25.9 C
Bengaluru
Wednesday, January 22, 2020

ಸಾಂಸ್ಕೃತಿಕ ನಾಯಕ ನಾರಾಯಣ ಗುರು

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಸೊರಬ: ಬ್ರಹ್ಮಶ್ರೀ ನಾರಾಯಣ ಗುರುಗಳು ಆರ್ಯ ಈಡಿಗ (ದೀವರು) ಸೇರಿ ಹಿಂದುಳಿದ ವರ್ಗಗಳ ಸಾಂಸ್ಕೃತಿಕ ನಾಯಕ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಬಣ್ಣಿಸಿದರು.

ಪಟ್ಟಣದ ರಂಗಮಂದಿರದಲ್ಲಿ ನಾರಾಯಣ ಗುರು ಸೇವಾ ಪ್ರತಿಷ್ಠಾನದಿಂದ ಮಂಗಳವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.

ನಾರಾಯಣ ಗುರುಗಳು ಕೇರಳದಲ್ಲಿ ಹುಟ್ಟಿದರೂ ಇಡೀ ದಕ್ಷಿಣ ಭಾರತದ ತಳ ಸಮುದಾಯಗಳ ಮೇಲೆ ಪ್ರಭಾವ ಬೀರಿದ್ದಾರೆ. ವೈಚಾರಿಕ ಸಮಾಜ ಕಟ್ಟುವಲ್ಲಿ ಸಂತ, ಯೋಧನಂತೆ ಶ್ರಮಿಸಿದ್ದಾರೆ ಎಂದರು.

ಸ್ವಾತಂತ್ರ್ಯ ಪೂರ್ವದಲ್ಲಿ ಯಜಮಾನಿಕೆ ಸಂಸ್ಕೃತಿ ವಿರುದ್ಧ ಸೆಟೆದು ಸಾಮಾಜಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣದ ಮೂಲಕ ಸಂಘಟನೆ ಆಗುವಂತೆ ಪ್ರೇರೇಪಿಸಿದವರೇ ನಾರಾಯಣ ಗುರು. ಅವರ ಚಿಂತನೆ ಮೂಲಕ ಯುವ ಸಮುದಾಯದಲ್ಲಿ ಅಧ್ಯಾತ್ಮದ ಬಗ್ಗೆ ಆಕಸ್ತಿ ಮೂಡಿಸಲು ಇಲ್ಲಿನ ನಾರಾಯಣ ಗುರು ಸೇವಾ ಪ್ರತಿಷ್ಠಾನ ಜಯಂತಿ ಆಚರಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.

ಜಯಂತ್ಯುತ್ಸವಕ್ಕೆ ಪ್ರಮುಖರ ಗೈರು: ನಾರಾಯಣ ಗುರು ಸೇವಾ ಪ್ರತಿಷ್ಠಾನದಿಂದ ಪಕ್ಷಾತೀತವಾಗಿ ಹಮ್ಮಿಕೊಂಡಿದ್ದ ನಾರಾಯಣ ಗುರು ಜಯಂತ್ಯುತ್ಸವಕ್ಕೆ ಶಾಸಕ ಕುಮಾರ್ ಬಂಗಾರಪ್ಪ ಮೆರವಣಿಗೆಗೆ ಚಾಲನೆ ನೀಡಿ ಕೆಲಸದ ನಿಮಿತ್ತ ತೆರಳಿದರು. ಶಾಸಕ ಹರತಾಳು ಹಾಲಪ್ಪ, ಮಾಜಿ ಶಾಸಕರಾದ ಮಧು ಬಂಗಾರಪ್ಪ, ಬೇಳೂರು ಗೋಪಾಲಕೃಷ್ಣ ಗೈರಾಗಿದ್ದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಭಾಗವಹಿಸಿ ಸಂಘಟಕರಿಗೆ ಪ್ರತಿ ವರ್ಷ ಗುರುಗಳ ಆಚರಣೆ ಮಾಡುವ ಮೂಲಕ ಯುವಜನರಿಗೆ ಗುರುಗಳ ಚಿಂತನೆ ಪ್ರಭಾವ ಬೀರುವ ರೀತಿಯಲ್ಲಿ ಮುನ್ನಡೆಯವಂತೆ ನೋಡಿಕೊಳ್ಳಿ. ನಿಮ್ಮ ಜತೆಗೆ ನಾನು ಇರುತ್ತೇನೆ ಎಂದು ಭರವಸೆ ನೀಡಿದರು.

ನಾರಾಯಣ ಗುರು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಜಗದೀಶ್, ಸಿಗಂದೂರು ಧರ್ಮದರ್ಶಿ ರಾಮಪ್ಪ, ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಶ್ರೀಧರ್, ತಾಲೂಕು ಅಧ್ಯಕ್ಷ ಕೆ.ಅಜ್ಜಪ್ಪ, ಜಿಪಂ ಸದಸ್ಯೆ ತಾರಾ, ನಾಗರಾಜ್, ಎಂ.ಡಿ.ಶೇಖರ್, ಎಚ್.ಗಣಪತಿ, ಪಾಣಿ ರಾಜಪ್ಪ, ಬಲೀಂದ್ರಪ್ಪ, ದಿನೇಶ್, ರಾಜಶೇಖರ ಗೌಡ ತ್ಯಾವಗೋಡು, ನಿರಂಜನ, ಪುಟ್ಟಸ್ವಾಮಿ, ಪುಟ್ಟಪ್ಪ, ಪ್ರಕಾಶ್, ಜಿ.ಡಿ.ನಾಯಕ್ ಇತರರಿದ್ದರು. ಕವನಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಮಂಜುನಾಥ್ ಸ್ವಾಗತಿಸಿದರು. ಹೊಳೆಲಿಂಗಪ್ಪ ಕಾರ್ಯಕ್ರಮ ನಿರೂಪಿಸಿದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...