ಶ್ರೀ ಮಹಂತ ದೇಶಿಕೇಂದ್ರ ಸ್ವಾಮೀಜಿಗೆ ತುಲಾಭಾರ

Latest News

ಮಳೆಗೆ 70 ಕೋಟಿ ರೂ. ನಷ್ಟ

ಕೊಪ್ಪ: ಈ ಬಾರಿ ಸುರಿದ ಭಾರಿ ಮಳೆಗೆ ತಾಲೂಕಿನಲ್ಲಿ ಮನೆ, ಜಮೀನು, ರಸ್ತೆ, ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು ಅಂದಾಜು 70 ಕೋಟಿ ರೂ....

ಭ್ರಷ್ಟಾಚಾರದ ಆರೋಪಕ್ಕೆ ತಕ್ಕ ಉತ್ತರ

ಬೀರೂರು: ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕಾಂಗ್ರೆಸ್ ಮುಖಂಡರಿಗೆ ಬೀರೂರು ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದು ಶಾಸಕ ಬೆಳ್ಳಿ ಪ್ರಕಾಶ್...

ರಫೇಲ್​ ತೀರ್ಪು ಸತ್ಯಕ್ಕೆ ದೊರೆತ ಗೆಲುವೆಂದು ಬಣ್ಣಿಸಿದ ಕೇಂದ್ರ ಸಚಿವ ರವಿಶಂಕರ್​ ಪ್ರಸಾದ್: ಕ್ಷಮೆ ಕೇಳುವಂತೆ ರಾಹುಲ್​ಗೆ ಆಗ್ರಹ​

ನವದೆಹಲಿ: ರಫೇಲ್​ ಒಪ್ಪಂದದ ವಿಚಾರವಾಗಿ ಕಾಂಗ್ರೆಸ್​ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್​ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಸಂತಸ ಮನೆಮಾಡಿದೆ. ಇದು ಸತ್ಯಕ್ಕೆ...

ನನ್ನ ತಂದೆಯ ಅನಾರೋಗ್ಯದ ಸ್ಥಿತಿಯನ್ನು ರಾಹುಲ್​ ಗಾಂಧಿ ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದರು, ಹೀಗೆಂದವರು ಯಾರು?

ಪಣಜಿ: ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ ನನ್ನ ತಂದೆಯ ಅನಾರೋಗ್ಯದ ಸ್ಥಿತಿಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದರು ಎಂದು ಮಾಜಿ ರಕ್ಷಣಾ ಸಚಿವ ಮನೋಹರ್​...

ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ

ಕಾರ್ಗಲ್: ಪಪಂ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ಒದಗಿಸುವುದು ಬಿಜೆಪಿಯ ಆದ್ಯ ಕರ್ತವ್ಯ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ.ಮೇಘರಾಜ್ ತಿಳಿಸಿದರು. ಕಾರ್ಗಲ್​ನಲ್ಲಿ ಗುರುವಾರ...

ಶಿಕಾರಿಪುರ: ಅನಾದಿ ಕಾಲದಿಂದಲೂ ಮಠ ಮಂದಿರಗಳು ಭಕ್ತರಿಗೆ ಮಾರ್ಗದರ್ಶನ ನೀಡುತ್ತ ಸಮಾಜದ ಸ್ವಾಸ್ಥ್ಯ ಕಾಪಾಡುತ್ತ ಬಂದಿವೆ. ಮಠಗಳಿಲ್ಲದೆ ಸಮಾಜವಿಲ್ಲ, ಸಮಾಜವಿಲ್ಲದೆ ಮಠ ಪರಂಪರೆಗಳ ಉಳಿವು ಸಾಧ್ಯವಿಲ್ಲ ಎಂದು ಶ್ರೀಶೈಲ ಜಗದ್ಗುರು ಡಾ. ಶ್ರೀ ಚನ್ನಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.

ತೊಗರ್ಸಿಯಲ್ಲಿ ಆಯೋಜಿಸಿದ್ದ ಶ್ರೀ ಮಹಂತ ದೇಶಿಕೇಂದ್ರ ಸ್ವಾಮೀಜಿ 60ನೇ ಪಟ್ಟಾಧಿಕಾರ ಮಹೋತ್ಸವ ಸಮಾರಂಭದಲ್ಲಿ ಶುಕ್ರವಾರ ಆಶೀರ್ವಚನ ನೀಡಿದ ಅವರು, ಸಮಾಜ ಪರಿಶುದ್ಧವಾಗಲು ಮಠಾಧೀಶರು ಅವಶ್ಯ. ಮಠಗಳಿಗೆ ಭಕ್ತರೇ ಸಂಪತ್ತು. ಸ್ವಾಮೀಜಿಗಳು ಹಾಗೂ ಭಕ್ತರು ಒಬ್ಬರನ್ನೊಬ್ಬರು ಬಿಟ್ಟಿರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಸ್ವಾಮೀಜಿಗಳಿಗೆ ಒಳ್ಳೆಯ ಉತ್ತರಾಧಿಕಾರಿ ಸಿಗಲು ಪುಣ್ಯಬೇಕು. ಅಂತಹ ಪುಣ್ಯವನ್ನು ಮಳೇ ಹಿರೇಮಠದ ಮಹಂತ ಶ್ರೀಗಳು ಪುಣ್ಯ ಮಾಡಿದ್ದಾರೆ. ಅವರ ಉತ್ತರಾಧಿಕಾರಿಯಾಗಿ ಉತ್ತಮ ಗುರುಗಳು ಸಿಕ್ಕಿದ್ದಾರೆ ಎಂದರು.

ಶ್ರೀ ಮಹಂತ ದೇಶಿಕೇಂದ್ರ ಸ್ವಾಮೀಜಿಗೆ ತುಲಾಭಾರ ಸಂದಭೋಚಿತವಾಗಿದೆ. ಒಂದೇ ದಿನ ಎಪ್ಪತ್ತು ತುಲಾಭಾರಗಳಿಗೆ ಮಹಂತ ಶ್ರೀಗಳು ಮಾನ್ಯರಾಗಿದ್ದಾರೆ. ಇಂತಹ ಭಕ್ತರನ್ನು ಪಡೆದ ಶ್ರೀಗಳು ನಿಜಕ್ಕೂ ಪುಣ್ಯವಂತರು. ತಮ್ಮ ಸರಳ ಸಜ್ಜನಿಕೆಯಿಂದಲೇ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರ ಸಂಕಲ್ಪಶಕ್ತಿಯ ಫಲವಾಗಿ ಇಂದು ತೊಗರ್ಸಿ ಕ್ಷೇತ್ರ ಕಂಗೊಳಿಸುತ್ತಿದೆ. ಆದ್ದರಿಂದ ಲಿಂಗೈಕ್ಯ ಶ್ರೀಶೈಲ ಜಗದ್ಗುರುಗಳು ಶಿರಾಳಕೊಪ್ಪದ ಶ್ರೀಶೈಲ ಸಂಸ್ಥಾನದ ಐಟಿಐ ಶಿಕ್ಷಣ ಸಂಸ್ಥೆಯನ್ನು ಇವರಿಗೆ ವಹಿಸಿಕೊಟ್ಟಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನೂತನ ಗುರುಗಳಾದ ಅಭಿನವ ಮಹಂತ ಶ್ರೀಗಳನ್ನು ಹಿಂದೆ ಸೊರಬ ತಾಲೂಕು ಕ್ಯಾಸನೂರು ಮಠಕ್ಕೆ ಬಿಲ್ವಮರದ ಕೆಳಗೆ ಇರುವ ಗದ್ದುಗೆ ಎದುರು ಪಟ್ಟಾಧಿಕಾರ ಮಾಡಲಾಗಿತ್ತು. ಬಳಿಕ ಅವರು ಆ ಭಾಗದ ಭಕ್ತರ ಸಹಕಾರದಿಂದ ಮಠವನ್ನು ದೊಡ್ಡದಾಗಿ ಬೆಳೆಸಿ ಅಭಿವೃದ್ಧಿ ಮಾಡಿದ್ದಾರೆ. ಅದೇ ರೀತಿ ಅವರು ತೊಗರ್ಸಿ ಮಠವನ್ನೂ ಅಭಿವೃದ್ಧಿಕಡೆಗೆ ಕೊಂಡೊಯ್ಯಬೇಕು ಎಂದು ಹೇಳಿದರು.

ಶ್ರೀ ಮಹಂತ ದೇಶಿಕೇಂದ್ರ ಸ್ವಾಮೀಜಿ, ತೊಗರ್ಸಿ ಪಂಚವಣ್ಣಿಗೆ ಮಠದ ಶ್ರೀ ಚನ್ನವೀರದೇಶಿಕೇಂದ್ರ ಸ್ವಾಮೀಜಿ, ಹಿರೇಮಾಗಡಿ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಮಹೋತ್ಸವ ಯಶಸ್ಸಿಗೆ ಕಾರಣರಾದವರನ್ನು ಸನ್ಮಾನಿಸಲಾಯಿತು.

ಈಗ ನನ್ನ ಜವಾಬ್ದಾರಿ ಜಾಸ್ತಿಯಾಗಿದೆ. ಉಜ್ಜಯಿನಿ ಜಗದ್ಗುರುಗಳು, ಶ್ರೀಶೈಲ ಜಗದ್ಗುರುಗಳ ಆಶೀರ್ವಾದ ಯಾವತ್ತೂ ಶ್ರೀ ಮಠದ ಭಕ್ತರ ಮೇಲಿರಬೇಕು. ನನಗೆ ಇಂತಹ ಶ್ರೇಷ್ಠ ಸ್ಥಾನವನ್ನು ನೀಡಿದ ಶ್ರೀ ಮಹಂತ ದೇಶೀಕೇಂದ್ರ ಶಿವಾಚಾರ್ಯರ ಮಾರ್ಗದರ್ಶನದಲ್ಲಿ ಶ್ರೀಮಠದ ಅಭಿವೃದ್ಧಿಗೆ ಶ್ರಮಿಸುತ್ತೇನೆ.

ಶ್ರೀ ಅಭಿನವ ಮಹಂತ ಸ್ವಾಮೀಜಿ

- Advertisement -

Stay connected

278,465FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...