More

    ಸಂಭ್ರಮದ ಅನ್ನದಾನೀಶ್ವರ ಮಹಾ ರಥೋತ್ಸವ

    ನರೇಗಲ್ಲ: ಸಮೀಪದ ಹಾಲಕೆರೆಯ ಶ್ರೀ ಅನ್ನದಾನೀಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಸೋಮವಾರ ಬೆಳಗ್ಗೆ 9 ಗಂಟೆಗೆ ಮಣಕವಾಡ ದೇವಮಂದಿರ ಮಹಾಮಠದ ಅಭಿನವ ಮೃತ್ಯುಂಜಯ ಸ್ವಾಮೀಜಿ ಜಂಗಮೋತ್ಸವವು ಸಕಲ ವಾದ್ಯವೈಭವಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಡಗರ ಸಂಭ್ರಮದಿಂದ ಜರುಗಿತು.

    ಬೆಳಗ್ಗೆ 11 ಗಂಟೆಗೆ ಲಿಂ. ಅನ್ನದಾನ ಸ್ವಾಮೀಜಿ ಸ್ಮಾರಕ ಭವನ ಹಾಗೂ ನೂತನ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಕಟ್ಟಡವನ್ನು ಡಾ. ಅಭಿನವ ಅನ್ನದಾನ ಸ್ವಾಮೀಜಿ ಉದ್ಘಾಟಿಸಿದರು. ಧಾರವಾಡದ ಕೆವಿಜಿಬಿ ಕೇಂದ್ರ ಕಚೇರಿ ಅಧ್ಯಕ್ಷ ಪಿ. ಗೋಪಿಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಗದಗ ಕೆವಿಜಿಬಿ ಪ್ರಾದೇಶಿಕ ಪ್ರಬಂಧಕ ಬಸವರಾಜ ಹೊಳ್ಳರ, ಹಾಲಕೆರೆ ಕೆವಿಜಿಬಿ ವ್ಯವಸ್ಥಾಪಕ ಪರಶುರಾಮ, ಹರಗುರು ಚರಮೂರ್ತಿಗಳು ಉಪಸ್ಥಿತರಿದ್ದರು.

    ಸಂಸ್ಥಾನಮಠದ 169ನೇ ವರ್ಷದ ಮಹಾರಥೋತ್ಸವವು ಸೋಮವಾರ ಸಂಜೆ ಅಪಾರ ಭಕ್ತ ಸಮೂಹದ ಮಧ್ಯೆ ಸಡಗರ, ಸಂಭ್ರಮದಿಂದ ಜರುಗಿತು. ಮಹಾರಥೋತ್ಸವಕ್ಕೆ ಡಾ. ಅಭಿನವ ಅನ್ನದಾನ ಸ್ವಾಮೀಜಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

    ಮಣಕವಾಡದ ದೇವಮಂದಿರ ಮಹಾಮಠದ ಅಭಿನವ ಮೃತ್ಯುಂಜಯ ಸ್ವಾಮೀಜಿ, ಯಡ್ರಾಮಿ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ, ನರೇಗಲ್ಲ ಹಿರೇಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಯಲಬುರ್ಗಾ ಶ್ರೀಧರ ಮುರಡಿ, ಹಿರೇಮಠದ ಬಸವಲಿಂಗ ಸ್ವಾಮೀಜಿ, ಜಿಗೇರಿಯ ಗುರುಸಿದ್ಧ ಸ್ವಾಮೀಜಿ, ಹಾಲಕೆರೆ ಅನ್ನದಾನೀಶ್ವರ ಮಠದ ನಿಯೋಜಿತ ಉತ್ತರಾಧಿಕಾರಿ ಮುಪ್ಪಿನ ಬಸವಲಿಂಗ ಸ್ವಾಮೀಜಿ, ಕುರಗೋಡದ ಪರ್ವತದೇವರು, ಸೋಮಸಮುದ್ರದ ನಾಗನಾಥ ದೇವರು, ಬೂದಗುಂಪದ ವಿಜಯಪ್ರಭು ದೇವರು, ಗದಗ ಚಂದ್ರಶೇಖರ ದೇವರು, ಗದಗ ಜಿಲ್ಲೆ, ಸುತ್ತಲಿನ ಜಿಲ್ಲೆಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಸಿನಿಮಾ

    Latest Posts