18 C
Bangalore
Friday, December 6, 2019

ಸಕಾಲಕ್ಕೆ ಸಾಲ ಮರುಪಾವತಿ ಮಾಡಿ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಶಿಕಾರಿಪುರ: ಸಹಕಾರ ಚಳವಳಿಗೆ ಶತಮಾನ ತುಂಬಿದೆ ಮತ್ತು ಚಳವಳಿ ಯಶಸ್ವಿ ಆಗಲು ಮೂಲ ಕಾರಣ ನಮ್ಮ ಮಣ್ಣಿನಲ್ಲಿರುವಂತಹ ಸಹಕಾರ ಭಾವನೆ. ನಂಬಿಕೆ, ವಿಶ್ವಾಸ ಹೆಚ್ಚಾಗಿರುವ ಕಡೆ ಸಹಕಾರ ಮನೋಭಾವನೆ ಬೆಳೆಯಲು ಸಾಧ್ಯ. ಸಹಕಾರ ತತ್ವಗಳು ನಮ್ಮ ಜನತೆಯ ಉಸಿರು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ತಾಪಂ ಸಭಾಂಗಣದಲ್ಲಿ ಭಾನುವಾರ ಸಹಕಾರ ಮಹಾಮಂಡಳ, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರ ಸಂಘ, ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಹಾಲು ಒಕ್ಕೂಟ, ಸಹಕಾರ ಇಲಾಖೆ, ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ಸ್ ಕೋ ಆಪರೇಟಿವ್ ಲಿ. ಆಶ್ರಯದಲ್ಲಿ ಹಮ್ಮಿಕೊಂಡಿದ್ದ 66ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಪ್ರತಿ ಕ್ಷೇತ್ರದಲ್ಲಿಯೂ ಸಹಕಾರ ಚಿಂತನೆಗಳಿವೆ. ಸಹಕಾರ ಸಂಘಗಳು ಉಳಿಯಬೇಕಾದರೆ ಸಕಾಲಕ್ಕೆ ಸಾಲ ಮರುಪಾವತಿ ಮಾಡಬೇಕಾದ ಅಗತ್ಯವಿದೆ. ಪ್ರಪಂಚದ ಅತ್ಯುತ್ತಮ ಸಹಕಾರ ಸಂಘಗಳ ಪಟ್ಟಿಯಲ್ಲಿ ಭಾರತದ ಯಾವುದೇ ಸಂಘಗಳು ಸ್ಥಾನ ಪಡೆಯದಿರುವುದು ವಿಪರ್ಯಾಸ. ಇದಕ್ಕೆ ಮೂಲ ಕಾರಣ ಕಂಡುಹಿಡಿಯಬೇಕು ಎಂದರು.

ಈಗಾಗಲೇ ಶಿವಮೊಗ್ಗದಿಂದ ಚೆನ್ನೈ, ತಿರುಪತಿ, ಮೈಸೂರು ರೈಲು ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಶಿವಮೊಗ್ಗದಿಂದ ಶಿಕಾರಿಪುರ ಮಾರ್ಗವಾಗಿ ರಾಣೆಬೆನ್ನೂರು ರೈಲು ಮಾರ್ಗಕ್ಕೆ 700‰ ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಅತಿವೃಷ್ಟಿಯಿಂದ ಅಂತರ್ಜಲ ಮಟ್ಟ ಹೆಚ್ಚಿದೆ. ಆದರೂ ಹೊನ್ನಾಳಿ ಸಮೀಪದ ಪುರದಕೆರೆಯಿಂದ ಉಡುಗಣಿ, ತಾಳಗುಂದ, ಹೊಸೂರು ಹೋಬಳಿಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ 350 ಕೋಟಿ ರೂ., ತುಂಗಾನದಿಯಿಂದ ಚೋರಡಿ ಬಳಿ ಕುಮದ್ವತಿ ನದಿ ಮೂಲಕ ಅಂಜನಾಪುರ ಕೆರೆಗೆ ನೀರುಣಿಸುವ ಯೋಜನೆಗೆ 1,200 ಕೋಟಿ ರೂ. ನೀಡಲಾಗಿದೆ ಎಂದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಮಾತನಾಡಿ, ಸಹಕಾರ ಕ್ಷೇತ್ರ ಅದ್ಭುತವಾಗಿ ಬೆಳೆದಿದೆ. ಎರಡು ದಶಕಗಳ ಹಿಂದೆ ಶಿಕಾರಿಪುರದಲ್ಲಿ ಸಹಕಾರ ಕ್ಷೇತ್ರ ಅಷ್ಟೊಂದು ಬೆಳೆದಿರಲಿಲ್ಲ. ಆದರೆ ಈಗ ರಾಜ್ಯದ ಸಹಕಾರ ರಂಗದಲ್ಲಿ ಶಿಕಾರಿಪುರ ತಾಲೂಕು ಬೆಳಗುತ್ತಿದೆ. ಇಲ್ಲಿನ ವೀರಶೈವ ಸಹಕಾರ ಸಂಘದ ಅಧ್ಯಕ್ಷರಾಗಿ ರಾಜಕೀಯ ಆರಂಭಿಸಿ ಈಗ ರಾಜ್ಯದ ಮುಖ್ಯಮಂತ್ರಿ ಆಗಿರುವ ಯಡಿಯೂರಪ್ಪ ಅವರ ಸಹಕಾರದಿಂದ ಸಹಕಾರ ಕ್ಷೇತ್ರಕ್ಕೆ ಕೊಡುಗೆ ಅಪೂರ್ವ ಎಂದು ತಿಳಿಸಿದರು.

ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ವಾಟಗೋಡು ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ, ಸಹಕಾರಿ ಧುರೀಣ ಡಾ. ಬಿ.ಡಿ.ಭೂಕಾಂತ್, ತಾಪಂ ಅಧ್ಯಕ್ಷ ಆರ್.ಕೆ.ಶಂಭು, ಹಾಲು ಒಕ್ಕೂಟದ ನಿರ್ದೇಶಕ ಶಿವಶಂಕರ್, ಜಿಪಂ ಸದಸ್ಯೆ ರೇಣುಕಾ ಹನುಮಂತಪ್ಪ, ಡಾ. ಸಿ.ನಾರಾಯಣಸ್ವಾಮಿ, ಸಹಕಾರ ಸಂಘಗಳ ಉಪನಿಬಂಧಕ ತಿಪ್ಪೇಸ್ವಾಮಿ, ಶಶಿಧರ್, ಕೆ.ಹಾಲಪ್ಪ, ಸಿ.ಪಿ.ಹೆಗಡೆ, ಗುರುರಾಜ್, ಮಂಜಾಚಾರ್, ನಾಗರಾಜ ಸ್ವಾಮಿ, ಶಾಂತಲಾ ಭೂಕಾಂತ್, ಲಲಿತಾ ಶಿವಪ್ಪ, ನಿರ್ಮಕ ಚನ್ನಪ್ಪ, ಎಪಿಎಂಸಿ ಅಧ್ಯಕ್ಷ ಸಿದ್ರಾಮಪ್ಪ, ವೀರನಗೌಡ, ಅನೂಪ್, ಬಸವರಾಜ್ ಇತರರಿದ್ದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...