21.7 C
Bengaluru
Tuesday, January 21, 2020

ಸಂಸ್ಕೃತಿ ಸಂವರ್ಧನೆಯಲ್ಲಿ ಮಹಿಳೆಯರ ಪಾತ್ರ ಹಿರಿದು

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಹುಬ್ಬಳ್ಳಿ: ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಉತ್ಕೃಷ್ಟ ಸ್ಥಾನವಿದೆ. ಸಂಸ್ಕೃತಿ ಪರಂಪರೆ ಮತ್ತು ಆದರ್ಶಗಳನ್ನು ಬೆಳೆಸಿಕೊಂಡು ಬರುವಲ್ಲಿ ಅವರ ಜವಾಬ್ದಾರಿ ಅತ್ಯಂತ ಹಿರಿದಾಗಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು.

ನಗರದ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದಲ್ಲಿ ಭಾನುವಾರ ಜರುಗಿದ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಪಾರ್ವತಿ ಮಹಿಳಾ ಅಭಿವೃದ್ಧಿ ಮಂಡಳದ 17ನೇ ವಾರ್ಷಿಕೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಆಧುನಿಕ ಯುಗದಲ್ಲಿ ಮಹಿಳೆಯರು ಎಲ್ಲ ರಂಗಗಳಲ್ಲಿ ತಮ್ಮ ಸಾಧನೆ ಮತ್ತು ಪ್ರಯತ್ನದಿಂದ ಪುರುಷರಿಗಿಂತಲೂ ಮುಂದೆ ಸಾಗುತ್ತಿರುವುದು ಹೆಮ್ಮೆಯ ಸಂಗತಿ. ಜೊತೆಗೆ ಕೌಟುಂಬಿಕ ಸ್ವಾಸ್ಥ್ಯ ಕಾಪಾಡುವ ಮತ್ತೊಂದು ಹೊಣೆಗಾರಿಕೆ ಮಹಿಳೆಯರ ಮೇಲಿದೆ. ವೀರಶೈವ ಧರ್ಮದಲ್ಲಿ ಜಗದ್ಗುರು ರೇಣುಕಾಚಾರ್ಯರು ಧರ್ವಚರಣೆಯಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿಕೊಟ್ಟಿದ್ದನ್ನು ಮರೆಯಲಾಗದು ಎಂದರು.

ಸುಳ್ಳದ ಶಿವಸಿದ್ಧರಾಮೇಶ್ವರ ಶಿವಾಚಾರ್ಯರು ಮತ್ತು ಸೂಡಿಯ ಡಾ. ಕೊಟ್ಟೂರ ಬಸವೇಶ್ವರ ಶಿವಾಚಾರ್ಯರು ಉಪದೇಶಾಮೃತ ನೀಡಿದರು.

ಪಾರ್ವತಿ ಮಹಿಳಾ ಅಭಿವೃದ್ಧಿ ಮಂಡಳದ ಅಧ್ಯಕ್ಷೆ ಇಂದುಮತಿ ಮಾನ್ವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಮದ್ವೀರಶೈವ ಸದ್ಬೋಧನ ಸಂಸ್ಥೆ, ಹುಬ್ಬಳ್ಳಿ ತಾಲೂಕಾ ಘಟಕದ ಅಧ್ಯಕ್ಷ ಪ್ರಕಾಶ ಬೆಂಡಿಗೇರಿ ಮತ್ತು ಜಗದ್ಗುರು ರಂಭಾಪುರೀಶ ಸಾಂಸ್ಕೃತಿಕ ಸೇವಾ ಸಮಿತಿ ಅಧ್ಯಕ್ಷ ವಿಶ್ವನಾಥ ಹಿರೇಗೌಡರ ಮಾತನಾಡಿದರು.

ಶ್ರೀಮದ್ವೀರಶೈವ ಸದ್ಬೋಧನ ಸಂಸ್ಥೆಯ ಕೇಂದ್ರ ಸಮಿತಿಯಲ್ಲಿ ತೆರವಾದ ಎರಡು ಸ್ಥಾನಗಳಿಗೆ ಬಸವರಾಜ ಸುಳ್ಳದ ಮತ್ತು ಸುವರ್ಣಮ್ಮ ಪುರಾಣಿಕ ಅವರನ್ನು ನಿಯುಕ್ತಿಗೊಳಿಸಿ ರಂಭಾಪುರಿ ಜಗದ್ಗುರುಗಳು ಪ್ರಕಟಪಡಿಸಿದರು.

ಪಾರ್ವತಿ ಮಹಿಳಾ ಅಭಿವೃದ್ಧಿ ಮಂಡಳದ ಬಳಗದವರಿಂದ ವೇದಘೊಷ ಮತ್ತು ಭಕ್ತಿಗೀತೆ ಜರುಗಿತು. ಶೃತಿ ಭೂಸನೂರಮಠ ಸ್ವಾಗತಿಸಿದರು. ಜಯಶ್ರೀ ವಾಲಿ ವಾರ್ಷಿಕ ವರದಿ ವಾಚನ ಮಾಡಿದರು. ಶೈಲಜಾ ಹಿರೇಮಠ ಮತ್ತು ಲಲಿತಾ ಹಿರೇಮಠ ನಿರೂಪಿಸಿದರು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...