More

  ಶ್ರಮಜೀವಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

  ಬೀದರ್: ತಾಲ್ಲೂಕಿನ ಕೊಳಾರ(ಕೆ) ಗ್ರಾಮದ ಶ್ರಮಜೀವಿ ಆಂಗ್ಲ ಮಾಧ್ಯಮ ವಸತಿ ಶಾಲೆಯು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದು ಗಮನ ಸೆಳೆದಿದೆ.
  ಪರೀಕ್ಷೆ ಬರೆದ ಎಲ್ಲ 27 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 4 ಅಗ್ರಶ್ರೇಣಿ, 19 ಪ್ರಥಮ ದರ್ಜೆ ಹಾಗೂ 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಗೋವಿಂದ ಶಂಕರ ಶೇ 90, ಶ್ರೀನಿವಾಸ್ ಶೇ 87, ರೋಹನ್ ಜಾಧವ್ ಶೇ 86.70, ಶಿವಾಜಿ ಜಮಾದಾರ್ ಶೇ 85.4 ರಷ್ಟು ಅಂಕ ಗಳಿಸಿದ್ದಾರೆ.
  ಶಾಲೆಯಲ್ಲಿ 8ನೇ ತರಗತಿಯಲ್ಲಿ ಶೇ 70ಕ್ಕಿಂತ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುತ್ತಿದೆ. ಅವರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಲು ಅಣಿಗೊಳಿಸಲಾಗುತ್ತಿದೆ. ಶಾಲೆ ಫಲಿತಾಂಶ ಇದಕ್ಕೆ ನಿದರ್ಶನವಾಗಿದೆ ಎಂದು ಗ್ಲೊಬಲ್ ಮಲ್ಟಿ ಡೆವಲೆಪ್‍ಮೆಂಟ್ ಟ್ರಸ್ಟ್ ಅಧ್ಯಕ್ಷ ವೆಂಕಟರಾವ್ ಮಾಯಿಂದೆ, ಕಾರ್ಯದರ್ಶಿ ಶರ್ಮಿಲಾ ಮಾಯಿಂದೆ ಹಾಗೂ ಮುಖ್ಯಶಿಕ್ಷಕರು ತಿಳಿಸಿದ್ದಾರೆ.
  ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದೇ ಶಾಲೆಯ ಧ್ಯೇಯವಾಗಿದೆ. ವಿದ್ಯಾರ್ಥಿಗಳ ಸಾಧನೆ ಸಂತಸ ಉಂಟು ಮಾಡಿದೆ ಎಂದು ಹೇಳಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts