ಸುರಪುರ: ಸಮಾಜದ ಅಬಿವೃದ್ಧಿಗೆ ಶಿಕ್ಷಕರ ಪಾತ್ರ ಹಿರಿದಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.
ಇಲ್ಲಿನ ಗರುಡಾದ್ರಿ ಕಲಾ ಮಂದಿರದಲ್ಲಿ ಸೋಮವಾರ ಹಮ್ಮಿಕೊಂಡ ಸುರಪುರ-ಹುಣಸಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕರ‍್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ, ಸದೃಢ ಮಾನವ ಸಂಪನ್ಮೂಲ ನಿರ್ಮಿಸುವ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಿಕ್ಷಕರ ಪಾತ್ರ ಅತ್ಯಂತ ಹಿರಿದಾಗಿದೆ ಎಂದರು.
ನಾನು ಇಂದು ಈ ವೇದಿಕೆ ಮೇಲೆ ನಿಂತು ಮಾತನಾಡುತ್ತಿರುವುದಕ್ಕೆ ನನ್ನ ತಂದೆ ಮತ್ತು ಶಿಕ್ಷಕರೇ ಮೂಲ ಕಾರಣ. ಪ್ರತಿಯೊಂದು ಕ್ಷೇತ್ರದಲ್ಲಿಯೂ ಶಿಕ್ಷಕರ ಪಾತ್ರ ಅಪಾರವಾಗಿದೆ. ನಮ್ಮ ತಂದೆ ಗುರುಭವನ ನಿರ್ಮಿಸಿ ಕೊಡುವುದಾಗಿ ಹೇಳಿದ್ದರು. ನಾನು ಮುಂದಿನ ದಿನಗಳಲ್ಲಿ ಅದನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.
ತಾಪಂ ಇಒ ಬಸವರಾಜ ಸಜ್ಜನ್ ಮಾತನಾಡಿ, ರಾಷ್ಟç ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ದೇಶದ ಭವಿಷ್ಯ ಶಿಕ್ಷಕರ ಕೈಯಲ್ಲಿದೆ. ಇಂದಿನ ಮೊಬೈಲ್ ಮತ್ತು ಇಂಟರ್‌ನೆಟ್ ಕಾಲದಲ್ಲಿ ಶಿಕ್ಷಕರ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ. ಸುರಪುರ ತಾಲೂಕು ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂಬುದು ಶಾಸಕರ ಕನಸಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬ ಶಿಕ್ಷಕರು ಕೂಡ ಶಾಲೆಯ ಪ್ರತಿಯೊಂದು ಮಗು ನನ್ನದು ಎಂಬ ದೃಷ್ಟಿಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಜಿಪಂ ಮಾಜಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್ ವಜ್ಜಲ್, ಸುರಪುರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗೋವಿಂದಪ್ಪ ತನಿಕೇದಾರ ಮಾತನಾಡಿದರು. ಬಿಇಒ ಯಲ್ಲಪ್ಪ ಕಾಡ್ಲೂರ ಅಧ್ಯಕ್ಷತೆ ವಹಿಸಿದ್ದರು. ನಯೋಪ್ರಾ ಅಧ್ಯಕ್ಷ ಪ್ರಕಾಶ ಗುತ್ತೇದಾರ, ದೈಹಿಕ ಶಿಕ್ಷಣಾಧಿಕಾರಿ ಮಲ್ಲಣ್ಣ ದೊಡ್ಡಮನಿ, ನೋಡಲ್ ಅಧಿಕಾರಿ ಶಿವಪುತ್ರಪ್ಪ, ಪ್ರಮುಖರಾದ ನಿಂಗರಾಜ ಬಾಚಿಮಟ್ಟಿ, ಬಸವರಾಜ ಜಮದ್ರಖಾನಿ, ದೊಡ್ಡ ದೇಸಾಯಿ ದೇವರಗೋನಾಲ, ಭೀಮನಗೌಡ, ಲಕ್ಷ್ಮೀ ಹೆಮನೂರು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವ ದರಬಾರಿ, ಸಿದ್ದನಗೌಡ ಚೌಧರಿ ಇತರರಿದ್ದರು. ಈ ವೇಳೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಯಿತು.
ಕ್ಷೇತ್ರ ಸಮನ್ವಯಾಧಿಕಾರಿ ಪಂಡಿತ್ ನಿಂಬೂರ ಪ್ರಾಸ್ತಾವಿಕ ಮಾತನಾಡಿದರು. ಮಹಾಂತೇಶ ಗೋನಾಲ ಸ್ವಾಗತಿಸಿದರು. ರಾಜಶೇಖರ ದೇಸಾಯಿ, ಶಿವಲೀಲಾ ಮುರಾಳ, ಶರಣು ಗೋನಾಲ ನಿರೂಪಿಸಿದರು. ಮಹಾದೇವಪ್ಪ ಗುತ್ತೇದಾರ್ ವಂದಿಸಿದರು. ಕಲಾವಿದ ಬಸವರಾಜ್ ಬಂಟನೂರ್ ಮತ್ತು ಅವರ ಸಂಗಡಿಗರು ಪ್ರಾರ್ಥಿನಾ ಗೀತೆ ಹಾಡಿದರು.