ಚಿತ್ರದುರ್ಗ: ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ, ಸಂತ ಸೇವಾಲಾಲ್ ಕ್ಷೇತ್ರಾಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಹಾಗೂ ದಾವಣಗೆರೆ ಜಿಲ್ಲಾಡಳಿತ ಸಹಯೋಗದಲ್ಲಿ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸೂರಗೊಂಡನ ಕೊಪ್ಪದಲ್ಲಿ ಫೆ.13 ರಿಂದ 15ರವರೆಗೆ ಸಂತ ಸೇವಾಲಾಲರ 286ನೇ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಸಮಾಜದ ಮುಖಂಡ ರಾಘವೇಂದ್ರನಾಯ್ಕ ತಿಳಿಸಿದರು.
ನಗರದ ಪ್ರವಾಸಿ ಮಂದಿರಲ್ಲಿ ಮಂಗಳವಾರ ಜಾತ್ರಾ ಮಹೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಫೆ.14ರಂದು ಮಧ್ಯಾಹ್ನ 2.30ಕ್ಕೆ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಹಾರಾಷ್ಟ್ರ ಸಚಿವ ಸಂಜಯ್ ಡಿ. ರಾಥೋಡ್, ಕರ್ನಾಟಕದ ನಾನಾ ಸಚಿವರು, ಪ್ರತಿಪಕ್ಷ ನಾಯಕ ಆರ್. ಅಶೋಕ್, ಸಂಸದರು, ಮಾಜಿ ಸಂಸದರು ಭಾಗವಹಿಸಲಿದ್ದಾರೆ. ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.
ಉತ್ಸವದ ಅಂಗವಾಗಿ ನಾನಾ ಧಾರ್ಮಿಕ ವಿಧಿಗಳು, ಪೂಜಾ ಕಾರ್ಯಗಳು ಜರುಗಲಿವೆ. 13ರಂದು ಸಂಜೆ 4.30ಕ್ಕೆ ರಾಜ್ಯಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. 21 ದಿನಗಳ ಕಾಲ ಕಠಿಣ ವ್ರತಾಚರಣೆಯಲ್ಲಿರುವ ಮಾಲಾಧಾರಿಗಳು, ಭಕ್ತರು ರಾಜ್ಯ, ನೆರೆರಾಜ್ಯಗಳಿಂದ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಂತ ಸೇವಾಲಾಲರ 286ನೇ ಜಾತ್ರಾ ಮಹೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips
ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…
ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips
ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…
ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes
grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…