More

  ಸಾಧಕರಿಗೆ ಪ್ರತಿಭಾ ಪುರಸ್ಕಾರ

  ಬೀದರ್: ಇಲ್ಲಿಯ ಬಸವನಗರ ಕಾಲೊನಿಯ ದತ್ತಗಿರಿ ಮಹಾರಾಜ ಆಂಗ್ಲ ಮಾಧ್ಯಮ ಪಬ್ಲಿಕ್ ಶಾಲೆಯಲ್ಲಿ ಪ್ರಸಕ್ತ ಸಾಲಿನ ಸಿಬಿಎಸ್‍ಇ ಹತ್ತನೇ ತರಗತಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.
  ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಪ್ರಮಾಣ ಪತ್ರ ಪ್ರದಾನ ಮಾಡಲಾಯಿತು.
  ದತ್ತಗಿರಿ ಮಹಾರಾಜ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶಿವರಾಜ ಪಾಟೀಲ ಮಾತನಾಡಿ, ದತ್ತಗಿರಿ ಆಂಗ್ಲ ಮಾಧ್ಯಮ ಪಬ್ಲಿಕ್ ಶಾಲೆಯು ಸಿಬಿಎಸ್‍ಇ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಗಳಿಸಿ ಅಮೋಘ ಸಾಧನೆ ಮಾಡಿದೆ ಎಂದು ಹೇಳಿದರು.
  ಪರೀಕ್ಷೆ ಬರೆದ 48 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅಗ್ರಶ್ರೇಣಿ ಪಡೆದವರ ಪ್ರಮಾಣ ಶೇ 19 ರಷ್ಟಿದೆ. 7 ವಿದ್ಯಾರ್ಥಿಗಳು ಶೇ 80 ಮೇಲ್ಪಟ್ಟು, 13 ವಿದ್ಯಾರ್ಥಿಗಳು ಶೇ 70 ಮೇಲ್ಪಟ್ಟು ಅಂಕ ಗಳಿಸಿದ್ದಾರೆ. 13 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು.
  ಗುಣಮಟ್ಟದ ಹಾಗೂ ಸ್ಪರ್ಧಾತ್ಮಕ ಶಿಕ್ಷಣದಿಂದಾಗಿ ಶಾಲೆಗೆ ಅತ್ಯುತ್ತಮ ಫಲಿತಾಂಶ ಬಂದಿದೆ. ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಶ್ರಮ ಹಾಗೂ ಪಾಲಕರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದು ಹೇಳಿದರು.
  ದತ್ತಗಿರಿ ಮಹಾರಾಜ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಪೂಜ್ಯ ಶ್ರೀ ಅವಧೂತಗಿರಿ ಮಹಾರಾಜ, ಅಧ್ಯಕ್ಷ ರಮೇಶಕುಮಾರ ಪಾಂಡೆ, ಜಂಟಿ ಕಾರ್ಯದರ್ಶಿ ರಮೇಶ ಜಿ. ದುಕಾನದಾರ್, ಖಜಾಂಚಿ ಪ್ರಭಾಕರ ಮೈಲಾಪುರೆ, ಸದಸ್ಯರಾದ ಶಾಂತಾಬಾಯಿ ಯರಮಲ್ಲಿ, ರವಿ ಮಲಸಾ, ಬಸವರಾಜ ದೇಗಲಮಡಿ, ಪ್ರಾಚಾರ್ಯೆ ಮಹಾದೇವಿ ಬೀದೆ, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts