23.2 C
Bangalore
Saturday, December 14, 2019

ಸರ್ಕಾರಿ ಕ್ರೀಡಾಂಗಣದ ಅವ್ಯವಸ್ಥೆಗೆ ಬೇಸರ

Latest News

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡಣೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡಣೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ಬ್ಯಾಡಗಿ: ಪಟ್ಟಣದ ಜಗದ್ಗುರು ಶ್ರೀ ಮುರುಘರಾಜೇಂದ್ರ ಸರ್ಕಾರಿ ಕ್ರೀಡಾಂಗಣದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ಯುವಜನ ಹಾಗೂ ಕ್ರೀಡಾ ಇಲಾಖೆ ಜಿಲ್ಲಾ ನಿರ್ದೇಶಕರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಅವರು ಆಗಮಿಸುವವರೆಗೂ ಸಭೆ ಮುಂದುವರಿಯಲು ಅವಕಾಶ ನೀಡುವುದಿಲ್ಲ ಎಂದು ಭ್ರಷ್ಟಾಚಾರ ನಿಮೂಲನೆ ಸಮಿತಿ ರಾಜ್ಯ ಸಂಚಾಲಕ ಮಲ್ಲೇಶಪ್ಪ ಚಿಕ್ಕಣ್ಣನವರ ಆಕ್ರೋಶ ವ್ಯಕ್ತಪಡಿಸಿದರು.

ತಾಪಂ ಸುವರ್ಣಸೌಧದಲ್ಲಿ ಯುವಜನ ಕ್ರೀಡಾ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ದಸರಾ ಕ್ರೀಡಾಕೂಟದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. 7 ಎಕರೆ ವಿಶಾಲವಾದ ಕ್ರೀಡಾಂಗಣ ಮೂಲ ಸೌಲಭ್ಯಗಳಿಲ್ಲದೆ ಸೊರಗುತ್ತಿದೆ. ಈ ಹಿಂದೆ ಸಾಕಷ್ಟು ಬಾರಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರೂ ಒಮ್ಮೆಯೂ ಸಭೆಗೆ ಆಗಮಿಸಿಲ್ಲ. ಕೂಡಲೆ ಸ್ಥಳೀಯ ತಾಲೂಕು ಕ್ರೀಡಾಂಗಣದ ಉಸ್ತುವಾರಿ ಸಮಿತಿ ರಚಿಸಬೇಕು. ದಸರಾ ಕ್ರೀಡಾಕೂಟ ನಡೆಸಲು ಸ್ಥಳೀಯರ ಸಹಕಾರವಿದ್ದು, ಜಿಲ್ಲಾ ಯುವಜನ ಕ್ರೀಡಾ ಇಲಾಖೆ ನಿರ್ದೇಶಕರು ಮತ್ತೊಮ್ಮೆ ಪೂರ್ವಭಾವಿ ಸಭೆ ಏರ್ಪಡಿಸಬೇಕೆಂದು ಒತ್ತಾಯಿಸಿದರು.

ಖರ್ಚು ವೆಚ್ಚದ ಲೆಕ್ಕ ಕೊಡಿ

ರಾಜ್ಯ ಖೋಖೋ ತರಬೇತುದಾರ ಜೀತೇಂದ್ರ ಸುಣಗಾರ ಮಾತನಾಡಿ, ಕ್ರೀಡಾಂಗಣದಲ್ಲಿ ವಿವಿಧ ಸಂಘ, ಸಂಸ್ಥೆಗಳು ಹಾಗೂ ಆಯೋಜಕರು ವಿವಿಧ ಕಾರ್ಯಕ್ರಮ ನಡೆಸಿದ್ದಾರೆ. ಮದ್ದು ಮಾರಾಟದ ಅಂಗಡಿಗೆ ಶುಲ್ಕ ವಿಧಿಸಲಾಗಿದೆ. ಆದರೆ ಈವರೆಗೂ ಎಷ್ಟು ಶುಲ್ಕ ಜಮೆಯಾಗಿದೆ. ಕ್ರೀಡಾಂಗಣ ನಿರ್ವಹಣೆ ಮಾಡಲು ಎಷ್ಟು ಅನುದಾನ ಖರ್ಚಾಗಿದೆ ಎಂಬ ಮಾಹಿತಿಯನ್ನು ಸಭೆಯಲ್ಲಿ ನೀಡಬೇಕಿದೆ. ಆದರೆ, ಯಾರಿಗೂ ಈ ಕುರಿತು ಅಧಿಕಾರಿಗಳು ಲೆಕ್ಕಪತ್ರ ನೀಡುತ್ತಿಲ್ಲ. ಕೂಡಲೆ ಶಾಸಕರ ನೇತೃತ್ವದಲ್ಲಿ ಯುವಜನ ಕ್ರೀಡಾಧಿಕಾರಿಗಳ ಸಭೆ ಆಯೋಜಿಸುವಂತೆ ಆಗ್ರಹಿಸಿದರು.

ನನಗೆ ಮಾಹಿತಿ ನೀಡುತ್ತಿಲ್ಲ

ಸಾಕ್ಷರ ಯೋಜನೆ ಹಾಗೂ ಕ್ರೀಡಾ ಇಲಾಖೆ ತಾಲೂಕು ಸಂಯೋಜಕ ಎಂ.ಎಸ್. ದಂಡಗಿ ಮಾತನಾಡಿ, ದಸರಾ ಕ್ರೀಡಾಕೂಟ ಆಯೋಜಿಸಲು ಮೇಲಧಿಕಾರಿಗಳು ನಿರ್ದೇಶನ ನೀಡಿದ್ದಾರೆ. ಹೀಗಾಗಿ ಪೂರ್ವಭಾವಿ ಸಭೆ ಏರ್ಪಡಿಸಿದ್ದು, ಎಲ್ಲ ಸಂಘ, ಸಂಸ್ಥೆ ಹಾಗೂ ಕ್ರೀಡಾಪಟುಗಳ ಸಲಹೆ ಸೂಚನೆ ಪಡೆಯುತ್ತಿರುವೆ. ತಾಲೂಕು ಮಟ್ಟದ ಸಾಕ್ಷರ ಹಾಗೂ ಕ್ರೀಡಾ ಇಲಾಖೆಗೆ ಸಂಯೋಜನಾಧಿಕಾರಿಯಾಗಿ ತಮ್ಮನ್ನು ನೇಮಿಸಿದ್ದರೂ, ಕ್ರೀಡಾಂಗಣದಲ್ಲಿ ಜರುಗುವ ಚಟುವಟಿಕೆ ಕುರಿತು ನನಗೆ ಮಾಹಿತಿ ನೀಡುತ್ತಿಲ್ಲ. ನೇರವಾಗಿ ಜಿಲ್ಲಾ ಯುವಜನ ಕ್ರೀಡಾಧಿಕಾರಿಗಳು ಕಾರ್ಯಕ್ರಮ ಅನುಮತಿ ಸೇರಿ ಖರ್ಚುವೆಚ್ಚಗಳ ಜವಾಬ್ದಾರಿ ನಿರ್ವಹಿಸುತ್ತಿದ್ದು, ನನಗೇನೂ ಮಾಹಿತಿಯಿಲ್ಲ. ಸಭೆಯಲ್ಲಿ ರ್ಚಚಿಸಿದ ವಿಷಯವನ್ನು ಅಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.

ಸಭೆಯಲ್ಲಿ ದೈಹಿಕ ಶಿಕ್ಷಣಾಧಿಕಾರಿ ಆರ್.ಬಿ. ರ್ಯಾವಳ, ಕರುನಾಡು ಮಹಿಳಾ ಸಂಘದ ತಾಲೂಕಾಧ್ಯಕ್ಷೆ ಪರೀದಾಬಾನು ನದಿಮುಲ್ಲಾ, ಅಂಗವಿಕಲರ ಸಂಘದ ಅಧ್ಯಕ್ಷ ಪಾಂಡುರಂಗ ಸುತಾರ, ಗುತ್ತೆವ್ವ ಮಾಳಗಿ, ದೈಹಿಕ ಶಿಕ್ಷಣ ಶಿಕ್ಷಕ ಮಲ್ಲೇಶಪ್ಪ ಕೋಡಿಹಳ್ಳಿ ಇತರರಿದ್ದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...