25.9 C
Bengaluru
Wednesday, January 22, 2020

ಸಾಗರಕ್ಕೆ ಬಂದಿಲ್ಲ ನರೇಗಾ ಕೂಲಿ ಹಣ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಸಾಗರ: ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಕೆಲಸ ಮಾಡಿದ ಕಾರ್ವಿುಕರಿಗೆ 7 ಕೋಟಿ ರೂ. ಬಿಡುಗಡೆಯಾಗಬೇಕು. ತಾಲೂಕಿಗೆ 1.50 ಕೋಟಿ ರೂ. ಬಿಡುಗಡೆ ಆಗಬೇಕು. ಆದರೆ ಸರ್ಕಾರ ಈ ಬಗ್ಗೆ ಗಂಭೀರವಾಗಿ ಯೋಚಿಸುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ತೀ.ನ.ಶ್ರೀನಿವಾಸ್ ದೂರಿದರು.

ವಸತಿ ಯೋಜನೆಯಡಿ 513 ಫಲಾನುಭವಿಗಳಿಗೆ 1.85 ಕೋಟಿ ರೂ. ಸಹಾಯಧನವೂ ಬಂದಿಲ್ಲ. 2018-19ರ 700 ಮನೆಗಳ ನಿರ್ವಣಕ್ಕೆ ಈವರೆಗೆ ಆಡಳಿತಾತ್ಮಕ ಮಂಜೂರಾತಿಯನ್ನೇ ನೀಡಿಲ್ಲ. ಸರ್ವರಿಗೂ ಸೂರು ಯೋಜನೆಯಡಿ ನಿರ್ಮಾಣ ಆಗುತ್ತಿರುವ ಮನೆ ಅಪೂರ್ಣವಾಗಿದೆ. ಸಾಮಾಜಿಕ ಭದ್ರತೆ ಯೋಜನೆಯಡಿ 4 ಸಾವಿರ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಿಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಸಾಗರಕ್ಕೆ ಬಂದಾಗ ಕಾಟಾಚಾರಕ್ಕೆ ಪ್ರಗತಿಪರಿಶೀಲನಾ ಸಭೆ ನಡೆಸಿದ್ದಾರೆ. ತಾಪಂ ಸದಸ್ಯರು ಸಮಸ್ಯೆಗಳನ್ನು ಗಮನಕ್ಕೆ ತಂದರೆ ಅದನ್ನು ಶಾಸಕ ಕುಮಾರ ಬಂಗಾರಪ್ಪ ಅವರ ಕೈಗೆ ನೀಡುವ ಮೂಲಕ ತಾಪಂ ಅಧ್ಯಕ್ಷರಿಗೆ ಅವಮಾನ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಾಸಗಿ ಕಾರ್ಯಕ್ರಮಕ್ಕೆ ಬಂದಾಗ ಕನಿಷ್ಠ ಸಾರ್ವಜನಿಕರ ಅಹವಾಲು ಕೇಳದೆ ಹೋಗಿದ್ದಾರೆ. ಸಾಗರ ಅಭಿವೃದ್ಧಿಗೆ ಮುಖ್ಯಮಂತ್ರಿ ತಾರತಮ್ಯ ಮಾಡುತ್ತಿದ್ದಾರೆ. ಇದೇ ರೀತಿ ಅಸಹಕಾರ ತೋರಿದರೆ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಡಿಎಸ್​ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಪರಮೇಶ್ವರ ದೂಗೂರು ಮಾತನಾಡಿ, ಸಾರ್ವಜನಿಕರಿಗೆ ಅವಶ್ಯವಾಗಿರುವ ಇಂದಿರಾ ಕ್ಯಾಂಟಿನ್ ಆರಂಭಿಸಿ ಎಂದು ಹೇಳಿಕೆ ನೀಡಿದ್ದಕ್ಕೆ ನನ್ನನ್ನು ಪೊಲೀಸ್ ಠಾಣೆಯಲ್ಲಿ ಕೂರಿಸಲಾಗಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತದ ವಾತಾವರಣ ನಿರ್ವಣವಾಗುತ್ತಿದೆ ಎಂದು ದೂರಿದರು.

ಮಾನ ಹಕ್ಕು ಆಯೋಗಕ್ಕೆ ದೂರು: ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅವ್ಯವಸ್ಥೆಯನ್ನು ಪ್ರತಿಭಟಿಸುವುದು, ಸೌಲಭ್ಯ ಕೇಳುವುದು ಸಹಜ. ಈ ಕುರಿತು ಹೇಳಿಕೆ ನೀಡಿದ್ದಕ್ಕೆ ಪರಮೇಶ್ವರ ದೂಗೂರು ಅವರನ್ನು ಸಾಗರಕ್ಕೆ ಮುಖ್ಯಮಂತ್ರಿ ಆಗಮನದ ಸಂದರ್ಭ ಏಕಾಏಕಿ ಬಂಧಿಸಿದ್ದು ತೀವ್ರ ಖಂಡನೀಯ. ಈ ಬಗ್ಗೆ ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಎಂದು ತೀ.ನ.ಶ್ರೀನಿವಾಸ್ ಹೇಳಿದರು. ಮುಖ್ಯಮಂತ್ರಿ ಬರುವ ದಿನ ಮುಂಜಾನೆ 5 ಗಂಟೆಗೆ ಮೂರ್ನಾಲ್ಕು ಪೊಲೀಸ್ ವಾಹನಗಳು ಪರಮೇಶ್ವರ್ ಮನೆಗೆ ಹೋಗಿ ಕರೆದುಕೊಂಡು ಬಂದು ಆನಂದಪುರ ಠಾಣೆಯಲ್ಲಿ ಅಕ್ರಮವಾಗಿ ಬಂಧಿಸಿಟ್ಟು ಹಿಂಸೆ ನೀಡಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆ. ಮುಖ್ಯಮಂತ್ರಿ ಜಿಲ್ಲೆಯಲ್ಲೇ ಇಂತಹ ಸ್ಥಿತಿ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ವೈ.ಎನ್.ಹುಬ್ಬಳ್ಳಿ, ಪುಟ್ಟಪ್ಪ, ಎ.ಎ.ಶೇಟ್ ಇತರರಿದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...