16 C
Bangalore
Saturday, December 7, 2019

ಸಂಗೀತ ಕಲೆಯಿಂದ ಭಾರತೀಯ ಸಂಸ್ಕೃತಿ ಉಳಿವು

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಶಿಗ್ಗಾಂವಿ: ಸಂಗೀತ ಕಲೆ ಉಳಿದಾಗ ಮಾತ್ರ ಭಾರತೀಯ ಸಂಸ್ಕೃತಿ ಉಳಿಸಲು ಸಾಧ್ಯ. ಚುನಾಯಿತ ಪ್ರತಿನಿಧಿಗಳು ಕಟ್ಟಡ ಕಟ್ಟುವುದಕ್ಕಿಂತ ಕಲೆಗಳ ಉಳಿವಿಗೆ ಸ್ಪಂದಿಸಬೇಕು. ಅಂದಾಗ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದು ವಿರಕ್ತ ಮಠದ ಸಂಗನಬಸವ ಸ್ವಾಮೀಜಿ ಹೇಳಿದರು.

ಪಟ್ಟಣದ ವಿರಕ್ತ ಮಠದ ಸಂಗನಬಸವ ಮಂಗಲ ಭವನದಲ್ಲಿ ಗಾನಯೋಗಿ ಪಂ. ಪುಟ್ಟರಾಜ ಕವಿ ಗವಾಯಿಗಳವರ ಕಲಾ ಸಂಸ್ಥೆ ಭಾನುವಾರ ಆಯೋಜಿಸಿದ್ದ ಪಂ. ಪುಟ್ಟರಾಜ ಕವಿ ಗವಾಯಿಗಳವರ 9ನೇ ವರ್ಷದ ಪುಣ್ಯ ಸ್ಮರಣೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಹಾವೇರಿಯ ಡಾ.ಪುಷ್ಪಾವತಿ ಶೆಲವಡಿಮಠ ಮಾತನಾಡಿ, ಪುಟ್ಟರಾಜರು ಕೇವಲ ಸಂತ ಶರಣರಲ್ಲ. ಅವರೊಬ್ಬ ದೈವೀ ಪುರುಷರು. 30ಕ್ಕೂ ಹೆಚ್ಚು ವಾದ್ಯಗಳನ್ನು ನುಡಿಸಬಲ್ಲ ಜಗತ್ತಿನ ಏಕೈಕ ಕಲಾವಿದರಾಗಿದ್ದರು. ಅಂಧರ ಬಾಳಿಗೆ ಬೆಳಕು ನೀಡಿ ಅವರ ಬದುಕಿಗೆ ಭದ್ರ ಬುನಾದಿ ಹಾಕಿದ ಪುಟ್ಟರಾಜರ ಸ್ಮರಣೆಗಾಗಿ ಮಾರ್ಚ್ 3ರಂದು ಅಂಧರ ದಿನ ಆಚರಿಸುವ ಘೊಷಣೆ ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು.

ಭರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಮಾತನಾಡಿ, ಪುಟ್ಟರಾಜ ಗವಾಯಿಗಳ ಸ್ಮರಣೆಗಾಗಿ ಕಲಾಭವನ ಅವಶ್ಯವಾಗಿದೆ. ಸಂಗೀತ ಕಲಿಯುವ ವಿದ್ಯಾರ್ಥಿಗಳಿಗೆ ಅದೊಂದು ಪಾಠಶಾಲೆಯಾಗಬೇಕು. ಹೀಗಾಗಿ ಸಂಸ್ಥೆಯಿಂದ 2 ಲಕ್ಷ ರೂ. ನೆರವು ನೀಡುತ್ತೇನೆ ಎಂದು ಭರವಸೆ ನೀಡಿದರು.

ತಹಸೀಲ್ದಾರ್ ಶಿವಾನಂದ ಗಾಳಿ, ಎಪಿಎಂಸಿ ಅಧ್ಯಕ್ಷೆ ಪ್ರೇಮಾ ಪಾಟೀಲ, ಪುಟ್ಟರಾಜ ಗವಾಯಿಗಳ ಸಂಸ್ಥೆಯ ಅಧ್ಯಕ್ಷ ಫಕ್ಕೀರೇಶ ಮಾಸ್ತರ ಕೊಂಡಾಯಿ ಮಾತನಾಡಿದರು.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಗೀತ ಪಾಠಶಾಲೆಯ ವಿದ್ಯಾರ್ಥಿಗಳು ಹಾಗೂ ಹಿರಿಯ ಕಲಾವಿದರು ನುಡಿನಮನ ಸಲ್ಲಿಸಿದರು. ರಮೇಶ ಸಾತಣ್ಣವರ, ಶಿವಾನಂದ ಹೊಸಮನಿ ಕಾರ್ಯಕ್ರಮ ನಿರ್ವಹಿಸಿದರು.

ಸಂಸ್ಥೆಯ ಗೌರವಾಧ್ಯಕ್ಷ ಕೊಟ್ರೇಶ ಮಾಸ್ತರ ಬೆಳಗಲಿ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಅಧ್ಯಕ್ಷೆ ಪಾರವ್ವ ಆರೇರ, ಕೆಸಿಸಿ ಬ್ಯಾಂಕ್ ನಿರ್ದೇಶಕ ಗಂಗಾಧರ ಸಾತಣ್ಣವರ, ಎಪಿಎಂಸಿ ನಿರ್ದೇಶಕ ತಿಪ್ಪಣ್ಣ ಸಾತಣ್ಣವರ, ಹಿರಿಯ ಕಲಾವಿದ ಹನುಮಂತಪ್ಪ ಕಾಮನಹಳ್ಳಿ, ಮುಖಂಡರಾದ ಶಿವಾನಂದ ಮ್ಯಾಗೇರಿ, ಕರಿಯಪ್ಪ ಕಟ್ಟಿಮನಿ, ಎಸ್.ಎನ್. ಮುಗಳಿ, ಡಾ.ಲತಾ ನಿಡಗುಂದಿ, ಮಂಜುನಾಥ ಮಣ್ಣಣ್ಣವರ, ಶಿವಾನಂದ ಬಾಗೂರ, ಸಿ.ಡಿ. ಯತ್ನಳ್ಳಿ, ಎಂ.ಬಿ. ಹಳೆಮನಿ, ತಾ.ಪಂ. ಸದಸ್ಯ ಮಲ್ಲೇಶಪ್ಪ ದೊಡ್ಡಮನಿ, ಮಂಜುನಾಥ ಬ್ಯಾಹಟ್ಟಿ, ಅನಿತಾ ಗೊಬ್ಬರಗುಂಪಿ, ವಿಜಯಲಕ್ಷ್ಮೀ ಹೆಸರೂರ, ಶಂಕರ ಅಯ್ಯಣ್ಣವರ, ಸುಮಂಗಲಾ ಹೆಸರೂರ, ಎಸ್.ಕೆ ಹೂಗಾರ, ವಿರುಪಾಕ್ಷಪ್ಪ ಬಗಾಡೆ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...