25.7 C
Bangalore
Sunday, December 15, 2019

ಸಚಿವ, ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ

Latest News

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.ನಗರದ...

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮದುಮಗಳು; ಮದುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮದುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ಚಿಕ್ಕಮಗಳೂರು: ಡಾ. ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಸುತ್ತೋಲೆ ಹೊರಡಿಸುವ ಮೂಲಕ ರಾಜ್ಯ ಶಿಕ್ಷಣ ಇಲಾಖೆ ಅಂಬೇಡ್ಕರ್ ಅವರನ್ನು ಅಪಮಾನಿಸಿದೆ ಎಂದು ಆರೋಪಿಸಿ ನಗರದಲ್ಲಿ ಕಾಂಗ್ರೆಸ್, ಜೆಡಿಎಸ್, ಸಿಪಿಐ, ಬಿಎಸ್​ಪಿ, ರೈತಸಂಘ, ನವಕರ್ನಾಟಕ ಯುವಶಕ್ತಿ, ಡಿಎಸ್​ಎಸ್ ಮುಖಂಡರು ಆಜಾದ್ ಪಾರ್ಕ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಮಾತನಾಡಿ, ಸಂವಿಧಾನ ಬದಲಿಸಿ ಜನರ ಭಾವನೆ ಕೆರಳಿಸುವ ಷಡ್ಯಂತ್ರ ಬಿಜೆಪಿಯದು. ಈ ವಿಷಯವನ್ನು ಮನೆ ಮನೆಗೆ ಮುಟ್ಟಿಸದಿದ್ದರೆ ಎಲ್ಲರ ಬದುಕು ಸರ್ವನಾಶವಾಗುತ್ತದೆ. ಬಿಜೆಪಿ ಎಂದಿಗೂ ಸಂವಿಧಾನ ವಿರೋಧಿ. ಯಡಿಯೂರಪ್ಪ ಕಳೆದ ಬಾರಿ ಮುಖ್ಯಮಂತ್ರಿಯಾದ ಮೊದಲ ದಿನವೇ ತಮ್ಮ ಕಚೇರಿಯಲ್ಲಿದ್ದ ಡಾ. ಅಂಬೇಡ್ಕರ್ ಭಾವಚಿತ್ರ ತೆಗೆಸಿದ್ದರು ಎಂದು ಆರೋಪಿಸಿದರು.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್ ಮಾತನಾಡಿ, ಅಂಬೇಡ್ಕರ್ ರಚಿಸಿರುವ ಸಂವಿಧಾನ ದಲಿತರಿಗೆ ಸೀಮಿತವಾಗಿಲ್ಲ. ದೇಶದ ಅಭಿವೃದ್ಧಿಗಾಗಿ ರಚನೆಯಾಗಿದೆ. ಶಿಕ್ಷಣ ಸಚಿವರು ಸಹ ಸಂವಿಧಾನ ನೀಡಿರುವ ಅವಕಾಶದಿಂದಲೇ ಅಧಿಕಾರ ಗಳಿಸಿದ್ದಾರೆ ಎನ್ನುವುದನ್ನು ಅರಿತುಕೊಳ್ಳಬೇಕು. ಸುತ್ತೋಲೆ ಹೊರಡಿಸಿದ ಅಧಿಕಾರಿಗಳು ಸೇರಿ ಸಚಿವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಮಾಜಿ ಸಚಿವೆ ಮೋಟಮ್ಮ ಮಾತನಾಡಿ, ದೇಶದ ಇತಿಹಾಸವನ್ನು ಬದಲಿಸಲು ಹೊರಟಿರುವ ಬಿಜೆಪಿಯನ್ನು ಮನೆಗೆ ಕಳುಹಿಸಬೇಕು. ಅವರಿಗೆ ದೇಶವಾಳಲು ಯೋಗ್ಯತೆ ಇಲ್ಲ. ನರೇಂದ್ರ ಮೋದಿ ಮಹಾತ್ಮಾ ಗಾಂಧಿಗಿಂತ ದೊಡ್ಡ ವ್ಯಕ್ತಿಯಾಗಲು ಹೊರಟಿದ್ದಾರೆ. ಅಂಬೇಡ್ಕರ್​ಗೆ ಅಪಮಾನಿಸುವಂಥ ಕ್ರಮವನ್ನು ಖಂಡಿಸಿ ಶಿಕ್ಷಣ ಇಲಾಖೆ, ಶಿಕ್ಷಣ ಸಚಿವರ ಮನೆ ಹಾಗೂ ವಿಧಾನಸೌಧಕ್ಕೆ ಮುತ್ತಿಗೆ ಹಾಕಬೇಕು. ಈ ವಿಚಾರದಲ್ಲಿ ಜನರನ್ನು ಬಡಿದೆಬ್ಬಿಸುವ ಕೆಲಸ ಆಗಬೇಕು ಎಂದರು.

ಬಿಎಸ್​ಪಿ ಮುಖಂಡ ಕೆ.ಟಿ.ರಾಧಾಕೃಷ್ಣ ಮಾತನಾಡಿ. ಅಂಬೇಡ್ಕರ್ ಅವರನ್ನು ಅಪಮಾನಿಸುವಂತಹ ಸುತ್ತೋಲೆ ಹೊರಬಿದ್ದ ಹಿನ್ನೆಲೆಯಲ್ಲಿ ಸಚಿವ ಸುರೇಶ್​ಕುಮಾರ್, ಶಿಕ್ಷಣ ಇಲಾಖೆ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಅವರನ್ನು ವಜಾಮಾಡಬೇಕೆಂದು ಒತ್ತಾಯಿಸಿದರು.

ಸಿಪಿಐ ಮುಖಂಡ ಬಿ.ಅಮ್ಜದ್ ಮಾತನಾಡಿ, ದೇಶದ ಸಂವಿಧಾನ ಬದಲಿಸುವ ಷಡ್ಯಂತ್ರದ ಒಂದು ಭಾಗವಾಗಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ ಎಂದು ಆಪಾದಿಸಿದರು.

ವಿಧಾನಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದವರನ್ನು ಬಿಜೆಪಿ ಅಪಮಾನಿಸುತ್ತಿದೆ. ತಾವು ಕರ್ತವ್ಯ ನಿರ್ವಹಿಸುವ ವ್ಯವಸ್ಥೆ ಸರಿ ಇಲ್ಲ ಎನ್ನುವುದಾದರೆ ಸಚಿವರು ತಮ್ಮ ಮನಸ್ಥಿತಿಯನ್ನಾದರೂ ಸರಿಪಡಿಸಿಕೊಳ್ಳಬೇಕಿದೆ. ಈ ವಿಚಾರದಲ್ಲಿ ಜನ ಜಾಗೃತರಾಗಬೇಕು ಎಂದರು.

ಸಿಪಿಐ ಮುಖಂಡ ಎಚ್.ಎಂ.ರೇಣುಕಾರಾಧ್ಯ ಮಾತನಾಡಿ, ಆರ್​ಎಸ್​ಎಸ್, ಬಿಜೆಪಿ ಈ ದೇಶವನ್ನು ಆಳುತ್ತಿವೆ. ಆರ್​ಎಸ್​ಎಸ್ ಎಲ್ಲರನ್ನೂ ಸಮಾನವಾಗಿ ಒಯ್ಯುವಂತಹ ಸಂಘಟನೆಯಲ್ಲ ಎಂದು ಆಕ್ಷೇಪಿಸಿದರು.

ಮುಖಂಡರಾದ ಬಿ.ಎಂ.ಸಂದೀಪ್, ಎಂ.ಎಲ್.ಮೂರ್ತಿ, ಪಿ.ಸಿ.ರಾಜೇಗೌಡ, ಹಿರೇಮಗಳೂರು ಪುಟ್ಟಸ್ವಾಮಿ, ಹೊಲದಗದ್ದೆ ಗಿರೀಶ್, ತೇಗೂರು ಜಗದೀಶ್, ಗುರುಶಾಂತಪ್ಪ, ರವೀಶ್ ಬಸಪ್ಪ, ಕೆ.ಪಿ.ರಾಜರತ್ನಂ, ಆರ್. ಆರ್.ಮಹೇಶ್, ಜಿ.ಬಿ.ಪವನ್ ಇತರರಿದ್ದರು.</

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...