16 C
Bangalore
Thursday, December 12, 2019

ಸಾಯತೊಡಗಿವೆ ಅಡಕೆ ಮರಗಳು

Latest News

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಶಿರಸಿ: ತಾಲೂಕಿನ ಸಂಪಖಂಡ ಹೋಬಳಿ ಅಡಕೆ ತೋಟದಲ್ಲಿ ಎಲೆ ಒಣಗಿ ಅಡಕೆ ಮರಗಳು ಸಾಯತೊಡಗಿವೆ. ಕೊಳೆ ರೋಗದಿಂದ ಬಹುಪಾಲು ಬೆಳೆ ಕಳೆದುಕೊಂಡ ರೈತರಿಗೆ ಈಗ ಮರವೂ ಸಾಯುತ್ತಿರುವುದು ಆತಂಕ ತಂದಿದೆ.

ಇಲ್ಲಿಯ ಅಡಕೆ ತೋಟಗಳಲ್ಲಿ ಕಳೆದ ಒಂದು ತಿಂಗಳಿಂದ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಮರಗಳು ಸಾಯತೊಡಗಿವೆ. ಇಲ್ಲಿಯ ಹಣಗಾರಿನ ಶ್ರೀಧರ ಭಾಗ್ವತ ಅವರ ತೋಟದಲ್ಲಿ ಅಧಿಕ ಪ್ರಮಾಣದಲ್ಲಿ ಮರಗಳು ಸತ್ತಿವೆ. ಈಗಾಗಲೇ ನೂರಾರು ಮರಗಳು ಸತ್ತಿದ್ದು, ಇನ್ನೂ ಹಲವು ಮರಗಳಲ್ಲಿ ಎಲೆಗಳು ಬಾಡಿ ಸಾವಿನ ದಾರಿಯಲ್ಲಿವೆ. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸತೀಶ ಹೆಗಡೆ, ಹಾರ್ಟಿ ಕ್ಲಿನಿಕ್​ನ ವಿಷಯ ತಜ್ಞ ವಿಜಯೇಂದ್ರ ಹೆಗಡೆ, ಸಹಾಯಕ ತೋಟಗಾರಿಕೆ ಅಧಿಕಾರಿ ಅಶ್ವಿನಿ ಇತರರು ಸಂಪಖಂಡ ಹೋಬಳಿಯ ಅಡಕೆ ತೋಟಗಳಿಗೆ ಭೇಟಿ ನೀಡಿ ಅಲ್ಲಿಯ ಸುತ್ತಮುತ್ತಲಿನ ರೈತರೊಡನೆ ಸಂವಾದ ನಡೆಸಿದ್ದಾರೆ.

ಶಿಲೀಂದ್ರದ ರೋಗ: ರೈತರಿಗೆ ಮಾಹಿತಿ ನೀಡಿದ ವಿಜಯೇಂದ್ರ ಹೆಗಡೆ, ‘ಶಿಲೀಂದ್ರದಿಂದ ಬರುವ ಈ ರೋಗ ಕಳೆದ ನಾಲ್ಕು ವರ್ಷಗಳ ಹಿಂದೆ ಶಿರಸಿ ಮತ್ತು ಯಲ್ಲಾಪುರ ತಾಲೂಕಿನ ಕೆಲವು ಅಡಕೆ ತೋಟಗಳಲ್ಲಿ ಕಂಡು ಬಂದಿತ್ತು. ಎಲೆಗಳ ತುದಿ ಭಾಗ ಹಳದಿಯಾಗಿ ಈ ರೋಗ ಪ್ರಾರಂಭವಾಗುತ್ತದೆ. ನಂತರ ಎಲೆಗಳು ತುದಿಯಿಂದ ಒಣಗಲು ಪ್ರಾರಂಭವಾಗಿ, ಪೂರ್ತಿ ಒಣಗುತ್ತದೆ. ರೋಗ ತೀವ್ರವಾದಾಗ ಎಲ್ಲ ಎಲೆಗಳೂ ಒಣಗಿ ಮರ ಸಾಯುವ ಹಂತ ತಲುಪುತ್ತದೆ. ಜಾಸ್ತಿ ಬಿಸಿಲು ತಾಗುವ, ಹಳೆಯ ಎತ್ತರದ ಮರಗಳಿಗೆ ಸಾಮಾನ್ಯವಾಗಿ ಈ ರೋಗ ಬರುತ್ತದೆ. ಸಾರಜನಕ ಮತ್ತು ಪೊಟ್ಯಾಷ್, ಇನ್ನಿತರ ಪೋಷಕಾಂಶದ ಕೊರತೆಯಿರುವ ತೋಟಗಳಲ್ಲಿ ಮರ ದುರ್ಬಲವಾಗಿರುವ ಕಾರಣ ರೋಗಕ್ಕೆ ಸುಲಭವಾಗಿ ತುತ್ತಾಗುತ್ತದೆ. ಹಣಗಾರಿನಲ್ಲಿ ರೈತರು ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಮರಗಳ ಬುಡಕ್ಕೆ ಹತ್ತು ಇಂಚಿಗೂ ಅಧಿಕ ಮಣ್ಣು ಹಾಕಿ, ಕಾಲುವೆಗೆ ಮೂರು ಅಡಿಗಳಷ್ಟು ಮಣ್ಣು ಹಾಕಿ ಮುಚ್ಚಿದ್ದಾರೆ. ಇದರಿಂದಾಗಿ ಬೇರಿನ ಉಸಿರಾಟದ ತೊಂದರೆಯಾಗಿ, ಗಿಡ ದುರ್ಬಲವಾಗಿದೆ. ಮರದ ಚಂಡೆ ಸಣ್ಣದಾಗಿ ಮತ್ತು ಎಲೆ ಸುಡುವ ರೋಗವೂ ತೀವ್ರವಾಗಿ ಬಂದಿರುವದರಿಂದ ಮರಗಳು ಸಾಯುವ ಹಂತ ತಲುಪಿವೆ’ ಎಂದರು.

ನಿಯಂತ್ರಣ ಹೇಗೆ?: ಕಾರ್ಬೆಂಡೆಂಜಿಂ ಮತ್ತು ಮ್ಯಾಂಕೋಜೆಬ್ ಮಿಶ್ರಣ ಇರುವ ಶಿಲೀಂದ್ರನಾಶಕ(ಸಾಪ್, ಕಂಪಾನಿಯನ್)ವನ್ನು 2.5ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರಿಸಿ ಎಲೆಗಳಿಗೆ ಸಿಂಪಡಿಸಬೇಕು. ಈ ರೋಗದಿಂದ ಗಿಡ ಬೇಗ ಚೇತರಿಸಿಕೊಳ್ಳಲು ಬಸಿಗಾಲುವೆ ತೆಗೆಯಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಪ್ರತಿ ಮರಕ್ಕೆ 75 ಗ್ರಾಂ ಯೂರಿಯಾ ಮತ್ತು 150ಗ್ರಾಂ ಮ್ಯುರಿಯೇಟ್ ಆಪ್ ಪೊಟ್ಯಾಷ್ ಗೊಬ್ಬರವನ್ನು ಮರದ ಬುಡದಿಂದ ಒಂದೂವರೆ ಅಡಿ ದೂರದಲ್ಲಿ ತೇವಾಂಶವಿರುವಾಗ ಹಾಕಬೇಕು.

ಅಕ್ಟೋಬರ್​ವರೆಗೂ ಚೆನ್ನಾಗಿದ್ದ ಅಡಕೆ ಮರಗಳು ನಂತರ ಸಾಯತೊಡಗಿವೆ. ಈಗ ರೋಗ ಇನ್ನೂ ಉಲ್ಬಣವಾಗುವ ಲಕ್ಷಣ ಕಾಣಿಸುತ್ತಿದೆ. —- ಶ್ರೀಧರ ಭಾಗ್ವತ ಹಣಗಾರ ಕೃಷಿಕ

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...