ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಧಾರವಾಡ: 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಮುಖ್ಯ ವೇದಿಕೆಗಳಲ್ಲಿ ಶುಕ್ರವಾರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಚಲನಚಿತ್ರ ನಿರ್ದೇಕ ಡಾ. ನಾಗತಿಹಳ್ಳಿ ಚಂದ್ರಶೇಖರ ಅವರು ಮುಖ್ಯ ವೇದಿಕೆಯಲ್ಲಿ ಡೊಳ್ಳು ಬಾರಿಸುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಧಾರವಾಡದ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಶಾಲೆಯ ವಿದ್ಯಾರ್ಥಿಗಳು ಸಮೂಹ ಗಾಯನ ಪ್ರಸ್ತುತಪಡಿಸಿದರು. ನಂತರ ಧಾರವಾಡ ತಾಲೂಕಿನ ಬೆಳ್ಳಿಗಟ್ಟಿ ಗ್ರಾಮದ ಮಹದೇವಪ್ಪ ಯಲ್ಲಪ್ಪ ಹರಿಜನ ಹಾಗೂ ತಂಡದವರು ಗೀಗೀ ಪದ ಪ್ರಸ್ತುತಪಡಿಸಿದರು. ಅನಂತರ ಧಾರವಾಡದ ವನಿತಾ ಮಹಾಲೆ ಹಾಗೂ ತಂಡ ನೃತ್ಯವನ್ನು ಪ್ರಸ್ತುತಪಡಿಸಿತು.