ಹಾಸನ: ಸಕಲೇಶಪುರ ತಾಲೂಕಿನಲ್ಲಿ ಹೆಚ್ಚಿರುವ ಡ್ರಗ್ಸ್ ದಂಧೆಗೆ ಜಿಲ್ಲಾ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕು. ಈ ನಿಟ್ಟಿನಲ್ಲಿ ದಿಟ್ಟ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ನೇತೃತ್ವದ ನಿಯೋಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರಿಗೆ ಗುರುವಾರ ಮನವಿ ಸಲ್ಲಿಸಿತು.
ಅಮಲು ಮುಕ್ತ ಭಾರತ ಆಂದೋಲನ ದೇಶಾದ್ಯಂತ ನಡೆಯುತ್ತಿದ್ದು, ಇದಕ್ಕೆ ವಿರೋಧ ಎಂಬಂತೆ ಸಕಲೇಶಪುರದಲ್ಲಿ ಡ್ರಗ್ಸ್ ದಂಧೆ ಪ್ರಬಲವಾಗಿ ಬೆಳೆಯುತ್ತಿದೆ. ಇದಕ್ಕೆ ಕ್ರಮವಹಿಸಲು ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು. ತಾಲೂಕಿನಲ್ಲಿ ಡ್ರಗ್ಸ್ ದಂಧೆ ಕಡಿವಾಣಕ್ಕೆ ಪೊಲೀಸರು ಕ್ರಮ ಕೈಗೊಳ್ಳುತ್ತಾ ಬಂದಿದ್ದಾರೆ. ಇದು ಮುಂದಿನ ದಿನಗಳಲ್ಲಿ ಇದು ನಿರಂತರವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಬೇಕು. ಇಲ್ಲವಾದರೆ ಸಾಕಷ್ಟು ಜನರು ಇದಕ್ಕೆ ಬಲಿಯಾಗಲಿದ್ದಾರೆ. ಸಕಲೇಶಪುರದಲ್ಲಿ ಡ್ರಗ್ಸ್ ದಂಧೆ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿವೆ. ಇನ್ನಷ್ಟು ಕಠಿಣ ಕ್ರಮದ ಅಗತ್ಯವಾಗಿದೆ ಎಂದು ಹೇಳಿದರು.
ಪೊಲೀಸ್ ಇಲಾಖೆ ಕೈಗೊಳ್ಳುವಂತಹ ದಿಟ್ಟ ಕ್ರಮಕ್ಕೆ ನಮ್ಮೆಲ್ಲರ ಸಹಕಾರ ಇರಲಿದೆ. ಸಕಲೇಶಪುರ ತಾಲೂಕಿಗೆ ಸಂಬಂಧಿಸಿದಂತೆ ಡ್ರಗ್ಸ್ ದಂಧೆ ವಿರುದ್ಧ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ವಿಶೇಷ ಪಡೆ ರಚಿಸಬೇಕು ಜತೆಗೆ ಡ್ರಗ್ಸ್ ದಂಧೆಕೋರರ ಮಾಹಿತಿ ಸಂಗ್ರಹಣೆಗೆ ಸಹಾಯವಾಣಿ ತೆರೆಯುವುದು, ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಸ್ವಯಂಸೇವಕರು ಡ್ರಗ್ಸ್ ದಂಧೆಕೋರರ ಮಾಹಿತಿ ನೀಡಿದ ವ್ಯಕ್ತಿಗಳ ವಿಚಾರಣೆಯನ್ನು ನಡೆಸಬೇಕಾಗಿ ಮನವಿ ಮಾಡಿದರು.
ಈ ಸಂಧರ್ಭದಲ್ಲಿ ಹಿರಿಯ ಹೋರಾಟಗಾರ ನಾರಾಯಣ, ನಾಗರಿಕ ಸಂರಕ್ಷಣಾ ಸಮಿತಿ ಅಧ್ಯಕ್ಷ ರವಿಕುಮಾರ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜೈ ಭೀಮ್ ಮಂಜು, ಪತ್ರಕರ್ತ ಸಾ.ಸು ವಿಶ್ವನಾಥ್ ಇದ್ದರು.
ಸಕಲೇಶಪುರ ತಾಲೂಕಿನಲ್ಲಿ ಡ್ರಗ್ಸ್ ದಂಧೆ ಕಡಿವಾಣಕ್ಕೆ ಎಸ್‌ಪಿಗೆ ಮನವಿ
You Might Also Like
ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ನೋಡಿ… ಇದ್ರೆ ಎಂದಿಗೂ ಹಣಕಾಸಿನ ಸಮಸ್ಯೆಗಳು ಎದುರಾಗಲ್ಲ | Palmistry
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Honey: ಜೇನಿನೊಂದಿಗೆ ಈ ಆರು ಆಹಾರ ಬೆರೆಸಿ ತಿನ್ನಬೇಡಿ..ಹಾಗೆ ಮಾಡಿದರೆ ವಿಷವಾಗುತ್ತದೆ!
ಜೇನು(Honey) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಕೆಲವು ಪದಾರ್ಥಗಳೊಂದಿಗೆ ಬೆರೆಸಿ ಸೇವಿಸಬಾರದು. ಈ 6 ಪದಾರ್ಥಗಳೊಂದಿಗೆ…
ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ.. ಈ ನೀರಿನಿಂದ ದೇಹದ ತೂಕ ಇಳಿಸಿಕೊಳ್ಳಬಹುದು! Interesting information
ಬೆಂಗಳೂರು: ಅಕ್ಕಿ ತೊಳೆದರೆ ಬರುವ ನೀರನ್ನು ( rice washed water) ಅನೇಕರು ಬಿಸಾಡುತ್ತಾರೆ. ಆದರೆ…