ವಿಜಯವಾಣಿ ಸುದ್ದಿಜಾಲ ಕೋಲಾರ
ಸರ್ಕಾರಿ ಕಾಲೇಜುಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿದರೆ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತದೆ. ಅನಿಟ್ಟಿನಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ದವಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ಕರ್ನಾಟಕ ವಿಧಾನ ಮಂಡಳದ ಕಾಗದ ಪತ್ರ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಯಾವುದೇ ವಿಶ್ವವಿದ್ಯಾಲಯವಾಗಲಿ ಅದಕ್ಕೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಿದರೆ ವಿಧ್ಯಾರ್ಥಿಗಳು ದೇಶಕ್ಕೆ ಹೆಸರು ತರಲು ಸಾಧ್ಯವಾಗುತ್ತದೆ. ಕೂಡಲೇ ಯಾವ ಯಾವ ವಿಶ್ವವಿದ್ಯಾಲಯದಲ್ಲಿ ಯಾವ ಸಮಸ್ಯೆಗಳು ಇವೆ ಎಂಬುದನ್ನು ಪಟ್ಟಿ ಸಮಿತಿಗೆ ನೀಡಿದರೆ ಸರ್ಕಾರದ ಗಮನಕ್ಕೆ ತಂದು ಆದಷ್ಟು ಬೇಗ ಅನುದಾನ ಬಿಡುಗಡೆ ಮಾಡಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದಲ್ಲಿನ ನ್ಯೂನತೆಗಳ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ವಿಧಾನ ಮಂಡಳದ ಕಾಗದ ಸಮಿತಿ ಸದಸ್ಯರಾದ ಎಚ್.ಡಿ ರೇವಣ್ಣ, ಎಚ್ ವಿಶ್ವನಾಥ್, ಹನೂರು ಮಂಜುನಾಥ್ ಸೇರಿದಂತೆ ಸದಸ್ಯರು ಅಧಿಕಾರಿಗಳು ಭಾಗವಹಿಸಿದ್ದರು.
ಚಿತ್ರ ೧೯ ಕೆ.ಎಲ್.ಆರ್. ೦೨ : ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ಕರ್ನಾಟಕ ವಿಧಾನ ಮಂಡಳದ ಕಾಗದ ಪತ್ರ ಸಮಿತಿ ಸಭೆಯಲ್ಲಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಭಾಗವಹಿಸಿರುವುದು. ಸಮಿತಿ ಸದಸ್ಯರಾದ ಹೆಚ್.ಡಿ.ರೇವಣ್ಣ, ಹೆಚ್.ವಿಶ್ವನಾಥ್ ಇದ್ದರು.
