More

  ಸಂಚಾರ ನಿಯಮ ಕಡ್ಡಾಯವಾಗಿ ಪಾಲಿಸಿ

  ರೋಣ: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಎಸ್ಪಿ ಶ್ರೀನಾಥ ಜೋಶಿ ಹೇಳಿದರು.

  ಹೆಲ್ಮೆಟ್ ಕಡ್ಡಾಯ ಕುರಿತು ಪಟ್ಟಣದಲ್ಲಿ ಪೊಲೀಸ್ ಇಲಾಖೆಯಿಂದ ಗುರುವಾರ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು. ‘ರಸ್ತೆ ಅಪಘಾತಗಳ ಪೈಕಿ ದ್ವಿಚಕ್ರ ವಾಹನಗಳ ಅಪಘಾತವೇ ಹೆಚ್ಚು. ಅದರಲ್ಲೂ ತಲೆಗೆ ಪೆಟ್ಟಾಗಿ ಮೃತಪಟ್ಟವರ ಸಂಖ್ಯೆಯೇ ಅಧಿಕ. ಇದಕ್ಕೆ ಹೆಲ್ಮೆಟ್ ಧರಿಸದಿರುವುದೇ ಮುಖ್ಯ ಕಾರಣ. ಕುಟುಂಬಸ್ಥರಿಗಾಗಿ, ನಿಮ್ಮನ್ನು ನಂಬಿದವರಿಗಾಗಿ ನೀವು ದ್ವಿಚಕ್ರ ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಸಂಚಾರ ನಿಯಮ ಕಡ್ಡಾಯವಾಗಿ ಪಾಲಿಸಬೇಕು ಎಂದರು. ಡಿವೈಎಸ್ಪಿ ಶಿವಾನಂದ ಕಟಗಿ, ಸಿಪಿಐ ಸುನೀಲ ಸೌದಿ, ಪಿಎಸ್​ಐ ಪರಮೇಶ್ವರ ಕವಟಗಿ ಇತರರಿದ್ದರು.

  ಅಪಘಾತ ಸಂಭವಿಸಿದಾಗ ಕೈ ಕಾಲುಗಳಿಗೆ ಗಂಭೀರ ಗಾಯವಾದರೂ ಪ್ರಾಣ ಉಳಿಯ ಬಹುದು. ಆದರೆ, ತಲೆಗೆ ಪೆಟ್ಟು ಬಿದ್ದರೆ ಬದುಕುವುದು ಕಷ್ಟ. ಬೈಕ್ ಚಾಲನೆ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು.
  | ಕಳಕಪ್ಪ ಬಂಡಿ ಶಾಸಕ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts