನೀಡುತ್ತಿರುವ ಬಗ್ಗೆ ಶಿಕ್ಷಣ ಇಲಾಖೆೆ ಹಿರಿಯ ಅಧಿಕಾರಿಗಳು ಎಚ್ಚರವಹಿಸಬೇಕಿದೆ.

ಕೊಟೇಷನ್ ಕರೆದು ನಂತರವಷ್ಟೇ ಶೂ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಶೂ ಖರೀದಿಯಲ್ಲಿ ಶಿಕ್ಷಕರು ಕಮಿಷನ್ ಪಡೆಯುತ್ತಿರುವ ಮಾಹಿತಿ ಇಲ್ಲ. ಕಳಪೆ ಶೂಗಳ ಬಗ್ಗೆಯೂ ಪರಿಶೀಲನೆ ನಡೆಸುತ್ತೇನೆ.
ಎಂ.ಎಚ್. ಗಂಗಮಾರೇಗೌಡ
ಡಿಡಿಪಿಐ , ಸಾರ್ವಜನಿಕ ಶಿಕ್ಷಣ ಇಲಾಖೆ, ರಾಮನಗರ

30-75 ರೂ.ವರೆಗೂ ಕಮಿಷನ್ ಬೇಕೆಂದು ಪಟ್ಟು ಹಿಡಿಯುತ್ತಾರೆ. ಗುಣಮಟ್ಟದ ಶೂಗಳ ಬಗ್ಗೆ ಶಿಕ್ಷಕರು ತಲೆಕೆಡಿಸಿ ಕೊಳ್ಳುತ್ತಿಲ್ಲ. ಗುಣಮಟ್ಟ ಕೊಡುತ್ತೇವೆ ಎಂದರೆ ನೀವು ಪೂರೈಕೆಯೇ ಮಾಡಬೇಡಿ ಎನ್ನುತ್ತಾರೆ.
ಹೆಸರು ಹೇಳಲಿಚ್ಚಿಸದ ಪೂರೈಕೆದಾರ

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...