20.4 C
Bangalore
Monday, December 9, 2019

ಸಾರಿಗೆ ನೌಕರರಿಂದ ಬೆಂಗಳೂರು ಚಲೋ 27ರಂದು

Latest News

ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಹುಬ್ಬಳ್ಳಿ: ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳನ್ನು ಒಂದು ಮಾಡುವುದು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್​ಆರ್​ಟಿಸಿ ಸ್ಟಾಫ್ ಆಂಡ್ ವರ್ಕರ್ಸ್ ಫೆಡರೇಷನ್​ನಿಂದ ಜೂ. 27ಕ್ಕೆ ಬೆಂಗಳೂರು ಚಲೋ ಕರೆ ನೀಡಲಾಗಿದೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಎಚ್.ವಿ. ಅನಂತಸುಬ್ಬರಾವ್, ಸುಮಾರು 20 ಸಾವಿರ ನೌಕರರು ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ರ‍್ಯಾಲಿ ಹಾಗೂ ಪ್ರತಿಭಟನಾ ಸಭೆ ನಡೆಯುವ ಸ್ಥಳ ಇನ್ನೂ ನಿಗದಿಗೊಳಿಸಿಲ್ಲ ಎಂದರು.

ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಕೆಎಸ್​ಆರ್​ಟಿಸಿ ವಿಭಜನೆಯಾದ ನಂತರ ಆಡಳಿತ ವೆಚ್ಚ ಹೆಚ್ಚಾಗಿದೆ. ಸಾರಿಗೆ ಸಂಸ್ಥೆಯ ಪುನಃಶ್ಚೇತನಕ್ಕೆ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚಾಲಕರ ಮತ್ತು ನಿರ್ವಾಹಕರ ಮೇಲೆ ಕೆಲಸದ ಒತ್ತಡ ಹೆಚ್ಚುತ್ತಿದೆ. ಅವರಿಗೆ ನಿಯಮಗಳ ಪ್ರಕಾರ ಓವರ್​ಟೈಮ್ ಕೊಡುತ್ತಿಲ್ಲ. ರಜೆ ಮಂಜೂರು ಮಾಡುವಲ್ಲಿ, ವಾಹನ ಮತ್ತು ಮಾರ್ಗ ಕೊಡುವಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಹಿರಿಯ ಅಧಿಕಾರಿಗಳ ಕಿರುಕುಳ ಹೆಚ್ಚುತ್ತಿದ್ದು, ಇದರಿಂದ ಆತ್ಮಹತ್ಯೆಯಂತಹ ಪ್ರಕರಣಗಳು ಉದ್ಭವಿಸುತ್ತಿವೆ ಎಂದು ದೂರಿದರು.

ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡಲು ಬೇಕಾದ ಅನುಕೂಲಕರ ವಾತಾವರಣವನ್ನು ಅಧಿಕಾರಿಗಳು ನಿರ್ವಿುಸಬೇಕು. ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿಯ ಕುಟುಂಬಕ್ಕೆ ಕನಿಷ್ಠ 25 ಲಕ್ಷ ರೂ. ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿದರು.

ಕಳೆದ 16 ತಿಂಗಳುಗಳಿಂದ ನಿವೃತ್ತರಾದ ಬಿಎಂಟಿಸಿ ನೌಕರರಿಗೆ ಗ್ರ್ಯಾಚುಯಿಟಿ ನೀಡಿಲ್ಲ. ವಾಯವ್ಯ ಸಾರಿಗೆ ಮತ್ತು ಬಿಎಂಟಿಸಿಯ ನಿವೃತ್ತ ನೌಕರರಿಗೆ ನೀಡಬೇಕಿರುವ 600 ಕೋಟಿ ರೂ.ಗೂ ಹೆಚ್ಚಿನ ಹಣ ಬಾಕಿ ಉಳಿಸಿಕೊಳ್ಳಲಾಗಿದೆ ಎಂದರು.

ರಾಜ್ಯ ಸರ್ಕಾರ ವಾಹನಗಳ ತೆರಿಗೆ ರಿಯಾಯಿತಿ ನೀಡಿದರೆ ನಾಲ್ಕೂ ನಿಗಮಗಳಿಗೆ ಕನಿಷ್ಠ 500 ಕೋಟಿ ರೂ. ಉಳಿತಾಯವಾಗುತ್ತದೆ. ಡೀಸೆಲ್ ಸುಂಕ ಕಡಿಮೆ ಮಾಡಿದರೆ 300 ಕೋಟಿ ರೂ. ಉಳಿಯುತ್ತದೆ. ಸಾರಿಗೆ ಬಸ್​ಗಳಿಗೆ ಟೋಲ್ ಶುಲ್ಕ ರದ್ದು ಮಾಡಿದರೆ 150 ಕೋಟಿ ರೂ. ಉಳಿಯುತ್ತದೆ ಎಂದು ತಿಳಿಸಿದರು.

ಫೆಡರೇಷನ್​ನ ಆರ್.ಎಫ್. ಕವಳಿಕಾಯಿ ಹಾಗೂ ಮತ್ತಿತರರು ಹಾಜರಿದ್ದರು.

ಭ್ರಷ್ಟಾಚಾರ ಹೆಚ್ಚಾಗಿದೆ: ಡಿ.ಸಿ. ತಮ್ಮಣ್ಣ ಸಾರಿಗೆ ಸಚಿವರಾದ ನಂತರ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಎಚ್.ವಿ. ಅನಂತಸುಬ್ಬರಾವ್ ದೂರಿದರು. ಸಾರಿಗೆ ಸಂಸ್ಥೆಯ ಅಭಿವೃದ್ಧಿ ನಿಟ್ಟಿನಲ್ಲಿ ಸಚಿವ ತಮ್ಮಣ್ಣ ಯಾವುದೇ ಕೆಲಸ ಮಾಡುತ್ತಿಲ್ಲ. ಅವರಿಂದ ಸಂಸ್ಥೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವೊಂದಕ್ಕೆ 170 ಕೋಟಿ ರೂ.ಗಳನ್ನು ಸರ್ಕಾರ ಖರ್ಚು ಮಾಡಿದೆ. ಆದರೆ, ಸಾರಿಗೆ ಸಂಸ್ಥೆಯ ಅಭಿವೃದ್ಧಿಗೆ ಆರ್ಥಿಕ ಸಹಾಯ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...