ಸಮ್ಮೇಳನಕ್ಕೆ ಪ್ರಮೀಳಾ ಸರ್ವಾಧ್ಯಕ್ಷೆ

ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಆಗಸ್ಟ್ ಕೊನೇ ವಾರದಲ್ಲಿ ಹಮ್ಮಿಕೊಂಡಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಸಾಹಿತಿ ಪ್ರಮೀಳಾ ಜಾನಪ್ಪಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಕಸಾಪ ತಾಲೂಕಾಧ್ಯಕ್ಷ ಗುರುಬಸಪ್ಪ ಸಜ್ಜನಶೆಟ್ಟಿ ತಿಳಿಸಿದ್ದಾರೆ. ಇತ್ತೀಚೆಗೆ ಏರ್ಪಡಿಸಿದ್ದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಲೇಖಕಿ ಪ್ರಮೀಳಾ ಜಾನಪ್ಪಗೌಡ ಅವರು ಶಾಲೆಯಲ್ಲಿ ಓದಿದ್ದು ಕಡಿಮೆಯಾಗಿದ್ದು, ಜೀವನಾನುಭವದಿಂದ ಕಲಿತ್ತಿದ್ದು ಹೆಚ್ಚು. ಪ್ರಮೀಳಾ ಅವರಿಗೆ ಜಾನಪದ ತ್ರಿಪದಿ, ಶರಣ ವಚನಗಳ ಕಡೆ ಹೆಚ್ಚಿನ ಒಲವು ಇದೆ. ಅವರು `ಲೆಕ್ಕವಿಲ್ಲ ಗೆಜ್ಜೆ ಕುಣಿದಾಗ’ ಕೃತಿ ಜನಮನ್ನಣೆ ಪಡೆದಿದೆ. ಬದುಕು ಸಾಗಲಿ, ನಿರ್ಧಾರ, ಮನುಜ, ಬರೆದೆನವ್ವ ಕವನ ಸೇರಿ ಒಂಬತ್ತಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ರಚಿಸಿದ್ದಾರೆ. ಗುಲ್ಬರ್ಗ ವಿವಿ ರಾಜ್ಯೋತ್ಸವ ಗೌರವ ಪುರಸ್ಕಾರ ಪಡೆದಿದ್ದಾರೆ. ಕಾದಂಬರಿಕಾರ್ತಿ, ಕಥೆಗಾರ್ತಿ, ಕವಯತ್ರಿಯೂ ಆಗಿ ಸಾಹಿತ್ಯ ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.
ಈಗಾಗಲೇ ಸ್ವಾಗತ ಸಮಿತಿ ಅಧ್ಯಕ್ಷರಾಗಿ ವಿನೋದ ಪಾಟೀಲ್ ಸರಡಗಿ, ಕಾರ್ಯಾಧ್ಯಕ್ಷರಾಗಿ ರಾಘವೇಂದ್ರ ಕಲ್ಯಾಣಕರ್ ಅವರನ್ನು ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್​ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್​!

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…

ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಈ 5 ಜನರ ಬಳಿ ನೀವು ಎಂದಿಗೂ ಹೋಗಬೇಡಿ

ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು…

ಈ ದಿನಾಂಕದಂದು ಜನಿಸಿದವರ ಮೇಲೆ ಲಕ್ಷ್ಮೀ ಕೃಪೆ ಹೆಚ್ಚು! ಹಣದ ಕೊರತೆ ಕಾಡುವುದಿಲ್ಲ, ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ