ಸಿದ್ದಾಪುರ: ಇತಿಹಾಸ ಪ್ರಸಿದ್ದ ಐದ್ರೋಡಮ್ಮ ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ 16ನೇ ವರ್ಷದ ದೀಪಾವಳಿ ಹಬ್ಬದ ಅದ್ದೂರಿ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.
ವಿವಿಧ ಜಿಲ್ಲೆಗಳ ಸಾವಿರಾರು ಭಕ್ತರು ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಬೆಳಗಿನಿಂದಲೇ ಅಪಾರ ಸಂಖ್ಯೆಯ ಭಕ್ತರು ಶ್ರದ್ಧಾಭಕ್ತಿಯಿಂದ ದೇವಸ್ಥಾನಕ್ಕೆ ಆಗಮಿಸಿ ಇಷ್ಟಾರ್ಥ, ಹರಕೆಗಳನ್ನು ತೀರಿಸುವ ಮೂಲಕ ಪುನೀತರಾದರು. ಪೂಜೋತ್ಸವದಲ್ಲಿ ಪಾಲ್ಗೊಂಡ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ದೇವಾಲಯಕ್ಕೆ ಭೇಟಿ ನೀಡಿ ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಅರ್ಚಕ ತಿರುಮಲ ರಾಜ ಮಾತನಾಡಿ, ಇತಿಹಾಸ ಪ್ರಸಿದ್ಧ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದೀಪಾವಳಿಯಂದು ಅದ್ದೂರಿಯಾಗಿ ವಾರ್ಷಿಕ ಉತ್ಸವ ಆಚರಿಸಲಾಗಿದ್ದು, ಜಿಲ್ಲೆ ಹಾಗೂ ರಾಜ್ಯದ ನಾನಾ ಭಾಗಗಳಿಂದ ಅಪಾರ ಸಂಖ್ಯೆಯ ಭಕ್ತರುಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು.
ದೇವಾಲಯದ ಅಧ್ಯಕ್ಷ ರವಿಕುಮಾರ್, ಸಮಿತಿಯ ಪ್ರಮುಖರಾದ ಜವರಯ್ಯ, ರಮೇಶ, ಗಣೇಶ, ಪ್ರಸಾದ್, ಜಯಣ್ಣ, ಚಂದ್ರ ಸೇರಿದಂತೆ ಸಮಿತಿಯ ಪ್ರಮುಖರು ಹಾಗೂ ಗ್ರಾಮಸ್ಥರು ಹಾಜರಿದ್ದರು.