18.5 C
Bangalore
Monday, December 16, 2019

ಸರ್ಕಾರದ ಆದೇಶಕ್ಕೆ ವ್ಯಾಪಕ ಖಂಡನೆ

Latest News

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ಹೊನ್ನಾವರ: ತಾಲೂಕಿನ ಅರಣ್ಯ ಭೂಮಿಯನ್ನು ಶರಾವತಿ ಅಭಯಾರಣ್ಯಕ್ಕೆ ಸೇರ್ಪಡೆಗೊಳಿಸಿರುವ ಸರ್ಕಾರದ ಆದೇಶಕ್ಕೆ ತಾಲೂಕಿನ ಉಪ್ರೋಣಿ ದೇವರಗದ್ದೆಯಲ್ಲಿ ಭಾನುವಾರ ಆಯೋಜಿಸಿದ್ದ ‘ಅಭಯಾರಣ್ಯ ಬಗ್ಗೆ ತಿಳಿವಳಿಕೆ ಶಿಬಿರ’ದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಯಿತು.

ವಾಸ್ತವ್ಯ ಮತ್ತು ಸಾಗುವಳಿಗಾಗಿ ಅರಣ್ಯಭೂಮಿಯನ್ನು ಅವಲಂಬಿಸಿರುವ ಜನರಿಗೆ ಆಘಾತವನ್ನುಂಟುಮಾಡುವ ಯೋಜನೆಯನ್ನು ರದ್ದುಗೊಳಿಸಲು ಹಂತಹಂತವಾಗಿ ಹೋರಾಟ ನಡೆಸಲು ರೂಪುರೇಷೆ ಸಿದ್ಧಪಡಿಸಲಾಯಿತು.

ಜಾಗೃತಿ ಸಭೆ ಉದ್ಘಾಟಿಸಿದ ಜಿಲ್ಲಾ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ಎ. ರವೀಂದ್ರ ನಾಯ್ಕ ಮಾತನಾಡಿ, ಸರ್ಕಾರವು ಜೂ. 7ರಂದು ಶರಾವತಿ ಅಭಯಾರಣ್ಯಕ್ಕೆ ಜಿಲ್ಲೆಯ ವಿವಿಧ ಗ್ರಾಮಗಳ ಅರಣ್ಯ ಭೂಮಿ ಸೇರ್ಪಡೆಗೊಳಿಸಿದ ಕುರಿತು ಅಂತಿಮ ಆದೇಶ ಪ್ರಕಟಿಸಿದೆ. ಇದರಿಂದ ಅರಣ್ಯ ಭೂಮಿ ಸಾಗುವಳಿದಾರರು ಅತಂತ್ರ ಪರಿಸ್ಥಿತಿ ಎದುರಿಸುವಂತಾಗಿದೆ ಎಂದರು.

ಜಿಲ್ಲೆಗೆ ಈಗಾಗಲೇ 5 ಹೈಡ್ರೋ ಪೊ›ಜೆಕ್ಟ್​ಗಳನ್ನು ಹೇರಲಾಗಿದೆ. ಕೈಗಾ, ಸೀಬರ್ಡ್, ಸಿಆರ್​ಜೆಡ್ ಯೋಜನೆಗಳು ಬಂದವು. ಈಗ ಅಭಯಾರಣ್ಯ ಹೆಸರಿನಲ್ಲಿ ಸಾಗುವಳಿದಾರರಿಗೆ ತೊಂದರೆ ನೀಡುವ ಯೋಜನೆ ಹೇರುತ್ತಿರುವುದು ವಿಷಾದನೀಯ. ಜನರ ಅಭಿಪ್ರಾಯ ಸಂಗ್ರಹಿಸದೆ ಆದೇಶ ಹೊರಡಿಸಿರುವುದು ಖಂಡನೀಯ. ಈ ಕುರಿತು ಜಿಲ್ಲೆಯ ಜನಪ್ರತಿನಿಧಿಗಳು ಧ್ವನಿ ಎತ್ತಬೇಕು. ಜನರ ಹಕ್ಕಿಗೆ ತೊಂದರೆಯಾಗದ ಹಾಗೆ ಪ್ರತಿ ಗ್ರಾಪಂ, ತಾಪಂ., ಜಿ.ಪಂ.ಗಳಲ್ಲಿ ವಿಷಯ ಮಂಡಿಸಬೇಕು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು ಎಂದರು.

ಅರಣ್ಯ ಅತಿಕ್ರಮಣದಾರರ ಹೋರಾಟ ಸಮಿತಿಯ ಚಂದ್ರಕಾಂತ ಕೊಚರೇಕರ್, ಮಂಜುನಾಥ ನಾಯ್ಕ ಗೇರುಸೊಪ್ಪ, ಗ್ರಾಪಂ ಸದಸ್ಯರಾದ ಗೋವಿಂದ ನಾಯ್ಕ, ಯೋಗೇಶ ರಾಯ್ಕರ್, ಎಂ.ಜಿ. ನಾಯ್ಕ, ಗಣಪತಿ ನಾಯ್ಕ, ಗಣೇಶ ಕೆಂಬಾಲ, ಹುಸೇನ್ ಗೈಮಾ, ಲಲಿತಾ ಗಾಬಿತ, ಸುಲೋಚನಾ ಗೌಡ, ಅನಂತ ನಾಯ್ಕ ಹೆಗ್ಗಾರ, ತಾಪಂ ಸದಸ್ಯರಾದ ಲೋಕೇಶ ನಾಯ್ಕ, ತುಕಾರಾಮ ನಾಯ್ಕ, ಮಹೇಶ ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕಿನ ವಿವಿಧ ಗ್ರಾಪಂ ವ್ಯಾಪ್ತಿಯ ಮುಖಂಡರು ಹಾಗೂ ಸಾವಿರಾರು ಅರಣ್ಯ ಅತಿಕ್ರಮಣದಾರರು ಪಾಲ್ಗೊಂಡಿದ್ದರು.

ಮನುಕುಲಕ್ಕೆ ಬೇಡವಾದ ಕಾನೂನನ್ನು ಜನರ ಮೇಲೆ ಹೇರಲಾಗಿದೆ. ಅರಣ್ಯ ಭೂಮಿ ಸಾಗುವಳಿದಾರರನ್ನು ಎತ್ತಂಗಡಿ ಮಾಡಲು ಬಿಡುವುದಿಲ್ಲ. ಹೋರಾಟದ ಪ್ರಾರಂಭದಲ್ಲೆ ಸಾವಿರಾರು ಜನರು ಸೇರಿದ್ದೀರಿ. ಅ. 5ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಸೇರಿ ಜೇನುಹುಳದ ಹಾಗೆ ಮುತ್ತಿಗೆ ಹಾಕಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು.
| ಆರ್.ಎಸ್. ರಾಯ್ಕರ್, ಜಿಪಂ ಮಾಜಿ ಅಧ್ಯಕ್ಷ

ಈ ಹಿಂದೆ ಜಮೀನು ಮಂಜೂರಿ ಮಾಡುತ್ತೇವೆ ಎಂದು ಜಿಪಿಎಸ್ ಮಾಡಿಸಿದ ಸರ್ಕಾರ ಜಮೀನನ್ನು ಅಭಯಾರಣ್ಯಕ್ಕೆ ಸೇರಿಸಲಾಗುವುದು ಎಂದು ಹೇಳಿದೆ. ಸಾಗುವಳಿದಾರರು ಹೋರಾಟ ನಡೆಸುವ ಪರಿಸ್ಥಿತಿ ಬಂದಿದೆ. ನಮ್ಮ ಹೋರಾಟ ಯಾವ ರಾಜಕೀಯ ಪಕ್ಷ ಅಥವಾ ಸಂಘಟನೆ ವಿರುದ್ಧವಲ್ಲ. ಯೋಜನೆಯ ಕುರಿತು ತಿಳಿವಳಿಕೆ ಪಡೆದು ಹೋರಾಟ ನಡೆಸಲು ಸೇರಿದ್ದೇವೆ.
| ವಿನೋದ ನಾಯ್ಕ ಮಾವಿನಹೊಳೆ, ಸಂಘಟಕ

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...