28.5 C
Bengaluru
Monday, January 20, 2020

ಸಾಲಮನ್ನಾ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಹಾವೇರಿ: ಜಿಲ್ಲೆಯಲ್ಲಿ ತೀವ್ರ ಬರ ಆವರಿಸಿ ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರದ ಸಾಲಮನ್ನಾ ಘೊಷಣೆಯಿಂದ ರೈತರಿಗೆ ಸಾಕಷ್ಟು ತೊಂದರೆಯಾಗಿದ್ದು, ಒಂದು ತಿಂಗಳೊಳಗೆ ಅದನ್ನು ಬಗೆಹರಿಸದಿದ್ದರೆ ಆಗಸ್ಟ್ 19ರಂದು ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ತಿಳಿಸಿದರು.

ನಗರದ ಪ್ರವಾಸಿಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಸಾಲಮನ್ನಾದ ಮಾಹಿತಿ ಸರಿಯಾಗಿ ದೊರೆಯುತ್ತಿಲ್ಲ. ಸಾಲಮನ್ನಾ ಆಗುತ್ತದೆಯೋ ಇಲ್ಲವೋ ಎಂಬುದು ಗೊತ್ತಾಗುತ್ತಿಲ್ಲ. ಹೊಸ ಸಾಲವೂ ಸಿಗುತ್ತಿಲ್ಲ. ಕೂಡಲೇ ರೈತರಿಗೆ ಸರಿಯಾದ ಮಾಹಿತಿ ನೀಡಿ ಗೊಂದಲ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕ್​ನಲ್ಲಿರುವ 1.12 ಲಕ್ಷ ರೈತರ 2,025 ಕೋಟಿ ರೂ. ಸಾಲಮನ್ನಾ ಮಾಡುವುದಾಗಿ ಸರ್ಕಾರ ತಿಳಿಸಿತ್ತು. ಆದರೆ, ಕೇವಲ 425 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಸಹಕಾರಿ ಸಂಘಗಳ 21,621 ರೈತರಿಗೆ 70.58 ಕೋಟಿ ರೂ. ಸಾಲಮನ್ನಾ ಹಣ ಬರಬೇಕಿತ್ತು. ಅದರಲ್ಲೂ 25 ಕೋಟಿ ರೂ. ಬಾಕಿ ಉಳಿದಿದೆ. ರೈತರು ಬ್ಯಾಂಕ್​ಗೆ ಹೋಗಿ ವಿಚಾರಿಸಿದರೆ ಸರ್ಕಾರದಿಂದ ಇನ್ನೂ ಹಣ ಬಂದಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ ರೈತರ ಸಾಲ ಮನ್ನಾ ಆಗದೇ ಹೊಸ ಸಾಲವೂ ಸಿಗದೇ ಬೀಜ, ಗೊಬ್ಬರ ಖರೀದಿಗೆ ಪರದಾಡುವಂತಾಗಿದೆ ಎಂದು ದೂರಿದರು.

ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ 1 ತಿಂಗಳು ತಡವಾಗಿ ಬಿತ್ತನೆಯಾಗಿದೆ. ಮುಂದೆ ಸರಿಯಾಗಿ ಬೆಳೆ ಬರುತ್ತದೆಯೋ ಇಲ್ಲವೋ ಎಂಬ ಚಿಂತೆ ರೈತರನ್ನು ಕಾಡುತ್ತಿದೆ. ಹಳ್ಳಿಗಳಲ್ಲಿ ಕುಡಿಯಲು ಸಮರ್ಪಕ ನೀರು, ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ಅಧಿಕಾರಿಗಳು ಜನರಿಗೆ ಸ್ಪಂದಿಸುತ್ತಿಲ್ಲ. ಜಿಲ್ಲಾಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ. ಉಸ್ತುವಾರಿ ಸಚಿವರೂ ಜಿಲ್ಲೆಯತ್ತ ತಿರುಗಿ ನೋಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಯಾವ ರೈತರ ಎಷ್ಟು ಸಾಲಮನ್ನಾ ಆಗಿದೆ ಎಂಬಿತ್ಯಾದಿ ಮಾಹಿತಿ ನೀಡಲು ಒಬ್ಬ ಅಧಿಕಾರಿಯನ್ನು ನೇಮಿಸಬೇಕು. ಇಲ್ಲವೇ ರೈತರ ಸಾಲದ ಕುರಿತು ಆನ್​ಲೈನ್​ನಲ್ಲಿ ಪ್ರಕಟಿಸಬೇಕು. ಜಿಲ್ಲೆಗೆ 158ಕೋಟಿ ರೂ. ಬೆಳೆವಿಮೆ ಮಂಜೂರಾಗಿದೆ ಎಂದು ಕೃಷಿ ಅಧಿಕಾರಿಗಳು ಹೇಳುತ್ತಾರೆ. ಯಾವ ರೈತರಿಗೆ, ಯಾವ ಬೆಳೆಗೆ ಎಷ್ಟು ವಿಮೆ ಬಂದಿದೆ ಎಂಬ ಮಾಹಿತಿ ಸಿಗುತ್ತಿಲ್ಲ. ಕೂಡಲೇ ಯಾವ ಬೆಳೆಗೆ ಎಷ್ಟು ಹಣ ಬಂದಿದೆ ಎಂಬ ಮಾಹಿತಿ ಕೊಟ್ಟು ತಕ್ಷಣ ರೈತರ ಖಾತೆಗೆ ವಿಮಾ ಹಣ ಜಮಾ ಮಾಡಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ರೈತರಾದ ಪ್ರಭುಗೌಡ ಪ್ಯಾಟಿ, ಸುರೇಶ ಚಲವಾದಿ ಇದ್ದರು.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...