28.5 C
Bengaluru
Monday, January 20, 2020

ಸರ್ವೆ ಕಾರ್ಯಕ್ಕೆ ಗ್ರಾಮಸ್ಥರ ಅಡ್ಡಿ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಹೊಳೆಆಲೂರ: ವಾರದ ಹಿಂದೆ ಮಲಪ್ರಭಾ ಭೀಕರ ಪ್ರವಾಹಕ್ಕೆ ಸಿಕ್ಕು ಮನೆ-ಮಠ, ಧವಸ-ದಾನ್ಯ, ಜಾನುವಾರುಗಳನ್ನು ಕಳೆದುಕೊಂಡು ನಲುಗಿರುವ ರೋಣ ತಾಲೂಕಿನ 11 ಹಾಗೂ ನರಗುಂದ ತಾಲೂಕಿನ 3 ಗ್ರಾಮಗಳ ಜನರು, ಈಗ ಸರ್ಕಾರದ ಅವೈಜ್ಞಾನಿಕ ಹಾಗೂ ಅಸ್ಪಷ್ಟ ಸರ್ವೆಯಿಂದ ಮತ್ತಷ್ಟು ತೊಂದರೆಗೆ ಸಿಲುಕಿದ್ದಾರೆ.

ಹೀಗಾಗಿ ಸರ್ವೆಗಾಗಿ ಗ್ರಾಮಕ್ಕೆ ಸೋಮವಾರ ಆಗಮಿಸಿದ ಅಧಿಕಾರಿಗಳಿಗೆ ಗ್ರಾಮಸ್ಥರು ತಡೆಯೊಡಿದ್ದಾರೆ. ಪ್ರತಿ ಗ್ರಾಮದಲ್ಲಿ ನೋಡಲ್ ಅಧಿಕಾರಿಗಳು ಸರ್ವೆ ನಡೆಸಿ ಪ್ರತಿ ಮನೆಗೆ ತಾತ್ಕಾಲಿಕವಾಗಿ 10 ಸಾವಿರ ರೂ. ನೀಡುತ್ತಿದ್ದು, ಜನರಲ್ಲಿ ಸಮಾಧಾನವಿದೆ. ಆದರೆ, ಸಂಪೂರ್ಣ ಬಿದ್ದ ಮನೆಗಳ ಸರ್ವೆ ಕುರಿತು ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸ್ಪಷ್ಟತೆ ನೀಡದಿರುವುದು ಗ್ರಾಮಸ್ಥರಲ್ಲಿ ಗೊಂದಲ ಮೂಡಿಸಿದೆ.

2009ರ ಪ್ರವಾಹದ ನಂತರ ಈ ಭಾಗದ ಅಮರಗೋಳ, ಕುರವಿನಕೊಪ್ಪ, ಗಾಡಗೋಳಿ, ಹೊಳೆಮಣ್ಣೂರ, ಮೆಣಸಗಿ, ಹೊಳೆಮಣ್ಣೂರ, ಬಸರಕೋಡ, ಭಾಗಶಃ ಹೊಳೆಆಲೂರ, ಬಿ.ಎಸ್. ಬೇಲೇರಿ ಗ್ರಾಮಗಳ ಜನರಿಗೆ ನವಗ್ರಾಮ ನಿರ್ವಿುಸಿ ಸ್ಥಳಾಂತರಗೊಳಿಸಿಲಾಗಿತ್ತು. ಚಿಕ್ಕ ಅಳತೆಯ ಮನೆ, ಮೂಲ ಸೌಲಭ್ಯಗಳ ಕೊರತೆ, ಶಾಲೆ, ಅಂಗನವಾಡಿ ಇತ್ಯಾದಿ ಸೌಕರ್ಯವಿಲ್ಲದ ಕಾರಣ ನವ ಗ್ರಾಮಕ್ಕೆ ಬೆರಳೆಣಿಕೆ ಜನರು ಮಾತ್ರ ನೆಲೆಸಿದರು. 10 ವರ್ಷವಾದರೂ ಕೆಲ ಗ್ರಾಮಗಳ ಫಲಾನುಭವಿಗಳಿಗೆ ಇನ್ನೂ ಹಕ್ಕು ಪತ್ರ ವಿತರಿಸಿಲ್ಲ. ಅಲ್ಲದೆ ಸದ್ಯ ಜನ ವಸತಿ ಕ್ಷೀಣಿಸಿದ ಕಾರಣ ನವ ಗ್ರಾಮಗಳು ಮುಳ್ಳು ಕಂಟಿಯಿಂದ ತುಂಬಿವೆ. ತಮ್ಮ ಗ್ರಾಮಗಳು ಸಂಪೂರ್ಣ ಸ್ಥಳಾಂತರವಾಗುವುದೋ ಅಥವಾ ಆಸರೆ ಯೋಜನೆಗೆ ಒಳ ಪಡಿಸುವರೋ ಎಂಬ ಗೊಂದಲ ಜನರನ್ನು ಕಾಡುತ್ತಿದೆ.

ನೋಡಲ್ ಅಧಿಕಾರಿ ಆರ್.ಎಸ್. ಭಜಂತ್ರಿ, ಪಿಡಿಒ ಬಸವರಾಜ ಗಿರಿತಮ್ಮರ್ನನ್ನವರ, ಕಾರ್ಯದರ್ಶಿ ವೀರಣ್ಣ ಪತ್ತಾರ, ಇಂಜಿನಿಯರ್ ಜೆ.ಡಿ. ಚಿಗರಿ, ಎನ್.ಐ. ಅಡಿಯಣ್ಣವರ ಹಾಗೂ ಗ್ರಾಮಸ್ಥರಾದ ಶ್ರೀಪಾದಗೌಡ ಪಾಟೀಲ, ತಾಪಂ ಮಾಜಿ ಸದಸ್ಯ ಬಸನಗೌಡ ಶಿರಗುಂಪಿ, ಶಂಕರಗೌಡ ಬಾಲನಗೌಡ್ರ, ಚಂದ್ರಗೌಡ ಪಾಟೀಲ, ವೈ.ಎಸ್.ಪಾಟೀಲ, ಶಿವನಗೌಡ ಪಾಟೀಲ, ಪರಸಪ್ಪ ಶಿರಗುಂಪಿ, ವೀರಸಂಗಯ್ಯ ಮಹಾಕಾಶಿಮಠ, ಪರಸಪ್ಪ ಮಾದರ, ಯಲ್ಲಪ್ಪ ಚೌಡಣ್ಣವರ, ಯಲ್ಲಪ್ಪ ತಳವಾರ ಉಪಸ್ಥಿತರಿದ್ದರು.

ಅಧಿಕಾರಿಗಳಿಗೆ ತರಾಟೆ

ಬಾಡಿಗೆ ಮನೆಯಲ್ಲಿ ನೆಲೆಸಿರುವ, ಸಣ್ಣ ಪುಟ್ಟ ಮನೆ ಹೊಂದಿರುವ ಜನರು ಸ್ಥಳಾಂತರಕ್ಕೆ ಮನಸ್ಸು ಮಾಡಿದ್ದಾರೆ. ಆದರೆ, ದೊಡ್ಡ ಹಾಗೂ ಉತ್ತಮ ಮನೆ ಹೊಂದಿರುವ ಜನರು ಪ್ರತಿ ಮನೆಗೆ ತಕ್ಕ ಪರಿಹಾರ ನೀಡಿ, ಸಕಲ ಸೌಲಭ್ಯಗಳನ್ನು ಒದಗಿಸಿದರೆ ಮಾತ್ರ ನವ ಗ್ರಾಮಕ್ಕೆ ತರಳುತ್ತೇವೆ ಎನ್ನುತ್ತಿದ್ದಾರೆ. ಹೀಗಾಗಿ ಸೋಮವಾರ ಸರ್ವೆ ಕಾರ್ಯಕ್ಕೆ ಬಂದ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಗ್ರಾಮಸ್ಥರು ಸಂತ್ರಸ್ತರಿಗೆ ಸೂಕ್ತ ಸೌಲಭ್ಯ ಹಾಗೂ ಪರಿಹಾರ ಒದಗಿಸಬೇಕು. ಅಲ್ಲದೆ ಸಂಪೂರ್ಣ ಬಿದ್ದ ಮನೆಗಳ ಸರ್ವೆ ಆಗುವುದೋ ಅಥವಾ ನವಗ್ರಾಮಕ್ಕೆ ಸ್ಥಳಾಂತರ ಮಾಡುವರೋ ಸ್ಪಷ್ಟನೆ ನೀಡಿ ಎಂದು ಒತ್ತಾಯಿಸಿದರು.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...