ಲಿಂಗಸುಗೂರು: ಸ್ಥಳೀಯ ಸಾರಿಗೆ ಘಟಕ ವ್ಯವಸ್ಥಾಪಕ ಸಿಬ್ಬಂದಿಗೆ ವಿನಾಕಾರಣ ಕಿರುಕುಳ ನೀಡುತ್ತಿದ್ದು, ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜುಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಭಾನುವಾರ ಮನವಿ ಸಲ್ಲಿಸಿದರು.
ವ್ಯವಸ್ಥಾಪಕರ ಕಿರುಕುಳದಿಂದಾಗಿ ಸಿಬ್ಬಂದಿಗೆ ಕಾರ್ಯನಿರ್ವಹಿಸಲು ಕಷ್ಟವಾಗಿದೆ. 25 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದ್ದು, ಘಟಕದ ಸಿಬ್ಬಂದಿ ಕೆಲಸ ಮಾಡಲು ಹೆದರುವಂತಾಗಿದೆ. ಘಟಕದಲ್ಲಿ ಗುಜರಿ ಬಸ್‌ಗಳಿದ್ದು, ಹೆಚ್ಚಿನ ಮೈಲೇಜ್ ನೀಡುವಂತೆ ತಾಕೀತು ಮಾಡುತ್ತಿದ್ದಾರೆ ಎಂದು ದೂರಿದರು.