28.5 C
Bengaluru
Monday, January 20, 2020

ಸಂಬಳವಿಲ್ಲದೆ ಬದುಕು ಅತಂತ್ರ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಕುಮಟಾ: ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಆ ‘ಡಿ’ ದರ್ಜೆ ನೌಕರರು ಕಳೆದ 7-8 ತಿಂಗಳಿಂದ ಸಂಬಳವಿಲ್ಲದೆ ಅತಂತ್ರರಾಗಿದ್ದಾರೆ.

ಈ ಕುರಿತು ಹೊರಗುತ್ತಿಗೆದಾರ ನೌಕರ ಸಂಘದ ಜಿಲ್ಲಾಧ್ಯಕ್ಷ ಮಾರುತಿ ಸಂಕುಳಿ ಮಾತನಾಡಿ, ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ 200ಕ್ಕೂ ಹೆಚ್ಚು ಹೊರಗುತ್ತಿಗೆ ‘ಡಿ’ ದರ್ಜೆ ಸಿಬ್ಬಂದಿ ಇದ್ದಾರೆ. ಇವರೆಲ್ಲರನ್ನೂ ಏಕಾಏಕಿ ಕೈಬಿಡಲಾಗಿದೆ. ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆಯ ಆಧಾರದ ಮೇಲೆ 8 ‘ಡಿ’ ದರ್ಜೆ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ, ಕಳೆದ 7-8 ತಿಂಗಳಿನಿಂದ ಇವರಿಗೆ ಸಂಬಳವನ್ನೂ ನೀಡಿಲ್ಲ. ಸಿಬ್ಬಂದಿ ಗುತ್ತಿಗೆ ಪಡೆದ ಸ್ಕೈಲೈನ್ ಎಂಟರ್​ಪ್ರೖೆಸಸ್, ಸರ್ಕಾರದಿಂದ ಅನುದಾನ ಬಂದಿಲ್ಲ. ಹೀಗಾಗಿ ಹೊರಗುತ್ತಿಗೆ ನೌಕರರಿಗೆ ಸಂಬಳ ನೀಡಲಾಗುವುದಿಲ್ಲ ಎಂದಿದೆ. ಇದರಿಂದಾಗಿ ಅನೇಕ ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಿ ಕುಟುಂಬ ನಿರ್ವಹಿಸುತ್ತಿದ್ದವರು ಅಕ್ಷರಶಃ ಬೀದಿಗೆ ಬಂದಂತಾಗಿದೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ, ಪ್ರಸವ, ಶಸ್ತ್ರಕಿತ್ಸೆ, ಒಳ ರೋಗಿಗಳ ಚಿಕಿತ್ಸೆ, ವಾರ್ಡ್, ತುರ್ತು ಚಿಕಿತ್ಸಾ ಘಟಕ, ಲ್ಯಾಬ್, ಹೊರ ರೋಗಿಗಳ ವಿಭಾಗ, ಒಳರೋಗಿಗಳ ವಿಭಾಗ, ಕಚೇರಿ ವಿಭಾಗ ಹೀಗೆ ಹತ್ತು ಹಲವಾರು ಕಡೆಗಳಲ್ಲಿ ‘ಡಿ’ ದರ್ಜೆ ನೌಕರರ ಅವಶ್ಯಕತೆಯಿರುತ್ತದೆ. ಕಾಯಂ ಇರುವ 12 ‘ಡಿ’ ದರ್ಜೆ ನೌಕರರಲ್ಲಿ ಐವರು ಬೇರೆ ಬೇರೆ ಕೆಲಸ ನಿರ್ವಹಿಸಬೇಕಿದೆ. ಉಳಿದ 7 ‘ಡಿ’ ದರ್ಜೆ ನೌಕರರು 24 ಗಂಟೆಯ 3

ಶಿಫ್ಟ್​ನಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ. ಒಟ್ಟು 32 ‘ಡಿ’ ದರ್ಜೆ ನೌಕರರು ಇರಬೇಕು. ಆದರೆ, ಇಲ್ಲಿ 12 ಕಾಯಂ ‘ಡಿ’ ದರ್ಜೆ ನೌಕರರಿದ್ದರೆ, 8 ಜನರನ್ನು ಗುತ್ತಿಗೆ ಆಧಾರದ ಮೇಲೆ ಪಡೆಯಲಾಗಿದೆ. ಇದರಲ್ಲಿ ಒಬ್ಬಿಬ್ಬರು ರಜೆ ಮಾಡಿದರೆ ಕೆಲಸವನ್ನು ನಿರ್ವಹಿಸುವುದೇ ಕಷ್ಟಕರ ಎಂಬ ಮಾಹಿತಿ ಪತ್ರಿಕೆಗೆ ಲಭಿಸಿದೆ.

ಮೊದಲೇ ಆಸ್ಪತ್ರೆಯಲ್ಲಿ ‘ಡಿ’ ದರ್ಜೆ ನೌಕರರ ಕೊರತೆಯಿತ್ತು. ಈಗ ಹೊರಗುತ್ತಿಗೆ 8 ಸಿಬ್ಬಂದಿಯನ್ನು ಕೆಲಸದಿಂದ ತೆಗೆಯಲಾಗಿದೆ. ಇದರಿಂದ ಆಸ್ಪತ್ರೆಯ ಕೆಲಸ ನಿರ್ವಹಣೆ ಕಷ್ಟಕರವಾಗಿದೆ. ಇದ್ದ ಸಿಬ್ಬಂದಿಯಲ್ಲಿಯೇ ಎಲ್ಲ ಕೆಲಸ ನಿರ್ವಹಿಸಬೇಕು. ರೋಗಿಗಳನ್ನು ಶಿಫ್ಟ್ ಮಾಡಲು ಹಾಗೂ ಇನ್ನಿತರ ಕೆಲಸ ಮಾಡಲು ಸಿಬ್ಬಂದಿಗಳ ಅವಶ್ಯಕತೆಯಿದೆ.
ಡಾ. ಗಣೇಶ, ಆಡಳಿತಾಧಿಕಾರಿ ಸರ್ಕಾರಿ ಆಸ್ಪತ್ರೆ, ಕುಮಟಾ

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...