18.5 C
Bangalore
Monday, December 16, 2019

ಸಮರ್ಪಕ ಕಾಮಗಾರಿಗೆ ಆಗ್ರಹಿಸಿ ಪ್ರತಿಭಟನೆ

Latest News

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ಶತಮಾನ ಶಾಲೆಗಿಲ್ಲ ಸೌಲಭ್ಯಗಳ ಭಾಗ್ಯ

ಕೆ.ಕೆಂಚಪ್ಪ ಮೊಳಕಾಲ್ಮೂರು: ಶತಮಾನ ಪೂರೈಸಿದ ಪಟ್ಟಣದ ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಲ ಸೌಲಭ್ಯಗಳ ಕೊರತೆಯಿಂದ ನಲುಗುತ್ತಿದೆ. ಒಂದು ತಲೆಮಾರಿಗೆ ಅಕ್ಷರ ದಾಸೋಹ...

ಕುಮಟಾ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿರುವ ಚತುಷ್ಪಥ ಕಾಮಗಾರಿ ಅಸಮರ್ಪಕವಾಗಿದೆ ಮತ್ತು ಹೊಂಡ ಬಿದ್ದಿರುವ ಹೆದ್ದಾರಿಯನ್ನು ದುರಸ್ತಿಪಡಿ ಸುವಂತೆ ಆಗ್ರಹಿಸಿ ಕರವೇ ಸದಸ್ಯರು ತಾಲೂಕಿನ ಕಡೇಕೋಡಿ ಯಲ್ಲಿರುವ ಐಆರ್​ಬಿ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಮಾತನಾಡಿ, ಹೆದ್ದಾರಿಯಲ್ಲಿ ಹೊಂಡಗಳು ವಿಪರೀತವಾಗಿದ್ದು, ಅಪಘಾತಗಳು ಸಂಭವಿಸುತ್ತಿವೆ. ಕೂಡಲೆ ಹೊಂಡಗಳನ್ನು ಮುಚ್ಚಬೇಕು. ಚತುಷ್ಪಥದ ಇಕ್ಕೆಲಗಳಲ್ಲಿ ನೀರಿನ ಹರಿವಿಗೆ ಸಮಸ್ಯೆಯಾಗಿ ಕೃಷಿ ಕಾರ್ಯಗಳಿಗೆ ತೊಂದರೆಯಾಗಿದೆ. ಗಟಾರ, ಕಾಲುವೆಗಳ ನಿರ್ಮಾಣ ಸರಿಯಾಗಿ ಆಗಬೇಕು ಎಂದರು.

ಖೈರೆ, ತಂಡ್ರಕುಳಿಯಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ಸಿಮೆಂಟ್ ಪ್ಲಾಸ್ಟರ್ ಕುಸಿದು ಬೀಳುತ್ತಿದೆ. ಇಂಥ ಕಾಮಗಾರಿಯನ್ನು ಸಮರ್ಪಕಗೊಳಿಸದೆ ಟೋಲ್ ವಸೂಲಿಗೆ ಮುಂದಾದರೆ ಟೋಲ್​ನಾಕಾವನ್ನೇ ಧ್ವಂಸ ಮಾಡುತ್ತೇವೆ ಎಂದು ಎಚ್ಚರಿಸಿದರು.

ದೇವಗಿರಿ ಪಂಚಾಯಿತಿ ಅಧ್ಯಕ್ಷ ಎಸ್.ಟಿ. ನಾಯ್ಕ ಮಾತನಾಡಿ, ಈಗಾಗಲೇ ಹೊಳೆಗದ್ದೆ ಸುರಭಿಕಟ್ಟೆ ಬಳಿ ಟೋಲ್ ನಾಕಾದ ಅಕ್ಕಪಕ್ಕದಲ್ಲಿದ್ದ ಗದ್ದೆಗಳಿಗೆ ಮಣ್ಣು ತುಂಬಿ ರಸ್ತೆ ಕೆಲಸ ಮಾಡಲಾಗಿದೆ. ಇದರಿಂದಾಗಿ ಮಳೆ ನೀರು ಹರಿಯದೆ ಸುರಭಿಕಟ್ಟೆ, ಬೆತ್ತಗೇರಿ, ಉಮಾಮಹೇಶ್ವರ, ಆಮ್ಲೇಕೇರಿ, ಎಸ್​ಸಿ ಕಾಲನಿಗಳಿಗೆ ನೀರು ನುಗ್ಗುತ್ತಿದೆ ಎಂದು ರಾ.ಹೆ. ಯೋಜನಾ ನಿರ್ದೇಶಕರಿಗೆ ಅಧಿಕೃತವಾಗಿ ಪಂಚಾಯಿತಿಯಿಂದ ತಿಳಿಸಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಮೇಘರಾಜ ನಾಯ್ಕ ಅವರು ಕರವೇ, ಐಆರ್​ಬಿ ಹಾಗೂ ರಾ.ಹೆ. ಪ್ರಾಧಿಕಾರದ ಅಧಿಕಾರಿ ಗಳೊಂದಿಗೆ ಸಮಾಲೋಚನೆ ನಡೆಸಿ ದರು. ಕಾಮಗಾರಿಯಿಂದ ಸಮಸ್ಯೆ ಸೃಷ್ಟಿಯಾಗಿ ರುವ ಕಡೆ ವಾರದೊಳಗೆ ಸೂಕ್ತ ನಿರ್ವಹಣೆ ಕಾಮಗಾರಿ ಮಾಡಲಾಗುವುದು. ಹೊಂಡ ಗಳನ್ನು ಮುಚ್ಚಲಾಗುವುದು ಎಂದು ಯೋಜನೆ ವ್ಯವಸ್ಥಾಪಕ ಗುರುರಾಜ ಪಾಟೀಲ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಅರುಣ ಹರಕಡೆ, ಪೂರ್ಣಿಮಾ ರೇವಣಕರ, ಗಣಪತಿ ನಾಯ್ಕ, ವಿನಾಯಕ ನಾಯ್ಕ, ಮಂಜುನಾಥ ಗೌಡ, ನಾಗರಾಜ ನಾಯ್ಕ, ತಿಮ್ಮಪ್ಪ ನಾಯ್ಕ, ಬಾಬು ಮುಕ್ರಿ, ಪಾಂಡು ಪಟಗಾರ, ಅಳಕೋಡ ಪಂಚಾಯಿತಿ ಅಧ್ಯಕ್ಷ ಕೃಷ್ಣಾನಂದ ವೆರ್ಣೆಕರ, ವಾಲಗಳ್ಳಿ ಪಂಚಾಯಿತಿ ಉಪಾಧ್ಯಕ್ಷ ಹನುಮಂತ ಪಟಗಾರ ಇತರರು ಇದ್ದರು.</

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...