ಸಿರಗುಪ್ಪ: ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಕನ್ನಡ ಪರೀಕ್ಷೆಗೆ 4,093 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, 81 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಬಿಇಒ ಎಚ್.ಗುರಪ್ಪ ತಿಳಿಸಿದರು.
ವಿವಿಧ ಗ್ರಾಮಗಳಿಂದ ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದರಿಂದಾಗಿ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲವಾಯಿತು ಎಂದು ತಿಳಿಸಿದರು.