ಸಚಿವ ಜಮೀರ್​ ರಾಜೀನಾಮೆಗೆ ಬಿಜೆಪಿ ಪಟ್ಟು

blank

ದೊಡ್ಡಬಳ್ಳಾಪುರ:ವಕ್ಫ್​ ಬೋರ್ಡ್​ನಿಂದ ರೈತರ ಭೂಮಿಯ ರಕ್ಷಣೆ ಮತ್ತು ಸಚಿವ ಜಮೀರ್​ ಅಹ್ಮದ್​ ಖಾನ್​ ಅವರನ್ನು ಮಂತ್ರಿ ಮಂಡಲದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ವತಿಯಿಂದ ತಾಲೂಕು ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರವು ರಾಜ್ಯದಲ್ಲಿ ತುಲಕ್​ ನೀತಿ ಜಾರಿಗೆ ತರುತ್ತಿದೆ. ಒಂದು ಕೋಮಿನ ಓಲೈಕೆಗಾಗಿ ರಾಜ್ಯದ ರೈತ ಸಮುದಾಯವನ್ನು ನಾಶ ಮಾಡಲು ಹೊರಟಿರುವ ಅಲ್ಪಸಂಖ್ಯಾತರ ಖಾತೆ ಸಚಿವ ಜಮೀರ್​ ಅಹ್ಮದ್​ ಅವರು ಮುಖ್ಯಮಂತ್ರಿ ಸೂಚನೆಯಂತೆ ಕ್ರಮ ಕೈಗೊಳ್ಳಲಾಗುತ್ತಿದ್ದಾರೆ. ಇದರ ಫಲವಾಗಿ ರಾಜ್ಯದ ಬಹುತೇಕ ರೈತರು ತೀವ್ರ ಸಂಕಷ್ಟ ಮತ್ತು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣ ಆಕ್ರೋಶ ಹೊರಹಾಕಿದರು.

ಆಮಾಯಕ ರೈತರ ಪಹಣಿ ಪತ್ರಗಳಲ್ಲಿ ವಕ್ಫ್​ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸುವುದರ ಮೂಲಕ ರೈತರ ಜಮೀನನ್ನು ರಾಜ್ಯಾದ್ಯಂತ ಕಬಳಿಸುವ ಹುನ್ನಾರ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ತಾಲೂಕು ಅಧ್ಯಕ್ಷ ನಾಗೇಶ ಮಾತನಾಡಿ, ಈಗಾಗಲೇ ಸಾವಿರಾರು ರೈತರ ಪಹಣಿಗಳಲ್ಲಿ ವಕ್ಫ್​ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಾಗಿರುವುದರಿಂದ ನಮ್ಮ ಜಿಲ್ಲೆ ಸೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್​, ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಚನಾತ್ಮಕ ಪ್ರತಿಪಕ್ಷವಾಗಿ ನಾವು ರೈತರ ಪರ ನಿಂತು ಸರ್ಕಾರವನ್ನು ಎಚ್ಚರಿಸುವ ಹೋರಾಟಕ್ಕೆ ಧುಮುಕಿದ್ದೇವೆ. ರಾಜ್ಯದಾದ್ಯಂತ ನಮ್ಮ ಪಕ್ಷ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಎಲ್ಲ ತಹಸೀಲ್ದಾರರ ಕಚೇರಿಗಳ ಮುಂದೆ ನೊಂದ ರೈತರನ್ನೊಳಗೊಂಡಂತೆ ಬೃಹತ್​ ಸಂಖ್ಯೆಯಲ್ಲಿ ಹೋರಾಟ ರೂಪಿಸಿದ್ದೇವೆ ಎಂದರು. ರಾಜ್ಯ ಸರ್ಕಾರ ಹಾಗೂ ಅಲ್ಪಸಂಖ್ಯಾತ ಸಚಿವ ಜಮೀರ್​ ಅಹಮ್ಮದ್​ ಅವರ ವಿರುದ್ಧ ೂಷಣೆ ಕೂಗಿದ ಪ್ರತಿಭಟನಾಕಾರರು ತಹಸೀಲ್ದಾರ್​ ವಿಭಾ ವಿದ್ಯಾ ರಾಥೋಡ್​ ಅವರ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಮುಖ್ಯಮಂತ್ರಿಗಳು ಈ ಕೂಡಲೇ ಜಮೀರ್​ ಅಹ್ಮದ್​ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಆಕ್ರಮವಾಗಿ ಈಗಾಗಲೇ ವಕ್ಫ್​ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ಪಹಣಿಗಳಲ್ಲಿ ನಮೂದಿಸಿರುವ ಪಹಣಿಗಳನ್ನು ಈ ಕೂಡಲೇ ಹಿಂಪಡೆಯಬೇಕು.

| ನಾಗೇಶ ಬಿಜೆಪಿ ತಾಲೂಕು ಅಧ್ಯಕ್ಷ

Share This Article

2025ರಲ್ಲಿ ಈ 3 ರಾಶಿಯವರಿಗೆ ರಾಜಯೋಗ!? ಅನೇಕ ರೀತಿಯಲ್ಲಿ ಹಣದ ಹರಿವು, ಐಷಾರಾಮಿ ಜೀವನ | Royal Life

Royal Life : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…

ಜೇನುತುಪ್ಪ ಜತೆ ಹುರಿದ ಶುಂಠಿ ತಿಂದರೆ ಗಂಟಲು ನೋವು ಮಾಯಾ! ಹೀಗಿವೆ ಪ್ರಯೋಜನಗಳು

ಬೆಂಗಳೂರು: ಜೇನುತುಪ್ಪ ಮತ್ತು ಶುಂಠಿ ಆರೋಗ್ಯಕ್ಕೆ ತುಂಬಾ ಪ್ರಯೋಜನ ಎಂಬ ವಿಷಯ ಬಹುತೇಕರಿಗೆ ತಿಳಿದಿದೆ. ಈ…

ಸಾಮಾನ್ಯವಾಗಿ ಮಾಡುವ ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ ಎಚ್ಚರ! Relationship Tips

Relationship Tips : ಪರಸ್ಪರ ತಿಳುವಳಿಕೆಯುಳ್ಳ ಉತ್ತಮ ಲೈಂಗಿಕ ಜೀವನವು ಸಂತೋಷದ ದಾಂಪತ್ಯಕ್ಕೆ ಕಾರಣವಾಗುತ್ತದೆ. ಲೈಂಗಿಕ…