ಸಾಧಿಸುವ ಛಲ ಪ್ರತಿಯೊಬ್ಬರಲ್ಲೂ ಇರಬೇಕು

blank

ಯಳಂದೂರು: ಸ್ಪರ್ಧಾತ್ಮಕ ಯುಗದಲ್ಲಿ ಸಾಧಿಸಬೇಕೆಂಬ ಛಲ ಹಠ ಪ್ರತಿಯೊಬ್ಬರ ಮನಸ್ಸಿನಲ್ಲಿ ಮೂಡಬೇಕು. ಅದಕ್ಕೆ ಸತತ ಪ್ರಯತ್ನ ಮಾಡಿದಾಗ ಸಾಧಿಸಬಹುದು ಎಂದು ಮಾಜಿ ಸಚಿವ ಎನ್.ಮಹೇಶ್ ಕರೆ ನೀಡಿದರು.

blank

ಪಟ್ಟಣದ ಡಾ.ಅಂಬೇಡ್ಕರ್ ಭವನದಲ್ಲಿ ಸಮರ್ಪಣ ಫೌಂಡೇಶನ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ‘ನಾನು ಐಎಎಸ್’ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಿದ್ಧತೆಗೆ ಪ್ರತಿಯೊಬ್ಬರು ಸ್ವಯಂ ಪ್ರೇರಿತವಾಗಿ ಶಿಕ್ಷಣ, ಕ್ರೀಡೆ, ತಮ್ಮೊಂದಿಗೆ ಇಷ್ಟುವಾದ ಕೆಲಸಗಳಲ್ಲಿ ಏಕಾಗ್ರತೆಯಿಂದ ತಮಗೆ ಆಸಕ್ತಿ ಇರುವ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು, ಜತೆಗೆ ಸತತ ಪ್ರಯತ್ನ ಮಾಡುವ ಮೂಲಕ ಉನ್ನತ ಸ್ಥಾನಮಾನಗಳ ಬಗ್ಗೆ ಗಮನಹರಿಸಬೇಕು, ಈ ರೀತಿಯ ಕನಸನ್ನು ಕಂಡು ಅದನ್ನು ಈಡೇರಿಸುವ ಗುರು, ಹಿರಿಯರ ಮಾರ್ಗದರ್ಶನಗಳನ್ನು ಪಾಲನೆ ಮಾಡಬೇಕು ಎಂದು ಕರೆ ನೀಡಿದರು.

ಇತ್ತೀಚೆಗೆ ಖೋ ಖೋ ವಿಶ್ವಕಪ್ ಗೆದ್ದ ಭಾರತ ತಂಡದ ಆಟಗಾರ್ತಿ ಕುರುಬೂರು ಗ್ರಾಮದ ಚೈತ್ರಾರನ್ನ ಸನ್ಮಾನಿಸಿದರು. ನಂತರ ಮಾತನಾಡಿದ ಆಟಗಾರ್ತಿ ಚೈತ್ರಾ, ಈ ಸಾಧನೆ ಮಾಡಲು ನನಗೆ ಮಾರ್ಗದರ್ಶನ ನೀಡಿದ ಗುರುಗಳು ಹಾಗೂ ತಂದೆ, ತಾಯಿ ಅವರ ಪ್ರೇರಣೆ, ಪ್ರೋತ್ಸಾಹದಿಂದ ನನ್ನ ಈ ಸಾಧನೆಗೆ ಪ್ರಮುಖ ಕಾರಣರಾಗಿರುತ್ತಾರೆ ಎಂದು ಸ್ಮರಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಸಾಧನ ಅಕಾಡೆಮಿ ಸಂಸ್ಥಾಪಕರಾದ ಬಿ.ಮಂಜುನಾಥ್, ಪ್ರಸ್ತುತ ವಿದ್ಯಾರ್ಥಿ ಜೀವನದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಮಹತ್ವದ ಬಗ್ಗೆ ತಿಳಿದರು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಿಶ್ವನಾಥ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಂವಿಧಾನ ವಿಷಯವಾಗಿ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ವಿಜಯ್ ರವರು ಜೆಎಸ್‌ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನ ಎಚ್.ಎಸ್.ಚಂದ್ರಶೇಖರ್, ರಾಜು, ಕಂದಹಳ್ಳಿ ಮಹೇಶ್ ಸರಯೂ ಅಕಾಡೆಮಿ ನಿರ್ದೇಶಕರಾದ ಅಂಬಳೆ ಶ್ರೀನಿವಾಸ, ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲೂಕು ಅಧ್ಯಕ್ಷರಾದ ಸುರೇಶ್, ಪಟ್ಟಣದ ವಿವಿಧ ಶಾಲಾ ಕಾಲೇಜಿನ ಅಧ್ಯಾಪಕರು, ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share This Article

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…