ಸಾಮಾಜಿಕ ಜಾಲತಾಣ ಪ್ರಚಾರ ನಿಗಾ

Latest News

ಪಿಡಿಒ ವರ್ಗಾವಣೆಗೆ ಆಗ್ರಹಿಸಿ 22 ರಂದು ಸತ್ಯಾಗ್ರಹ

ಮುದ್ದೇಬಿಹಾಳ: ತಾಲೂಕಿನ ಬಸರಕೋಡ ಗ್ರಾಪಂ ಪಿಡಿಒ ಖೂಭಾಸಿಂಗ್ ಜಾಧವ ಅವರನ್ನು ವರ್ಗ ಮಾಡಬೇಕೆಂದು ಆಗ್ರಹಿಸಿ ತಾಲೂಕಿನ ಸಿದ್ದಾಪುರ ಪಿ.ಟಿ. ಗ್ರಾಮಸ್ಥರು ಹಾಗೂ ದಲಿತಪರ...

ಅಕ್ರಮ ಮರಳು ಸಾಗಣೆ, 3 ಟಿಪ್ಪರ್ ವಶ

ವಿಜಯಪುರ: ಅಕ್ರಮ ಮರಳು ದಂಧೆ ಸದ್ದಿಲ್ಲದೇ ಸಾಗುತ್ತಿದ್ದು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಮೂರು ಟಿಪ್ಪರ್ ವಶಕ್ಕೆ ಪಡೆದಿದ್ದಾರೆ.ನಗರ ಹೊರವಲಯದಲ್ಲಿ ಮರಳು ತುಂಬಿಕೊಂಡು ಹೋಗುತ್ತಿದ್ದ...

ಕ್ಯೂಟ್ ಪ್ರೇಮಕಥೆಯಲ್ಲಿ ನಿಮಿಕಾ ರತ್ನಾಕರ್

ಬೆಂಗಳೂರು: ನೀಳಕಾಯದ ಚೆಲುವೆ ನಿಮಿಕಾ ರತ್ನಾಕರ್ ಸದ್ಯ ಕನ್ನಡದ ‘ರವಿಚಂದ್ರ’, ‘ಮಾಸ್ಟರ್’ ಮತ್ತು ಪ್ರಜ್ವಲ್ ಜತೆಗಿನ ಒಂದು ಸಿನಿಮಾ ಸೇರಿ ಹಲವು ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸಿನಿಮಾದ...

ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ ಟ್ರೇಲರ್​ ಬಿಡುಗಡೆ

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್...

ಸಾಧನೆಗೆ ನಿಷ್ಕಾಮಕರ್ಮವೇ ಉತ್ಕೃಷ್ಟ

ಭೀಷ್ಮಾದಿಗಳನ್ನು ಕೊಲ್ಲಬೇಕೆಂಬ ತಪ್ಪು ಸಂಶಯ ಅರ್ಜುನನ ಹೃದಯ-ಮನಸ್ಸುಗಳಲ್ಲಿ ಆಳವಾಗಿ ಬೇರೂರಿವೆ. ಈ ಭಾವ ಬರಲು ಕಾರಣವಾದುದು ಅಜ್ಞಾನ. ಅನಾದಿಯಾದರೂ ಅಜ್ಞಾನವು ಸಾಂತ, ಎಂದರೆ...

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ಪ್ರಚಾರ ನಡೆಸುವವರ ವಿರುದ್ಧ ತೀವ್ರ ನಿಗಾ ಇಡಬೇಕು. ಸಾಮಾಜಿಕ ಜಾಲತಾಣಗಳು ಇಲೆಕ್ಟ್ರಾನಿಕ್ ಮಾಧ್ಯಮವಾಗಿರುವುದರಿಂದ ಅವುಗಳಲ್ಲಿ ನಡೆಸುವ ಯಾವುದೇ ಪ್ರಚಾರ ಪೂರ್ವಾನುಮತಿ ಪಡೆದಿರಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕೇಂದ್ರ ವೀಕ್ಷಕ ಕೃಷ್ಣ ಕುನಾಲ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳವಾಗಲು ಇನ್ನಷ್ಟು ಪರಿಣಾಮಕಾರಿಯಾದ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಮತದಾರರಿಗೆ ಮತದಾನಕ್ಕೆ ಅಡ್ಡಿಯಾಗುವಂತಹ ಯಾವುದೇ ವ್ಯಕ್ತಿ ಅಥವಾ ಸಮಸ್ಯೆಗಳನ್ನು ಮೊದಲೇ ಗುರುತಿಸಿ, ಅದಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಚುನಾವಣಾ ವೀಕ್ಷಕರು ಉಭಯ ಜಿಲ್ಲೆಗಳ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಅವರು ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಮತಗಟ್ಟೆಗಳಲ್ಲಿ ಎಲ್ಲಾ ಸೌಲಭ್ಯಗಳು ಇರುವಂತೆ ಆಯಾ ಎಆರ್‌ಒಗಳು ಖುದ್ದು ಭೇಟಿ ನೀಡಿ ಗಮನಹರಿಸಬೇಕು. ಚುನಾವಣೆ ದಿನ ಆಯಾ ಮತಗಟ್ಟೆಯ ಹೊರಗಡೆ, ಮತಗಟ್ಟೆಯ ಮಾಹಿತಿ ನೀಡುವ ಬ್ಯಾನರ್ ಅಳವಡಿಸಬೇಕು ಎಂದು ಕೃಷ್ಣ ಕುನಾಲ್ ತಿಳಿಸಿದರು.

ಚುನಾವಣಾ ಸಿಬ್ಬಂದಿಗೆ ತರಬೇತಿಯನ್ನು ಪರಿಣಾಮಕಾರಿಯಾಗಿ ನೀಡಬೇಕು. ಇದರಿಂದ ಮತದಾನ ದಿನದಂದು ಮತಗಟ್ಟೆಯಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಎದುರಾದರೂ ತ್ವರಿತವಾಗಿ ಪರಿಹರಿಸಬಹುದು ಎಂದು ಅವರು ತಿಳಿಸಿದರು.
ಕೇಂದ್ರ ಚುನಾವಣಾ ಆಯೋಗದ ಪೊಲೀಸ್ ವೀಕ್ಷಕ ಸಂದೀಪ್ ಪ್ರಕಾಶ್ ಕಾರ್ಣಿಕ್ ಮಾತನಾಡಿ, ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಅಭ್ಯರ್ಥಿಗಳು ಯಾವುದೇ ಪ್ರಚೋದನಾಕಾರಿ ಭಾಷಣ ಮಾಡಿದರೆ ತಕ್ಷಣವೇ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಚುನಾವಣಾ ಪ್ರಚಾರದಲ್ಲಿ ಅಭ್ಯರ್ಥಿಗಳು ತಮ್ಮ ಪಕ್ಷಗಳ ನೀತಿ ಹಾಗೂ ಸಾಧನೆಗಳ ಬಗ್ಗೆ ಮಾತನಾಡಬಹುದು. ಆದರೆ ಯಾವುದೇ ರೀತಿಯಲ್ಲಿ ಪರಸ್ಪರ ಸಾಮರಸ್ಯಕ್ಕೆ ಭಂಗ ತರುವಂತೆ ಪ್ರಚಾರ ಕೈಗೊಂಡರೆ ತಕ್ಷಣವೇ ಈ ಬಗ್ಗೆ ಕ್ರಮ ಜರುಗಿಸಬೇಕು. ಚೆಕ್‌ಪೋಸ್ಟ್ ತಪಾಸಣೆಗಳನ್ನು ಇನ್ನಷ್ಟು ಬಿಗಿಗೊಳಿಸಬೇಕು ಎಂದು ಹೇಳಿದರು.

ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಚುನಾವಣಾ ಸಿದ್ಧತೆಗಳ ಬಗ್ಗೆ ಕೇಂದ್ರ ವೀಕ್ಷಕರಿಗೆ ವಿವರ ನೀಡಿದರು. ಸಭೆಯಲ್ಲಿ ಉಡುಪಿ ಜಿಪಂ ಸಿಇಒ ಸಿಂಧೂ ಬಿ. ರೂಪೇಶ್, ಚಿಕ್ಕಮಗಳೂರು ಸಿಇಒ ಅಶ್ವಥಿ, ಉಭಯ ಜಿಲ್ಲೆಗಳ ಎಸ್‌ಪಿಗಳಾದ ನಿಶಾ ಜೇಮ್ಸ್, ಹರೀಶ್ ಪಾಂಡೆ ಅಪರ ಜಿಲ್ಲಾಧಿಕಾರಿಗಳಾದ ವಿದ್ಯಾಕುಮಾರಿ, ಕುಮಾರ್ ಉಪಸ್ಥಿತರಿದ್ದರು.

ಎಂಸಿಎಂಸಿಗೆ ಚುನಾವಣಾ ವೀಕ್ಷಕರ ಭೇಟಿ: ಲೋಕಸಭಾ ಚುನಾವಣೆ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಿರುವ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ(ಎಂಸಿಎಂಸಿ) ಕಚೇರಿಗೆ, ಕೇಂದ್ರ ಚುನಾವಣಾ ಆಯೋಗದ ಸಾಮಾನ್ಯ ವೀಕ್ಷಕರಾದ ಕೃಷ್ಣ ಕುನಾಲ್ ಐಎಎಸ್ ಹಾಗೂ ಪೊಲೀಸ್ ವೀಕ್ಷಕರಾದ ಸಂದೀಪ್ ಪ್ರಕಾಶ ಕಾರ್ಣಿಕ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಮಿತಿಯ ಕಾರ್ಯ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಎಂಸಿಎಂಸಿಯ ನೋಡೆಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

- Advertisement -

Stay connected

278,638FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...