ಸಕ್ರಿಯ ಕಾರ್ಯಕರ್ತರಿಗೆ ಟಿಕೆಟ್

Latest News

ನಿವೇಶನ ನೀಡಲು ಮೀನಮೇಷ

ಶೃಂಗೇರಿ: ತಾಲೂಕು ಕಚೇರಿ ದನದ ದೊಡ್ಡಿಯಾಗಿದೆ. ಬಡವರಿಗೆ ನಿವೇಶನ ನೀಡಲು ಜಾಗವೇ ಇಲ್ಲ ಎನ್ನುವ ಅಧಿಕಾರಿಗಳು ಮಾನವೀಯತೆ ಮರೆಯುತ್ತಿದ್ದಾರೆ. ಹಾಗಿದ್ದರೆ ಕಚೇರಿಗೆ ಬೀಗ...

ಶಾಸಕರ ಅನುದಾನದಲ್ಲಿ ಶುದ್ಧ ಗಂಗಾ ಘಟಕ

ಅಜ್ಜಂಪುರ: ಚುನಾವಣೆ ವೇಳೆ ಸಾಕಷ್ಟು ನಿರೀಕ್ಷೆ ಇರಿಸಿಕೊಂಡು ಗ್ರಾಮೀಣ ಮತದಾರರು ನನ್ನ ಕೈಹಿಡಿದಿದ್ದಾರೆ. ಅವರ ಋಣ ತೀರಿಸುವ ಹೊಣೆ ನನ್ನ ಮೇಲಿರುವುದರಿಂದ ಗ್ರಾಮೀಣ...

ಸಚಿವ, ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ

ಚಿಕ್ಕಮಗಳೂರು: ಡಾ. ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಸುತ್ತೋಲೆ ಹೊರಡಿಸುವ ಮೂಲಕ ರಾಜ್ಯ ಶಿಕ್ಷಣ ಇಲಾಖೆ ಅಂಬೇಡ್ಕರ್ ಅವರನ್ನು ಅಪಮಾನಿಸಿದೆ ಎಂದು...

ಇನ್ನು ನಾಲ್ಕೈದು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್​-ಎನ್​ಸಿಪಿ ಮೈತ್ರಿ ಸರ್ಕಾರ ರಚನೆ; ಇಂದು ಸಂಜೆ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ

ಮುಂಬೈ: ಇಂದು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ 50 ನಿಮಿಷ ಮಾತುಕತೆ ನಡೆಸಿದ್ದಾರೆ. ಅದಾದ ಬಳಿಕ ಎನ್​ಸಿಪಿ ಹಾಗೂ...

ಕಲ್ಲು ಪಾಚಿ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ

ಪಿರಿಯಾಪಟ್ಟಣ : ಪಟ್ಟಣ ವ್ಯಾಪ್ತಿಯ ತಾತನಹಳ್ಳಿ ಗೇಟ್ ಸಮೀಪ ಗುರುವಾರ ಅರಣ್ಯ ಪ್ರದೇಶಗಳಲ್ಲಿ ದೊರಕುವ ಕಲ್ಲು ಪಾಚಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ...

ಹಾವೇರಿ: ಮುಂದಿನ ದಿನಗಳಲ್ಲಿ ಪಕ್ಷದ ಸಕ್ರಿಯ ಕಾರ್ಯಕರ್ತರಿಗೆ ಮಾತ್ರ ಅಧಿಕಾರ, ಟಿಕೆಟ್ ನೀಡಲಾಗುವುದು. ಮಧ್ಯ ಮಾರ್ಗದಲ್ಲಿ ಬಂದವರಿಗೆ ಟಿಕೆಟ್ ಸಿಗಲ್ಲ. ಈ ಕುರಿತು ರಾಷ್ಟ್ರಾಧ್ಯಕ್ಷರು ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಹೇಳಿದರು.

ನಗರದ ಮಾಗಾವಿ ಕಲ್ಯಾಣಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಅಭಿನಂದನೆ ಹಾಗೂ ಹಾವೇರಿ ವಿಧಾನಸಭಾ ಕ್ಷೇತ್ರದ ಶಕ್ತಿ ಕೇಂದ್ರದ ಪ್ರಮುಖರ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಮಗೆ ಹಂಗಿನ ಸರ್ಕಾರ ಬೇಡ, ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲಿಸಿ ಬಿಜೆಪಿ ಅಧಿಕಾರಕ್ಕೇರಬೇಕು. ಅದಕ್ಕೆ ಜಿಲ್ಲೆಯ 6 ವಿಧಾನಸಭೆ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ. ಪ್ರತಿಯೊಬ್ಬರೂ ಬೂತ್​ಗಳಲ್ಲಿ ಸದಸ್ಯತ್ವ ಮಾಡಬೇಕು. ಸದ್ಯ ಬಿಜೆಪಿ 11 ಕೋಟಿ ಸದಸ್ಯರನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು 20 ಕೋಟಿ ದಾಟಿಸುವ ಗುರಿ ಹೊಂದಲಾಗಿದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.

ನಾವು ಅಧಿಕಾರಕ್ಕಾಗಿ ದುಡಿಯುತ್ತಿಲ್ಲ. ದೇಶವನ್ನು ಪರಿವರ್ತನೆಯತ್ತ ಸಾಗಿಸಲು ಶ್ರಮಿಸುತ್ತಿದ್ದೇವೆ. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ರಾಜ್ಯಾಧ್ಯಕ್ಷರಾಗುವ ಅರ್ಹತೆ ಹೊಂದಿದ್ದಾರೆ. ಅರ್ಹತೆ ಇದ್ದವರಿಗೆ ಅಧಿಕಾರವೂ ಸಿಗುತ್ತದೆ. ತಾಯಿ, ಮಗ, ಅಜ್ಜ, ಮುತ್ತಜ್ಜನ ಸ್ವತ್ತಾಗಿರುವ ಪಕ್ಷ ನಮ್ಮದಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ರಾಷ್ಟ್ರ ಮುಖ್ಯ ಎಂಬ ಸಿದ್ಧಾಂತದ ಅಡಿ ಬಿಜೆಪಿ ಕೆಲಸ ಮಾಡುತ್ತಿದೆ. ಹಿಂದೆ ವಾಜಪೇಯಿಯವರು ವಿರೋಧ ಪಕ್ಷದಲ್ಲಿದ್ದರೂ ಇಂದಿರಾ ಗಾಂಧಿಯವರು ರಾಷ್ಟ್ರದ ಹಿತಕ್ಕಾಗಿ ಕೈಗೊಂಡ ಕಾರ್ಯವನ್ನು ಮೆಚ್ಚಿ ದುರ್ಗಿ ಎಂದು ಹೊಗಳಿದ್ದರು. ಜನಸಂಘದ ಮೂಲಕ ಆರಂಭಗೊಂಡು ರಾಜಕೀಯದ ಜೊತೆಗೆ ಚಿಂತನೆಗಳನ್ನು ನಮ್ಮ ನಾಯಕರು ನಮಗೆ ಕೊಟ್ಟಿದ್ದಾರೆ. ಕಾಶ್ಮೀರದ ವಿಮೋಚನೆಗಾಗಿ ಶ್ಯಾಂ ಪ್ರಸಾದ ಮುಖರ್ಜಿಯವರು ಬಲಿದಾನಗೈದರು. 68ವರ್ಷಗಳ ನಂತರ ನಮ್ಮ ಹಿರಿಯರ ಕನಸನ್ನು ಪ್ರಧಾನಿ ಮೋದಿಯವರು ನನಸು ಮಾಡಿದ್ದಾರೆ ಎಂದರು.

ರಾಜ್ಯದಲ್ಲಿ ಹಿಂದಿನ ಸರ್ಕಾರಗಳ ಅವಧಿಯಲ್ಲಿ 19ಹಿಂದು ಕಾರ್ಯಕರ್ತರ ಹತ್ಯೆಯಾಗಿತ್ತು. ಉತ್ತರ ಕನ್ನಡದಲ್ಲಿ ಸಿಎಂ ಬರ್ತಾರೆ ಎಂದು ಹತ್ಯೆಯಾದ ಪರಮೇಶ ಮೇಸ್ತಾರ ಶವವನ್ನು ಮುಚ್ಚಿಡಲಾಗಿತ್ತು. ಆದರೆ ಇನ್ಮುಂದೆ ಅಂತಹ ಘಟನೆಗಳಿಗೆ ಆಸ್ಪದವಿಲ್ಲ. ನಮ್ಮ ಕಾರ್ಯಕರ್ತರ ಮೇಲೆ ಯಾವುದೇ ಸುಳ್ಳು ಕೇಸ್ ದಾಖಲಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನನ್ನದು ಎಂದರು.

ಸಂಸದ ಶಿವಕುಮಾರ ಉದಾಸಿ ಮಾತನಾಡಿ, ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಸುವರ್ಣ ಸಮಯದಲ್ಲಿ ಕಟೀಲ್ ಅವರು ರಾಜ್ಯಾಧ್ಯಕ್ಷರಾಗಿದ್ದಾರೆ. ಪಕ್ಷವನ್ನು ದೊಡ್ಡಮಟ್ಟದಲ್ಲಿ ಬೆಳೆಸುವ ಶಕ್ತಿ ಅವರಿಗಿದೆ ಎಂದರು.

ಮಾಜಿ ಸಚಿವ, ಶಾಸಕ ಸಿ.ಎಂ. ಉದಾಸಿ, ಶಾಸಕ ನೆಹರು ಓಲೇಕಾರ, ಮಾಜಿ ಶಾಸಕ ಯು.ಬಿ. ಬಣಕಾರ, ಸುರೇಶಗೌಡ ಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ನಿಸ್ಸೀಮಗೌಡ್ರ, ಲಿಂಗರಾಜ ಪಾಟೀಲ, ನಾರಾಯಣ ಜಗತಾಪ ಇತರರಿದ್ದರು.

ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನರ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಸಿದ್ದರಾಜ ಕಲಕೋಟಿ ನಿರೂಪಿಸಿದರು.

ರಾಮಮಂದಿರ ಕಟ್ಟುವ ಶಕ್ತಿ ಯಾರಿಗಿದೆ: ಈ ದೇಶದಲ್ಲಿ ರಾಮಮಂದಿರ ಕಟ್ಟುವ, ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸುವ ತಾಕತ್ತು ಯಾರಿಗಿದೆ ಎಂದು ಕಾರ್ಯಕರ್ತರನ್ನು ಕೇಳಿದ ಕಟೀಲ್, ಸೋನಿಯಾ ಗಾಂಧಿ ರಾಮ ಮಂದಿರ ಕಟ್ತಾರಾ, ಈಗಾಗಲೇ ಅರೇಬಿಯನ್ ರಾಷ್ಟ್ರವಾಗಿರುವ ಅಬುದಾಬಿಯಲ್ಲಿ 24 ಎಕರೆ ಜಮೀನಿನಲ್ಲಿ ಗಣೇಶ ದೇವಸ್ಥಾನವನ್ನು ನಿರ್ವಿುಸುತ್ತಿದ್ದೇವೆ. 2014ರಿಂದ ದೇಶದಲ್ಲಿ ಭಯೋತ್ಪಾದನೆ ನಿಮೂಲನೆಯಾಗಿದೆ ಎಂದರು.

ಕೇಳಿದ್ದನ್ನು ಕೊಡುವ ಕಾಮಧೇನು ಬಿಎಸ್​ವೈ: ಯಡಿಯೂರಪ್ಪ ಅವರು ಜನರಿಗೆ ಕೇಳಿದ್ದನ್ನು ಕೊಡುವ ಕಾಮಧೇನು. ರಾಜ್ಯದಲ್ಲಿ ವಿಲನ್ ಸರ್ಕಾರ ಹೋಗಿ ಹೀರೋ ಸರ್ಕಾರ ಬಂದಿದೆ. ಯಡಿಯೂರಪ್ಪ ಕ್ಲಿಷ್ಟ ಸಮಯದಲ್ಲಿ ಸಿಎಂ ಆದರೂ ಜನರನ್ನು ಕೈಬಿಡಲಿಲ್ಲ. ನೆರೆ ಸಂತ್ರಸ್ತರಿಗೆ ತುರ್ತಾಗಿ 10 ಸಾವಿರ, ಮನೆ ಕಟ್ಟಿಕೊಳ್ಳಲು 5 ಲಕ್ಷ, ಮನೆ ನಿರ್ವಿುಸಿಕೊಳ್ಳುವವರೆಗೂ ಬಾಡಿಗೆ ಮನೆಯಲ್ಲಿರಲು ಪ್ರತಿ ತಿಂಗಳು 5 ಸಾವಿರ ರೂ. ನೀಡುತ್ತಿದ್ದಾರೆ ಎಂದರು.

- Advertisement -

Stay connected

278,636FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...