23.2 C
Bangalore
Saturday, December 14, 2019

ಸಾರಿಗೆ ಅವ್ಯವಸ್ಥೆ ಖಂಡಿಸಿ ಹೇರೂರಿನಲ್ಲಿ ಪ್ರತಿಭಟನೆ

Latest News

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ನಾಡು-ನುಡಿ ರಕ್ಷಣೆಗೆ ಸೇವಾ ಮನೋಭಾವ ಅಗತ್ಯ

ಜಗಳೂರು: ಜಗಳೂರಿನಲ್ಲಿ ರಾಜ್ಯ ಮಟ್ಟದ ಯುವಜನ ಮೇಳ ಆಯೋಜಿಸುವ ಚಿಂತನೆ ಇದೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ ಎನ್‌ಎಂಕೆ ಪ್ರೌಢಶಾಲೆ ಸಭಾಂಗಣದಲ್ಲಿ...

ಸಿದ್ದಾಪುರ: ಸಾರಿಗೆ ಅವ್ಯವಸ್ಥೆ ಖಂಡಿಸಿ ತಾಲೂಕಿನ ಹೇರೂರಿನಲ್ಲಿ ಶಾಲಾ-ಕಾಲೇಜ್ ವಿದ್ಯಾರ್ಥಿಗಳು, ಸಾರ್ವಜನಿಕರು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿ, ಸಮಯಕ್ಕೆ ಸರಿಯಾಗಿ ಬಸ್ ಹಾಗೂ ಹೆಚ್ಚುವರಿ ಬಸ್ ಓಡಿಸಬೇಕು ಎಂದು ಆಗ್ರಹಿಸಿದರು.

ಹೇರೂರು ಹಾಗೂ ತಟ್ಟಿಕೈ ಭಾಗದಿಂದ ನಿತ್ಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊಳಗಿಬೀಸ್ ಪದವಿಪೂರ್ವ ಕಾಲೇಜ್ ಹಾಗೂ ಶಿರಸಿಯ ವಿವಿವಿಧ ಶಾಲಾ- ಕಾಲೇಜ್​ಗೆ ತೆರಳುತ್ತಾರೆ. ಶಾಲೆ ಆರಂಭವಾದಾಗಿನಿಂದ ಒಂದು ದಿನವೂ ಸಮಯಕ್ಕೆ ಸರಿಯಾಗಿ ಬಸ್ ಬಂದಿಲ್ಲ. ಒಂದು ವೇಳೆ ಬಂದರೆ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳಿಂದ ತುಂಬಿರುವುದರಿಂದ ಹೇರೂರು ಹಾಗೂ ತಟ್ಟಿಕೈನಲ್ಲಿ ನಿಲ್ಲಿಸುವುದಿಲ್ಲ. ಹೀಗಾದರೆ ಇಲ್ಲಿನ ವಿದ್ಯಾರ್ಥಿಗಳು ಶಾಲೆಗೆ ಹೇಗೆ ತೆರಳಬೇಕು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬೆಳಗ್ಗೆ ಸಿದ್ದಾಪುರ- ಶಿರಸಿ ಬಸ್, ಹುಕ್ಕಳಿ- ಶಿರಸಿ ಹಾಗೂ ಶಿರಸಿ- ಗೋಳಿಮಕ್ಕಿ ಬಸ್ ಪ್ರಯಾಣಿಕರನ್ನು ತುಂಬಿಕೊಂಡು ಬರುತ್ತಿದ್ದು, ಹೇರೂರು ಹಾಗೂ ತಟ್ಟಿಕೈನಲ್ಲಿ ನಿಲ್ಲಿಸುತ್ತಿಲ್ಲ, ಇದರಿಂದ ತೊಂದರೆಯಾಗಿದೆ. ಸಾರಿಗೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಸಾರ್ವಜನಿಕರು ಬಸ್ ಸಂಚಾರ ತಡೆದರು.

ಸ್ಥಳಕ್ಕೆ ಸಿದ್ದಾಪುರ ಸಿಪಿಐ ಮಂಜುನಾಥ ರ್ಬಾ ಭೇಟಿ ನೀಡಿ, ಯಾವುದೇ ಮುನ್ಸೂಚನೆ ಇಲ್ಲದೆ ಪ್ರತಿಭಟನೆ ನಡೆಸುವುದು ಸರಿಯಲ್ಲ. ಸಬಂಧಪಟ್ಟ ಇಲಾಖೆಗೆ ಮನವಿ ನೀಡಬೇಕು. ಸದ್ಯ ಪ್ರತಿಭಟನೆ ಸ್ಥಗಿತಗೊಳಿಸಬೇಕು ಎಂದು ತಿಳಿಸಿದ್ದರಿಂದ ಪ್ರತಿಭಟನಾಕಾರರು ಪ್ರತಿಭಟನೆ ಕೈಬಿಟ್ಟರು. ಅಬ್ದುಲ್ ಸಾಬ್ ಹೇರೂರು, ಕೆ.ಎಂ. ಹೆಗಡೆ ಹೊಳ್ಳಾಡೆ, ವಿನಾಯಕ ಶೇಟ್, ಅಜೀಂ ಬೇಡ್ಕಣಿ, ಅಬ್ದುಲ್, ಆದಂ ಸಾಬ್ ಹೇರೂರು, 50ಕ್ಕೂ ಹೆಚ್ಚು ವಿದ್ಯಾರ್ಥಿಗಳು, ನೂರಾರು ಸಾರ್ವಜನಿಕರು ಪಾಲ್ಗೊಂಡಿದ್ದರು.

ತೀವ್ರ ಹೋರಾಟ: ಸಾರಿಗೆ, ತಹಸೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಸಾರಿಗೆ ಅವ್ಯವಸ್ಥೆ ಕುರಿತು ಮನವಿ ನೀಡುತ್ತೇವೆ. ಶನಿವಾರದೊಳಗೆ ವ್ಯವಸ್ಥೆ ಸರಿಪಡಿಸಬೇಕು. ಇಲ್ಲದಿದ್ದರೆ ಶನಿವಾರ ತೀವ್ರ ಹೋರಾಟ ನಡೆಸುತ್ತೇವೆ ಎಂದು ಅಬ್ದುಲ್​ಸಾಬ್ ಹೇರೂರು ಹಾಗೂ ಪ್ರತಿಭಟನಾಕಾರರು ತಿಳಿಸಿದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...