28.5 C
Bengaluru
Monday, January 20, 2020

ಸನವಳ್ಳಿ ಗ್ರಾಮಸ್ಥರ ಪ್ರತಿಭಟನೆ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಸರಬರಾಜು ಆಗಿರುವ ದವಸ ಧಾನ್ಯಗಳನ್ನು ಕದ್ದು ಸಾಗಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿ ಅಂಗನವಾಡಿ ಕೇಂದ್ರದ ಎದುರು ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು.

‘ಈ ಹಿಂದೇ ಇದೇ ಅಂಗನವಾಡಿಯಲ್ಲಿ ಬೇಜವಾಬ್ದಾರಿಯಿಂದ ಒಂದು ಮಗುವನ್ನು ಒಳಗೆ ಬಿಟ್ಟು ಬೀಗ ಹಾಕಿಕೊಂಡು ಹೋಗಿದ್ದರು. ರಾತ್ರಿ 12ಗಂಟೆಗೆ ಪಾಲಕರು ನೋಡಿದ್ದರು. ಆ ಪ್ರಕರಣದಲ್ಲೇ ಅವರ ವಿರುದ್ಧ ಕ್ರಮ ಜರುಗಿಸಬೇಕಾಗಿತ್ತು. ದವಸ-ಧಾನ್ಯ ಸಮೇತ ಗ್ರಾಮಸ್ಥರ ಕೈಯಲ್ಲಿ ಸಿಕ್ಕುಬಿದ್ದ ಅಂಗನವಾಡಿ ಕಾರ್ಯಕರ್ತೆ ಈಗ ರಜೆ ಹಾಕಿದ್ದೇನೆಂದು ಸುಳ್ಳು ಹೇಳುತ್ತಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ಜಿಪಂ ಸದಸ್ಯ ಎಲ್.ಟಿ. ಪಾಟೀಲ ಹಾಗೂ ಗ್ರಾಮಸ್ಥರು ಒತ್ತಾಯಿಸಿದರು. ನಂತರ ಸ್ಥಳಕ್ಕೆ ಆಗಮಿಸಿದ ಸಿಡಿಪಿಒ ಎಚ್.ಬಿ.ಬೆಲಪತ್ತಾರ ಮತ್ತು ಪೊಲೀಸರು ಗ್ರಾಮಸ್ಥರ ಮನವೊಲಿಸಿ, ‘ಸೊಮವಾರ, ಕಾರ್ಯಕರ್ತೆ ಮತ್ತು ಸಹಾಯಕಿಯನ್ನು ಬದಲಾಯಿಸಲಾಗುವುದು’ ಎಂದು ಭರಸವೆ ನೀಡಿದರು.

ಘಟನೆ ಹಿನ್ನೆಲೆ

ಆ. 3ರಂದು ಅಂಗನವಾಡಿ ಕೇಂದ್ರದಿಂದ ದವಸ ಧಾನ್ಯಗಳನ್ನು ಟಾಟಾ ಏಸ್ ವಾಹನದಲ್ಲಿ ಸಾಗಿಸುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವರ್ತರಾದ ಪೊಲೀಸರು, ದವಸ-ಧಾನ್ಯ ಮತ್ತು ಚಾಲಕನನ್ನು ವಾಹನ ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ. ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸಂತೃಪ್ತಿ ಕಳಸಗೇರಿ, ಸಹಾಯಕಿ ರೇಣುಕಾ ಓಣಿಕೇರಿ, ಕಾರ್ಯಕರ್ತೆಯ ಗಂಡ ಗುಡದಯ್ಯ ಕಳಸಗೇರಿ ಮತ್ತು ವಾಹನ ಚಾಲಕ ಮಂಜುನಾಥ ಆರೋಪಿಗಳಾಗಿದ್ದಾರೆ. ಈ ಕುರಿತು ಸನವಳ್ಳಿ ಗ್ರಾಮದ ಪ್ರಭು ಅರಶಿಣಗೇರಿ ರಾಣೆಗೆ ದೂರು ಸಲ್ಲಿಸಿದ್ದಾರೆ.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...