ಚಿತ್ರದುರ್ಗ: ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆಗಳೂ ಮುಖ್ಯ ಎಂದು ಡಿಡಿಪಿಐ ಎಂ.ಆರ್. ಮಂಜುನಾಥ್ ಹೇಳಿದರು.
ನಗರದ ಎಸ್‌ಆರ್‌ಬಿಎಂಎಸ್ ರೋಟರಿ ಬಾಲಭವನದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ರಾಜ್ಯ ಗ್ರೇಡ್ -1 ದೈಹಿಕ ಶಿಕ್ಷಣ ಶಿಕ್ಷಕರ ಜಿಲ್ಲಾ ಹಾಗೂ ತಾಲೂಕು ಚುನಾಯಿತ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಪಠ್ಯೇತರ ಚಟುವಟಿಕೆಗಳ ಮಹತ್ವದ ಅರಿವು ಮೂಡಿಸುವಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಅತಿ ಮುಖ್ಯವಾಗಿದೆ. ಮಾನಸಿಕ ಸಧೃಡತೆಯೊಂದಿಗೆ ದೈಹಿಕವಾಗಿಯೂ ಮಕ್ಕಳು ಸಬಲರಾಗಿರಬೇಕು. ಇದಕ್ಕೆ ಕ್ರೀಡೆ ಸಹಕಾರಿಯಾಗಿದೆ.
ದೈಹಿಕ ಶಿಕ್ಷಣ ಶಿಕ್ಷಕರಿಂದ ಮಕ್ಕಳಲ್ಲಿ ಶಿಸ್ತು, ಸಂಯಮ, ಶಿಷ್ಠಾಚಾರ ಪಾಲನೆ ಅರಿವಿನ ವಿನೊಂದಿಗೆ ಸಮಯ ಪ್ರಜ್ಞೆಯ ತಿಳಿವಳಿಕೆ ಮೂ ಡುತ್ತದೆ.ಅವರಲ್ಲಿ ನಾಯಕತ್ವ ಗುಣವೂ ಬೆಳೆಯುತ್ತದೆ ಎಂದರು. ಪೌಢಶಾಲಾ ಸಹ ಶಿಕ್ಷಕರು ಸಂಘದ ಜಿಲ್ಲಾಧ್ಯಕ್ಷ ಶಿವಣ್ಣ ಮಾತನಾಡಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘಕ್ಕೆ ನಮ್ಮ ಸಂಘ ಸದಾ ಬೆಂಬಲವಾಗಿ ಇರಲಿದೆ ಎಂದರು. ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರಪ್ಪ ಮಾತನಾಡಿ, ದೈಹಿಕ ಶಿಕ್ಷಣ ಶಿಕ್ಷಕರಿಲ್ಲದ ಶಾಲೆ ದೇವರಿಲ್ಲದ ಗುಡಿ ಇದ್ದಂತೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಸಹಾಯಕ ಚುನಾವಣಾಧಿಕಾರಿ ಮಹಾಲಿಂಗಪ್ಪ, ಡಿಪಿಇಒ ಚಿದಾನಂದಪ್ಪ, ಟಿಪಿಇಒ ಚನ್ನಬಸಪ್ಪ, ದಿವಾಕರ, ರಾಜಪ್ಪ, ನಾಗೇಂದ್ರಪ್ಪ, ಯೋಗೀಶ್ ಕೊಂಡಾಪುರ, ಲತಾ, ಅಶೋಕ್, ಮೈಲಾರಪ್ಪ, ಕೆಂಚಪ್ಪ, ಮಂಜುನಾಥ್ ಮತ್ತಿತರರು ಇದ್ದರು. ವಿಜಯಪ್ರಸಾದ್ ಪ್ರಾ ರ್ಥಿಸಿದರು. ಚನ್ನಬಸಪ್ಪ ಸ್ವಾಗತಿಸಿದರು. ಪಾಂಡುರಂಗಪ್ಪ ಪ್ರಸ್ತಾವಿಕವಾಗಿ ಮಾತನಾಡಿದರು. ಕಲ್ಲೇಶ್ ನಿರೂಪಿಸಿದರು.
ಶೈಕ್ಷಣಿಕ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆಗಳು ಮುಖ್ಯ

Toilet ಬಳಸಿದ ನಂತರ ಈ ತಪ್ಪು ಎಂದಿಗೂ ಮಾಡಬೇಡಿ: ಅಪಾಯ ಕಾದಿದೆಯಂತೆ!
Toilet : ನಮಲ್ಲಿ ಹಲವರು ಶೌಚಾಲಯ (ಪಾಶ್ಚಾತ್ಯ ಶೌಚಾಲಯ) ಬಳಸಿದ ನಂತರ ಟಾಯ್ಲೆಟ್ನ ಮುಚ್ಚುಳ ಮುಚ್ಚದೇ…
ಬೇಸಿಗೆಯಲ್ಲಿ ನಿಮ್ಮ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ, ಮೊಸರು ಅಥವಾ ಮಜ್ಜಿಗೆ?Summer Health Tips
Summer Health Tips: ಬೇಸಿಗೆಯ ಸುಡುವ ಬಿಸಿಲಿನಲ್ಲಿ ಮಧ್ಯಾಹ್ನವಾಗಲಿ ಅಥವಾ ಸಂಜೆಯಾಗಲಿ, ನಮ್ಮ ದೇಹವನ್ನು…
Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು
Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…