25.1 C
Bangalore
Friday, December 6, 2019

ಸಮಯಕ್ಕೆ ಸರಿಯಾಗಿ ಇಲ್ಲದ ಸಾರಿಗೆ ವ್ಯವಸ್ಥೆ

Latest News

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ಸಿದ್ದಾಪುರ: ಸಮಯಕ್ಕೆ ಸರಿಯಾಗಿ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ನಮ್ಮ ಭವಿಷ್ಯ ಅತಂತ್ರವಾಗುತ್ತಿದೆ. ಸರಿಯಾಗಿ ಶಾಲಾ- ಕಾಲೇಜಿಗೆ ತೆರಳಲಾಗುತ್ತಿಲ್ಲ. ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ತಾಲೂಕಿನ ವಿವಿಧ ಶಾಲಾ- ಕಾಲೇಜ್ ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡ ಘಟನೆ ತಾಪಂ ಕೆಡಿಪಿ ಸಭೆಯಲ್ಲಿ ನಡೆಯಿತು.

ತಾಪಂ ಅಧ್ಯಕ್ಷ ಸುಧೀರ ಬಿ. ಗೌಡರ್ ಅಧ್ಯಕ್ಷತೆಯಲ್ಲಿ ಸೋಮವಾರ ಜರುಗಿದ ಕೆಡಿಪಿ ಸಭೆಗೆ ಆಗಮಿಸಿದ ವಿದ್ಯಾರ್ಥಿಗಳು ಸಾರಿಗೆ ಇಲಾಖೆ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.

ಸಿದ್ದಾಪುರದಿಂದ ನಿತ್ಯ ಬೆಳಗ್ಗೆ ಹಾಗೂ ಸಂಜೆ ಮತ್ತು ಶಿರಸಿಯಿಂದ ಸಿದ್ದಾಪುರಕ್ಕೆ ಹಾರ್ಸಿಕಟ್ಟಾ-ಮುಠ್ಠಳ್ಳಿ-ಹಾಲ್ಕಣಿ-ಕಾನಸೂರು ಮಾರ್ಗವಾಗಿ ಬಸ್ ಓಡಿಸುವಂತೆ ಹಲವು ಬಾರಿ ಕೇಳಿಕೊಂಡಿದ್ದೇವೆ. ಕಿಲಾರ, ಮುಠ್ಠಳ್ಳಿ, ಹಿರೇಕೈ, ಹಾಲ್ಕಣಿ, ಬಣಗಿ ಮತ್ತಿತರ ಗ್ರಾಮೀಣ ಭಾಗದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾರಿಗೆ ವ್ಯವಸ್ಥೆ ಇಲ್ಲದೆ 10 ಕಿ.ಮೀ. ನಡೆದು ಮುಖ್ಯರಸ್ತೆಗೆ ಬರಬೇಕಾಗಿದೆ. ನಮ್ಮ ಕಷ್ಟ ಕೇಳುವವರಿಲ್ಲ ಎಂದು ವಿದ್ಯಾರ್ಥಿಗಳು ಕಣ್ಣೀರು ಹಾಕಿದರು.

ಈ ವೇಳೆ ತಾಪಂ ಅಧ್ಯಕ್ಷ ಸುಧೀರ ಬಿ.ಗೌಡರ್ ಮಾತನಾಡಿ, ಈ ಕುರಿತು ಹಲವು ಬಾರಿ ಸಾರಿಗೆ ಅಧಿಕಾರಿಗೆ ತಿಳಿಸಲಾಗಿದೆ. ಕೆಡಿಪಿ ಸಭೆಯಲ್ಲಿಯೂ ಮನವರಿಕೆ ಮಾಡಲಾಗಿದೆ. ತಾಲೂಕಿನಲ್ಲಿನ ಸಾರಿಗೆ ವ್ಯವಸ್ಥೆ ಸರಿಪಡಿಸುವ ಕುರಿತು ಸಾರಿಗೆ ಇಲಾಖೆಯ ಡಿಸಿ ಅವರ ಉಪಸ್ಥಿತಿಯಲ್ಲಿ ಸಾರಿಗೆ ಅದಾಲತ್ ನಡೆಸಿ ಸಮಸ್ಯೆ ಪರಿಹರಿಸಿಕೊಡುತ್ತೇವೆ ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.

ತಾಲೂಕಿನ ಹಲವೆಡೆ ಶಂಕಿತ ಡೆಂಘೆ ಪ್ರಕರಣ ಹೆಚ್ಚಾಗುತ್ತಿವೆ. ಆದರೆ, ಇವರೆಲ್ಲ ತಾಲೂಕಿನಲ್ಲಿ ವಾಸ ಮಾಡುವವರಲ್ಲ. ಬೆಂಗಳೂರು ಹಾಗೂ ಮತ್ತಿತರ ನಗರಗಳಲ್ಲಿ ಇರುವವರು ಎಂದು ತಾಲೂಕು ವೈದ್ಯಾಧಿಕಾರಿ ಡಾ. ಲಕ್ಷ್ಮೀಕಾಂತ ನಾಯ್ಕ ಹೇಳಿದರು.

ತಾಲೂಕು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ ಅಲ್ಲಿನ ಕೆಲ ಸಿಬ್ಬಂದಿ ರೋಗಿಗಳೊಂದಿಗೆ ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸದಸ್ಯೆ ಗಿರಿಜಾ ಗೌಡ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಶ್ರೀನಿವಾಸ ಅವರ ಗಮನಕ್ಕೆ ತಂದರು.

ಅತಿಯಾದ ಮಳೆಯಿಂದ ಅಪಾರ ಬೆಳೆ ಹಾನಿ ಉಂಟಾಗಿದ್ದು, ಈಗಾಗಲೇ ಹಾನಿ ಸಮೀಕ್ಷೆ ನಡೆಸಿ ವರದಿ ನೀಡಲಾಗಿದೆ. ಅದರ ನಂತರವೂ ಮತ್ತಷ್ಟು ಬೆಳೆ ಹಾನಿಯಾಗಿದೆ. ಆ ಕುರಿತು ಸಮೀಕ್ಷೆ ನಡೆಸಿ ರೈತರಿಂದ ಅರ್ಜಿ ಸ್ವೀಕರಿಸಿ, ಪರಿಹಾರ ನೀಡಲು ಮುಂದಾಗಬೇಕು ಎಂದು ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಗೆ ಸುಧೀರ ಗೌಡರ್ ಸೂಚನೆ ನೀಡಿದರು.

ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ, ಸದಸ್ಯರಾದ ವಿವೇಕ ಭಟ್ಟ, ರಘುಪತಿ ಹೆಗಡೆ, ಪದ್ಮಾವತಿ ಮಡಿವಾಳ, ತಾಪಂ ಇಒ ದಿನೇಶ ಡಿ.ಈ. ಉಪಸ್ಥಿತರಿದ್ದರು.

ನನ್ನಿಂದ ಸಮಸ್ಯೆ ಪರಿಹಾರ ಆಗುವುದಿಲ್ಲ
ಸಾರಿಗೆ ಸಮಸ್ಯೆ ನನ್ನಿಂದ ಪರಿಹಾರ ಆಗುವುದಿಲ್ಲ. ಸಮಸ್ಯೆ ಪರಿಹರಿಸುವಂತೆ ಮೇಲಧಿಕಾರಿಗಳಿಗೆ ಮನವರಿಕೆ ಮಾಡಿಕೊಡುವುದು ನನ್ನ ಕೆಲಸ ಎಂದು ಸಾರಿಗೆ ನಿಯಂತ್ರಣಾಧಿಕಾರಿ ಎಂ.ಡಿ. ನಾಯ್ಕ ಅವರು ತಾಪಂ ಸದಸ್ಯ ನಾಸೀರ್ ಖಾನ್ ಅವರ ಪ್ರಶ್ನೆಗೆ ಉತ್ತರಿಸಿದರು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...