ಶೃಂಗೇರಿಯಲ್ಲಿ ಕೆಎಸ್‌ಆರ್‌ಟಿಸಿ ಬಾಧಿತ ಸೇವೆ

28sri-1 bus

ಶೋಭಾ ಅನಂತಯ್ಯ ಶೃಂಗೇರಿ
ಜಿಲ್ಲೆಯ ಪ್ರಮುಖ ಪ್ರವಾಸಿತಾಣ ಹಾಗೂ ಧಾರ್ಮಿಕ ಕೇಂದ್ರ ಶೃಂಗೇರಿಗೆ ವರ್ಷಕ್ಕೆ 50ಲಕ್ಷಕ್ಕೂ ಅಧಿಕ ಪ್ರವಾಸಿಗರು ಶ್ರೀಶಾರದಾಂಬಾ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಆದರೆ ಶೃಂಗೇರಿಗೆ ಬರಲು ರಾಜ್ಯದ ಪ್ರಮುಖ ಸ್ಥಳಗಳು ಹಾಗೂ ತಾಲೂಕಿನ ಗ್ರಾಮೀಣ ಭಾಗದಿಂದ ಬರುವವರಿಗೆ ಸರಿಯಾದ ಕೆಎಸ್‌ಆರ್‌ಟಿಸಿ ಬಸ್‌ಗಳು ಇಲ್ಲದಿರುವುದರಿಂದ ಪ್ರವಾಸಿಗರು ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ.
ದೂರದ ಊರುಗಳಿಂದ ಜನಸಾಮಾನ್ಯರು ಹೆಚ್ಚಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಸರ್ಕಾರ ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್‌ಸೇವೆ ಆರಂಭವಾದಾಗಿನಿಂದ ಬಸ್‌ನಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಪ್ರಯಾಣಿಕರ ಸಂಖ್ಯೆಗೆ ತಕ್ಕಂತೆ ಬಸ್‌ಗಳು ಇಲ್ಲದಿರುವುದರಿಂದ ಬಸ್‌ನಲ್ಲಿ ಕಿಕ್ಕಿರಿದು ನಿಂತು ಪ್ರಯಾಣಿಸುವಂತಾಗಿದೆ.
ಶೃಂಗೇರಿಗೆ ಬರುವ ಭಕ್ತರು, ಗ್ರಾಮೀಣ ಭಾಗದ ಪ್ರಯಾಣಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲ ಕಾಲಕ್ಕೆ ರಾಜ್ಯ ಸಾರಿಗೆ ಸಂಸ್ಥೆಯಿಂದ ತಾಲೂಕಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಪ್ರವಾಸಿ, ಧಾರ್ಮಿಕ ಸ್ಥಳಗಳಿಗೆ ಬಸ್‌ವ್ಯವಸ್ಥೆ ಕಲ್ಪಿಸುವುದು ಕರ್ತವ್ಯ. ಆದರೆ ಈ ಹಿಂದೆ ಶೃಂಗೇರಿಯಿಂದ ಮಡಿಕೇರಿ, ಬೆಳಗಾವಿ, ಕಾರವಾರ, ಧಾರವಾಡ, ರಾಯಚೂರು, ಹೊಸಪೇಟೆ, ಕೊಲ್ಲೂರು, ಧರ್ಮಸ್ಥಳ, ಮಂಗಳೂರು, ರಾಯಚೂರು ಕಡೆಗಳಿಗೆ ಇದ್ದ ಬಸ್ ಸೇವೆಗಳನ್ನು ನಿಲ್ಲಿಸಿದೆ. ಸದ್ಯ ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಬೆಂಗಳೂರು, ಹಾಸನ, ಉಡುಪಿ ಕಡೆ ಸೇರಿ ಒಟ್ಟು 47 ಸರ್ಕಾರಿ ಬಸ್‌ಗಳು ಸಂಚಾರ ನಡೆಸುತ್ತಿವೆ.
ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಯಾಣಿಕರು ಇರುವ ಮಾರ್ಗದಲ್ಲಿ ಸಂಚರಿಸಬೇಕಾದ ಕೆಎಸ್‌ಆರ್‌ಟಿಸಿ ಬಸ್‌ಗಳು ಪ್ರಯಾಣಿಕರು ಇಲ್ಲದ ಮಾರ್ಗಗಳಲ್ಲಿ ಸಂಚರಿಸುತ್ತಿರುವುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗ್ಗೆ 9 ಗಂಟೆವರೆಗೆ ಮಾತ್ರ ಪಟ್ಟಣದ ಮುಖ್ಯಬೀದಿಗೆ ಬರುವ ಕೆಎಸ್‌ಆರ್‌ಟಿಸಿ ಬಸ್‌ಗಳು ಮತ್ತೆ ಸಂಜೆ 6 ಗಂಟೆ ನಂತರ ಮುಖ್ಯಬಿದಿಯಲ್ಲಿ ಸಂಚರಿಸುತ್ತಿವೆ. ದೇವಾಲಯಕ್ಕೆ ಹಾಗೂ ಗ್ರಾಮೀಣ ಪ್ರದೇಶಗಳಿಂದ ಪಟ್ಟಣಕ್ಕೆ ಬರುವ ಜನರು ಹೆಚ್ಚಾಗಿ ಬೆಳಗ್ಗೆ ವೇಳೆ ಬರುತ್ತಾರೆ. ಆದರೆ ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖ್ಯ ಬೀದಿಗೆ ಬಾರದೆ ಬಸ್‌ಸ್ಟಾೃಂಡ್‌ನಿಂದ ಭಕ್ತಂಪುರದ ಮೂಲಕ ವೇಲ್‌ಕಮ್ ಗೇಟ್‌ಗೆ ಬರುತ್ತವೆ. ಕೆಎಸ್‌ಆರ್‌ಟಿಸಿ ಬಸ್ ಹತ್ತಲು ಬಸ್ ನಿಲ್ದಾಣಕ್ಕೆ ಹೋಗಬೇಕು. ಪ್ರವಾಸಿಗರು ಹಾಗೂ ಸ್ಥಳೀಯರ ಅನುಕೂಲಕ್ಕಾಗಿ ಮುಖ್ಯಬೀದಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸಬೇಕು ಎಂಬುದು ಸ್ಥಳೀಯರ ಒತ್ತಾಯ.

Share This Article

ಉಪ್ಪಿನಕಾಯಿ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಈ ವರ್ಷ ಗೂಗಲ್​ನಲ್ಲಿ ಅತಿ ಹೆಚ್ಚು ಹುಡುಕಿದ ಪಾಕವಿಧಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಇದರಲ್ಲಿ ಉಪ್ಪಿನಕಾಯಿ ಭಾರತದಲ್ಲಿ…

ಟಾಯ್ಲೆಟ್​​ನ ಕೊಳಕು ವಾಸನೆ, ಹಳದಿ ಕಲೆ ತೆಗೆದುಹಾಕುವುದೇಗೆ?; ಇಲ್ಲಿದೆ ಸಿಂಪಲ್​ ವಿಧಾನ | Tips

ಮನೆಯನ್ನು ಸ್ವಚ್ಛಗೊಳಿಸಲು ಮತ್ತು ಅಲಂಕರಿಸಲು ಜನರು ಶ್ರಮಿಸುತ್ತಾರೆ. ಹೊರಗಿನಿಂದ ಅವರ ಮನೆಯು ಸಾಕಷ್ಟು ಐಷಾರಾಮಿಯಾಗಿ ಕಾಣುತ್ತದೆ.…

ಚಳಿಗಾಲದಲ್ಲಿ ಬಿಸಿ ಚಹಾ ಮತ್ತು ಕಾಫಿ ಸೇವಿಸುತ್ತಿದ್ದೀರಾ; ಅಪಾಯ ತಪ್ಪಿದಲ್ಲ.. ಎಚ್ಚರದಿಂದಿರಿ | Health Tips

ಚಳಿಗಾಲ ಬಂದ ಕೂಡಲೆ ಟೀ, ಕಾಫಿ ಸೇವನೆ ಹೆಚ್ಚುತ್ತದೆ. ಈ ಬಿಸಿ ಪಾನೀಯವು ದೇಹಕ್ಕೆ ಶಾಖವನ್ನು…