20.1 C
Bangalore
Friday, December 6, 2019

ಸಸ್ಯಕಾಶಿಯಲ್ಲಿ ಕಸದ ರಾಶಿ!

Latest News

ಸಂವಹನಕ್ಕೆ ಇಂಗ್ಲಿಷ್ ಕಲಿಕೆ ಅನಿವಾರ್ಯ

ಐಮಂಗಲ; ಉನ್ನತ ಮಟ್ಟದ ಅಧಿಕಾರಿಗಳ ಜತೆ ಸಂವಹನ ನಡೆಸಲು ಹಾಗೂ ತನಿಖೆ ವೇಳೆ ಮಾಹಿತಿ ಕಲೆ ಹಾಕಲು ಇಂಗ್ಲೀಷ್ ಕಲಿಕೆ ಪೊಲೀಸರಿಗೆ ಅವಶ್ಯ...

ಸಾರ್ವಜನಿಕರಿಗೆ ಸಿಗಲಿ ಗುಣಮಟ್ಟ ಆರೋಗ್ಯ ಸೇವೆ

ಚಿತ್ರದುರ್ಗ: ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯೊಂದಿಗೆ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್.ಪಾಲಾಕ್ಷ,...

ಋಣುಮುಕ್ತ ಕಾಯ್ದೆ ಅವಧಿ ವಿಸ್ತರಿಸಿ

ಚಳ್ಳಕೆರೆ: ಋಣಮುಕ್ತ ಕಾಯ್ದೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಧಿಕಾರಿಗಳಿಂದ ಆಗಿಲ್ಲ ಎಂದು ಆರೋಪಿಸಿ ನಗರಸಭೆ ಮಾಜಿ ಸದಸ್ಯರಾದ ಟಿ.ಜೆ.ವೆಂಕಟೇಶ್, ಜಿ.ಕೆ.ರವಿ...

ಅಹವಾಲು ಸ್ವೀಕರಿಸಿದ ಎಸಿಬಿ

ಹಿರಿಯೂರು: ತಾಪಂ ಸಭಾಂಗಣದಲ್ಲಿ ಗುರುವಾರ ಚಿತ್ರದುರ್ಗ ಜಿಲ್ಲಾ ಭಷ್ಟಾಚಾರ ನಿಗ್ರಹದಳದ ಅಧಿಕಾರಿಗಳು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಎಸಿಬಿ ಡಿವೈಎಸ್‌ಪಿ ನರಸಿಂಹ ವಿ ತಾಮ್ರಧ್ವಜ ಮಾತನಾಡಿ,...

ಎಲ್ಲ ಮಠಾಧೀಶರು ಅಭಿಯಾನ ಆರಂಭಿಸಲಿ

ಚಿತ್ರದುರ್ಗ: ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನದಿಂದ ಆಯೋಜಿಸಿರುವ ಭಗವದ್ಗೀತಾ ಅಭಿಯಾನದ ನಿಮಿತ್ತ ಶುಕ್ರವಾರ ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಭಾಷಣ, ಭಗವದ್ಗೀತೆ ಕಂಠಪಾಠ...

ಅಕ್ಕಿಆಲೂರ: ಪಟ್ಟಣ ಹಾಗೂ ಶಿರಸಿಗೆ ಸಂಪರ್ಕ ಕಲ್ಪಿಸುವ ಅರಣ್ಯ ಪ್ರದೇಶದ ರಸ್ತೆ ಬದಿಯಲ್ಲಿ ನಿತ್ಯ ಭಾರಿ ಪ್ರಮಾಣದಲ್ಲಿ ಕಸ ಸಂಗ್ರಹವಾಗುತ್ತಿದ್ದು, ಸುಂದರ ಪ್ರಕೃತಿಯ ತಾಣ ತ್ಯಾಜ್ಯ ವಿಲೇವಾರಿ ಕೇಂದ್ರವಾಗಿ ಪರಿವರ್ತನೆಯಾಗುತ್ತಿರುವುದಕ್ಕೆ ಪರಿಸರ ಪ್ರೇಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಕ್ಕಿಆಲೂರಿನಿಂದ ಶಿರಸಿಗೆ ಸಂಪರ್ಕ ಕಲ್ಪಿಸುವ ಶಿರಸಿ ಮೊಳಕಾಲ್ಮೂರು ರಾಜ್ಯ ಹೆದ್ದಾರಿಯಲ್ಲಿ ನಾಲ್ಕರ ಕ್ರಾಸ್​ನಿಂದ ಆರಂಭವಾಗುವ ಅರಣ್ಯ ವಿಭಾಗದ ಹನುಮನಕೊಪ್ಪ, ಬಾಳೆಹಳ್ಳಿ, ಕತ್ರಿಕೊಪ್ಪ ಮತ್ತು ಸಮ್ಮಸಗಿವರೆಗಿನ ರಸ್ತೆಯ ಎರಡೂ ಬದಿಗಳಲ್ಲಿ ರಾಶಿ ರಾಶಿ ಕಸವನ್ನು ವಿಲೇವಾರಿ ಮಾಡಲಾಗುತ್ತಿದೆ. ಅಲ್ಲದೆ, ಸತ್ತ ನಾಯಿ, ಜಾನುವಾರು, ಎಮ್ಮೆಗಳನ್ನು ಸಹ ಅರಣ್ಯದ ಬದಿಯ ರಸ್ತೆಯಲ್ಲಿಯೇ ಎಸೆಯಲಾಗುತ್ತಿದೆ. ಇದರಿಂದ ಅಕ್ಕಿಆಲೂರ ಮೂಲಕ ಶಿರಸಿಯ ಹಲವು ಪ್ರಸಿದ್ಧ ಪ್ರವಾಸಿ ತಾಣಗಳಿಗೆ ತೆರಳುವ ಪ್ರಯಾಣಿಕರು ಮೂಗು ಮುಚ್ಚಿಕೊಂಡೇ ಸಂಚರಿಸಬೇಕಿದೆ. ಗಬ್ಬು ವಾಸನೆಯಿಂದ ನರಕಯಾತನೆ ಅನುಭವಿಸುವಂತಾಗಿದೆ ಎಂದು ಹಲವರು ದೂರಿದ್ದಾರೆ. ನಾಲ್ಕರ ಕ್ರಾಸ್​ನಿಂದ ಶಿರಸಿ ತಾಲೂಕಿನ ಗಡಿ ಗ್ರಾಮ ಸಮ್ಮಸಗಿವರೆಗಿನ ಅರಣ್ಯ ಪ್ರದೇಶದ ಎರಡೂ ಬದಿಯಲ್ಲಿ ನಿರ್ಜನ ಪ್ರದೇಶವನ್ನು ಕೆಲವರು ಕಸ ವಿಲೇವಾರಿಗೆ ಬಳಸಿಕೊಳ್ಳುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ.

ಅಲ್ಲದೆ, ಶಿರಸಿ ಕಡೆ ತೆರಳುವ ಪ್ರವಾಸಿಗರು ರಾತ್ರಿ ವೇಳೆ ಅರಣ್ಯ ಪ್ರದೇಶದ ರಸ್ತೆ ಬದಿಯಲ್ಲಿ ಮದ್ಯ ಸೇವಿಸುವುದು ಸಾಮಾನ್ಯವಾಗಿದೆ. ಅರಣ್ಯ ವ್ಯಾಪ್ತಿಯ ರಸ್ತೆಗಳ ಎರಡೂ ಬದಿಯಲ್ಲಿ ಕಂಡ ಕಂಡಲ್ಲಿ ಸಾರಾಯಿ ಬಾಟಲಿಗಳು ರಾರಾಜಿಸುತ್ತಿವೆ. ಅಕ್ಕಿಆಲೂರಿನಿಂದ ಶಿವಮೊಗ್ಗ ರಸ್ತೆಯಲ್ಲಿಯೂ ಇದೇ ಪರಿಸ್ಥಿತಿ ಇದೆ.

ಬಾಳೆಹಳ್ಳಿ, ಹನುಮನಕೊಪ್ಪ ಅರಣ್ಯ ವಿಭಾಗಕ್ಕೆ ನಿತ್ಯ ಕರ್ತವ್ಯಕ್ಕೆ ತೆರಳುವ ಅರಣ್ಯ ಅಧಿಕಾರಿಗಳು ರಸ್ತೆ ಬದಿಯ ಈ ಎಲ್ಲ ಚಟುವಟಿಕೆಗಳನ್ನು ನೋಡಿಯೂ ಏನೂ ಕಾಣದಂತೆ ಮೌನ ವಹಿಸಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ. ಕೂಡಲೇ ಅಧಿಕಾರಿಗಳು ಕಸ ವಿಲೇವಾರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ.

ಅರಣ್ಯ ವ್ಯಾಪ್ತಿಯ ರಸ್ತೆಯ ಬದಿಗಳಲ್ಲಿ ಅಧಿಕ ತ್ಯಾಜ್ಯ ಸಂಗ್ರಹವಾಗುತ್ತಿದೆ. ಶೀಘ್ರವೇ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕಾವಲಿಗೆ ನೇಮಿಸಲಾಗುವುದು. ತ್ಯಾಜ್ಯ ವಿಲೇವಾರಿ ಮಾಡುವವರು ಮತ್ತು ರಾತ್ರಿ ವೇಳೆ ಮದ್ಯ ಸೇವನೆ ಮಾಡುವವರು ಕಂಡು ಬಂದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು.
| ಪರಮೇಶ್ವರಪ್ಪ, ತಾಲೂಕು ಅರಣ್ಯ ಅಧಿಕಾರಿ ಹಾನಗಲ್ಲ

ಮಲೆನಾಡು ಅಂಚಿನ ಪ್ರಕೃತಿ ಮಡಿಲಲ್ಲಿ ಇರುವ ಅಕ್ಕಿಆಲೂರಿನ ಸೊಬಗು ಹೆಚ್ಚಿಸಲು ಕಾರಣವಾಗಿರುವ ಸುತ್ತಲಿನ ಶಿವಮೊಗ್ಗ ಮತ್ತು ಶಿರಸಿ ಅರಣ್ಯ ಪ್ರದೇಶ ತ್ಯಾಜ್ಯ ವಿಲೇವಾರಿ ಕೇಂದ್ರದಂತಾಗುತ್ತಿರುವುದು ಭವಿಷ್ಯದ ದೃಷ್ಟಿಯಿಂದ ಮಾರಕವಾಗಿದೆ. ನಾಲ್ಕರ ಕ್ರಾಸ್​ನಿಂದ ಸಮ್ಮಸಗಿವರೆಗಿನ ಅರಣ್ಯ ಪ್ರದೇಶದ ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಇದೆ. ಅಧಿಕಾರಿಗಳು ಕೂಡಲೆ ಕ್ರಮ ಕೈಗೊಳ್ಳಬೇಕು.
| ಅಬ್ದುಲ್ ಸಾಧಿಕ ಅತ್ತಾರ, ಅಂಜುಮನ್ ಇಸ್ಲಾಂ ಸಂಸ್ಥೆ ನಿರ್ದೇಶಕ, ಅಕ್ಕಿಆಲೂರ

Stay connected

278,738FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...