ಸಾರ್ವಜನಿಕವಾಗಿ ಕಾಣಿಸಿದ ರೆಡ್ಡಿ

ಬಳ್ಳಾರಿ: ಗಣಿ ವಿವಾದದಲ್ಲಿ ಸಿಲುಕಿ 2016ರಿಂದೀಚೆಗೆ ಬಳ್ಳಾರಿಯಿಂದ ದೂರಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಬುಧವಾರ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಇವರನ್ನು ನೋಡಲು ಜನ ಮುಗಿಬಿದ್ದರು.

4 ದಿನಗಳ ಹಿಂದೆ ಬಳ್ಳಾರಿಗೆ ಆಗಮಿಸಿರುವ ರೆಡ್ಡಿ, ಹೊರವಲಯದ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಏರ್ಪಾಡಾಗಿದ್ದ ಚಂಡಿಕಾ ಯಾಗದಲ್ಲಿ ಭಾಗಿಯಾದರು. ಬಳಿಕ ಸುದ್ದಿಗೋಷ್ಠಿ ನಡೆಸಿ, ‘ನಗರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬಿಜೆಪಿ ಆಡಳಿತ ಅವಧಿಯಲ್ಲೇ 180 ಕೋಟಿ ರೂ. ಮಂಜೂರಾದರೂ ಕಾಮಗಾರಿ ಪೂರ್ಣಗೊಂಡಿಲ್ಲ’ ಎಂದು ಬೇಸರಿಸಿದರು.

ಈಗಿನ ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಮ್ ಜಿಲ್ಲೆಯವರೇ ಆಗಿದ್ದು, ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟಿಸಲಿ. ಇದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್, ಜಿಲ್ಲೆಯ ಶಾಸಕರಾದ ಬಿ.ನಾಗೇಂದ್ರ, ಬಿ.ಶ್ರೀರಾಮುಲು ಒಗ್ಗಟ್ಟಿನಿಂದ ಶ್ರಮಿಸಲಿ. ನನ್ನ ಅವಧಿಯಲ್ಲಿ ಜಾರಿಯಾದ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುದಾನ ಕಡಿತಗೊಳಿಸಿರುವುದು ಬೇಸರವಾಗಿದೆ ಎಂದರು.

Leave a Reply

Your email address will not be published. Required fields are marked *