20.8 C
Bangalore
Sunday, December 8, 2019

ಸಹಕಾರಿಗಳು ಸಾಹುಕಾರರಾಗಬಾರದು

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಧಾರವಾಡ: ಸಹಕಾರಿಗಳು ಸಾಹುಕಾರರಾಗದೇ ಸೇವಕರಾಗಿ ದುಡಿಯಬೇಕು. ಅಂದಾಗ ಮಾತ್ರ ಸಹಕಾರ ಕ್ಷೇತ್ರದ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಸ್ಥಳೀಯ ಮಟ್ಟದಲ್ಲಿನ ಸಂಘಗಳ ದುಡಿಯುವ ಬಂಡವಾಳ ಹೆಚ್ಚಿಸುವ ಮುಖಾಂತರ ಸಹಕಾರ ಚಳವಳಿ ಪ್ರೋತ್ಸಾಹಿಸಲು ಸರ್ಕಾರ ಆದ್ಯತೆ ನೀಡಲಿದೆ ಎಂದು ಸಹಕಾರ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಡಾ. ಮಲ್ಲಿಕಾರ್ಜುನ ಮನಸೂರ ಕಲಾಭವನದಲ್ಲಿ 66ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಕೆಸಿಸಿ ಬ್ಯಾಂಕ್, ಸಹಕಾರ ಹಾಲು ಒಕ್ಕೂಟ, ಸಹಕಾರ ಇಲಾಖೆ ಹಾಗೂ ಇನ್ನಿತರ ಸಹಕಾರ ಸಂಘಗಳ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ‘ಸಹಕಾರ ಸಂಸ್ಥೆಗಳ ನಡುವೆ ಸಹಕಾರವನ್ನು ಬಲಪಡಿಸುವುದು’ ವಿಷಯ ಕುರಿತ ಕಾಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾಲ ಮನ್ನಾ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲು ಕ್ರಮ ಕೈಕೊಳ್ಳಲಾಗುತ್ತಿದೆ. ಸಹಕಾರ ವ್ಯವಸ್ಥೆಯ ಬಲವರ್ಧನೆಗೆ ಮುಂಬರುವ ಅಧಿವೇಶನದಲ್ಲಿ ಸಹಕಾರ ಕಾಯ್ದೆಗೆ ಕೆಲ ಬದಲಾವಣೆ ತರಲಾಗುವುದು. ಬಜೆಟ್​ನಲ್ಲಿ 500 ಕೋಟಿ ರೂ. ಒದಗಿಸುವ ಮೂಲಕ ಯಶಸ್ವಿನಿ ಯೋಜನೆ ಪುನರಾರಂಭಕ್ಕೆ ತೀರ್ಮಾನ ಕೈಕೊಳ್ಳಲಾಗುವುದು ಎಂದರು.

ಕೆಸಿಸಿ ಬ್ಯಾಂಕ್ ಅಧ್ಯಕ್ಷ ಬಾಪುಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಸಹಕಾರ ಸಂಸ್ಥೆಗಳನ್ನು ಆದಾಯ ತೆರಿಗೆಯಿಂದ ಮುಕ್ತಗೊಳಿಸುವುದು, ಚುನಾವಣಾ ಪ್ರಕ್ರಿಯೆ ಸರಳೀಕರಣ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೇಲೆ ಮಧ್ಯವರ್ತಿ ಬ್ಯಾಂಕಿನ ನಿಯಂತ್ರಣಕ್ಕೆ ಅವಕಾಶದ ಬಗ್ಗೆ ಪ್ರಸ್ತಾಪಿಸಿದರು.

ಮಾಜಿ ಸಚಿವ ಬಸವರಾಜ ಹೊರಟ್ಟಿ ಅವರು ಸಹಕಾರ ಪತ್ರಿಕೆ ಬಿಡುಗಡೆಗೊಳಿಸಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಎನ್. ಗಂಗಣ್ಣ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಸಿ.ಎಂ. ನಿಂಬಣ್ಣವರ, ಶಂಕರ ಪಾಟೀಲ ಮುನೇನಕೊಪ್ಪ, ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ಉಪಾಧ್ಯಕ್ಷ ಶಿವಾನಂದ ಕರಿಗಾರ, ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ, ಕೆಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ವೈ. ಪಾಟೀಲ, ಸಹಕಾರ ಸಂಘಗಳ ನಿಬಂಧಕ ಎನ್.ಎಸ್. ಪ್ರಸನ್ನಕುಮಾರ, ಸಹಕಾರ ಸಂಘಗಳ ಸಂಯುಕ್ತ ನಿಬಂಧಕ ಜಿ.ಎಂ. ಪಾಟೀಲ, ಮಹಾಮಂಡಳದ ನಿರ್ದೇಶಕರು, ವಿವಿಧ ಮಹಾಮಂಡಳಗಳು, ಬ್ಯಾಂಕ್ ಮತ್ತು ವಿವಿಧ ಸಂಸ್ಥೆಗಳ ನಿರ್ದೇಶಕರು ಉಪಸ್ಥಿತರಿದ್ದರು.

ಇದೇ ವೇಳೆ ಹಿರಿಯ ಸಹಕಾರಿಗಳನ್ನು ಮತ್ತು ಉತ್ತಮ ಸಹಕಾರಿ ಸಂಘಗಳನ್ನು ಸನ್ಮಾನಿಸಲಾಯಿತು.

ಹಾವೇರಿಗೆ ಕೆಸಿಸಿ ಬ್ಯಾಂಕ್, ಮೆಗಾ ಡೇರಿ

ಸದ್ಯ ಅವಿಭಜಿತ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡು ಧಾರವಾಡದಲ್ಲಿ ಕೇಂದ್ರ ಕಚೇರಿ ಹೊಂದಿ ಕಾರ್ಯ ನಿರ್ವಹಿಸುತ್ತಿರುವ ಕೆಸಿಸಿ ಬ್ಯಾಂಕ್ ವಿಭಜಿಸುವ ಪ್ರಕ್ರಿಯೆಯ ಸುಳಿವನ್ನು ಸಹಕಾರ ಸಚಿವ ಬಸವರಾಜ ಬೊಮ್ಮಾಯಿ ನೀಡಿದರು. ಕೆಸಿಸಿ ಬ್ಯಾಂಕ್​ಗೆ ಹಾವೇರಿ ಜಿಲ್ಲೆಯಿಂದ ಅಧಿಕ ಆದಾಯವಿದೆ. ಹಾವೇರಿಗೆ ಪ್ರತ್ಯೇಕ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಸ್ಥಾಪನೆಗೆ ಪ್ರಕ್ರಿಯೆ ನಡೆಯುತ್ತಿದೆ. ಅದೇ ರೀತಿ ಹಾಲು ಉತ್ಪಾದನೆಯಲ್ಲೂ ಹಾವೇರಿ ಜಿಲ್ಲೆ ಮುಂದಿದೆ. ಹಾವೇರಿಯಲ್ಲಿ ಮೆಗಾ ಡೇರಿ ಸ್ಥಾಪಿಸುವ ಗುರಿ ಇದೆ ಎಂದು ಭಾಷಣದಲ್ಲಿ ಬೊಮ್ಮಾಯಿ ಪ್ರಸ್ತಾಪಿಸಿದರು.

ಎಷ್ಟು ದಿನವೋ ಗೊತ್ತಿಲ್ಲ…

ನಾನು ಎಷ್ಟು ದಿನ ಸಚಿವನಾಗಿರುತ್ತೇನೋ ಗೊತ್ತಿಲ್ಲ. ಸಹಕಾರಿ ರಂಗ ನನ್ನ ಹೃದಯದಲ್ಲಿದೆ. ಸಹಕಾರಿ ರಂಗಕ್ಕಾಗಿ ಮೊದಲಿನಿಂದಲೂ ಕೆಲಸ ಮಾಡಿಕೊಂಡು ಬಂದಿದ್ದೇನೆ’ ಎಂದು ಹೇಳಿದರು.

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...