ಸಮಾಜದಲ್ಲಿ ವಕೀಲರಿಗೆ ಇದೆ ವಿಶೇಷ ಗೌರವ

blank

ಚಿತ್ರದುರ್ಗ: ಸಮಾಜದ ಅಭಿವೃದ್ಧಿ ಹಾಗೂ ಸರ್ಕಾರದ ಉತ್ತಮ ಆಡಳಿತಕ್ಕೆ ವಕೀಲರ ಪಾತ್ರ ಅತಿಮುಖ್ಯ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು.
ಕರ್ನಾಟಕ ಲೋಕಾಯುಕ್ತದ ಸಹಯೋಗದಲ್ಲಿ ನಗರದ ಜಿಲ್ಲಾ ವಕೀಲರ ಸಂಘದಲ್ಲಿ ಗುರುವಾರ ಏರ್ಪಡಿಸಿದ್ದ ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರ ಕುರಿತು ವಕೀಲರೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ವಕೀಲರಿಗೆ ವಿಶೇಷ ಗೌರವವಿದೆ. ಜನರು ತಮಗೆ ಕಷ್ಟ ಬಂದಾಗ, ಅನ್ಯಾಯವಾದಾಗ ಮೊದಲಿಗೆ ಅವರು ನ್ಯಾಯಾಂಗದ ಮೇಲೆ ನಂಬಿಕೆ ಇರಿಸಿ ವಕೀಲರ ಬಳಿಗೆ ಬರುತ್ತಾರೆ. ಹಾಗಾಗಿ ಸಮಾಜ ಹಾಗೂ ಉತ್ತಮ ಆಡಳಿತಕ್ಕೆ ವಕೀಲರ ಪಾತ್ರ ಹಿರಿದಾಗಿದೆ ಎಂದರು.
ಎಲ್ಲರೂ ಗೌರವಯುತವಾಗಿ ಜೀವನ ನಡೆಸಲು ಸಂವಿಧಾನ ಅವಕಾಶ ಕಲ್ಪಿಸಿದೆ. ಅನ್ಯಾಯಕ್ಕೊಳಗಾದವರಿಗೆ ಕಾನೂನು ರಕ್ಷಣೆ ನೀಡುವ ಮೂಲಕ ನ್ಯಾಯವೊದಗಿಸಲು ಮುಂದಾಗಬೇಕು ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ. ತಿಪ್ಪೇಸ್ವಾಮಿ ಮಾತನಾಡಿ, ಶರೀರಕ್ಕೆ ಕಾಯಿಲೆ ಬಂದಾಗ ವೈದ್ಯರ ಬಳಿ ತೆರಳುತ್ತಾರೆ. ಪ್ರಬುದ್ಧ, ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ವಕೀಲರ ಸೇವೆ ಪ್ರಮುಖವಾಗಿದೆ ಎಂದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣವಾಸುದೇವ್, ಕರ್ನಾಟಕ ಲೋಕಾಯುಕ್ತ ಅಪರ ನಿಬಂಧಕರಾದ ಜೆ.ವಿ. ವಿಜಯಾನಂದ, ಪೃಥ್ವಿರಾಜ್ ವರ್ಣೇಕರ್,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ‌್ಯದರ್ಶಿ ಎಂ.ವಿಜಯ್,ಉಪ ಲೋಕಾಯುಕ್ತರ ಆಪ್ತ ಕಾರ್ರ‌್ಯ ದರ್ಶಿ ಕಿರಣ್ ಪಿ.ಎಂ.ಪಾಟೀಲ್,ಲೋಕಾಯುಕ್ತ ಎಸ್‌ಪಿ ಎನ್.ವಾಸುದೇವರಾಮ,ವಿಶೇಷ ಸಾರ್ವಜನಿಕ ಅಭಿಯೋಜಕ ಬಿ.ಮಲ್ಲೇಶಪ್ಪ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಗಂಗಾಧರ್, ನ್ಯಾಯಾಧೀಶರು,ವಕೀಲರು ಹಾಗೂ ಕಾನೂನು ವಿದ್ಯಾರ್ಥಿಗಳು ಇದ್ದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…