18.5 C
Bangalore
Monday, December 16, 2019

ಸಾವನ್ನಪ್ಪಿದ ಮೇಲೆ ಎಚ್ಚೆತ್ತುಕೊಂಡದ್ದು ಎಷ್ಟು ಸರಿ

Latest News

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ಶತಮಾನ ಶಾಲೆಗಿಲ್ಲ ಸೌಲಭ್ಯಗಳ ಭಾಗ್ಯ

ಕೆ.ಕೆಂಚಪ್ಪ ಮೊಳಕಾಲ್ಮೂರು: ಶತಮಾನ ಪೂರೈಸಿದ ಪಟ್ಟಣದ ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಲ ಸೌಲಭ್ಯಗಳ ಕೊರತೆಯಿಂದ ನಲುಗುತ್ತಿದೆ. ಒಂದು ತಲೆಮಾರಿಗೆ ಅಕ್ಷರ ದಾಸೋಹ...

ಸಾಗರ: ಮಂಗನ ಕಾಯಿಲೆ ಪೀಡಿತರನ್ನು ಶುಶ್ರೂಷೆಗೆ ಸರ್ಕಾರಿ ಆಸ್ಪತ್ರೆ ಇದ್ದರೂ ಖಾಸಗಿ ಆಸ್ಪತ್ರೆಗೆ ಏಕೆ ಕಳುಹಿಸಿದರು ಎನ್ನುವ ಪ್ರಶ್ನೆ ಉದ್ಭವಿಸುತ್ತದೆ. ಕಾಯಿಲೆಯಿಂದ ಬಳಲುತ್ತಿರುವವರು ಸಾವನ್ನಪ್ಪಿದ ಮೇಲೆ ಎಚ್ಚೆತ್ತುಕೊಂಡದ್ದು ಎಷ್ಟು ಸರಿ ಎಂದು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಮಂಗನ ಕಾಯಿಲೆ ಸಂಬಂಧ ನೇಮಕ ಮಾಡಿರುವ ತಜ್ಞರ ಸಮಿತಿ ಮುಖ್ಯಸ್ಥ ಮದನ್​ಗೋಪಾಲ್ ತೀವ್ರ ಆತಂಕ ವ್ಯಕ್ತಪಡಿಸಿದರು.

ಗುರುವಾರ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿ ಮಂಗನ ಕಾಯಿಲೆ ಗುರುತಿಸಿರುವ ಪ್ರದೇಶಗಳಲ್ಲಿ ಮಾತುಕತೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಜನ ಗಾಬರಿಗೊಳ್ಳುವುದು ಬೇಡ: ಅರಳಗೋಡು ಸುತ್ತಮುತ್ತಲ ಗ್ರಾಮಸ್ಥರು ಸಮಸ್ಯೆ ಆರಂಭವಾದ ತಕ್ಷಣ ನಾವು ಸರ್ಕಾರಿ ಆಸ್ಪತ್ರೆಗಳ ಗಮನಕ್ಕೆ ತಂದಿದ್ದೇವೆ. ಯಾರೂ ಇದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎನ್ನುತ್ತಾರೆ. ಇನ್ನು ಐಡಿಎಸ್​ಪಿ ಯೋಜನೆಯ ಅಧಿಕಾರಿಗಳನ್ನು ಕೇಳಿದರೆ ನಮಗೆ ಈ ಬಗ್ಗೆ ಏನೂ ಮಾಹಿತಿ ಬರಲಿಲ್ಲ ಎನ್ನುತ್ತಾರೆ. ಕಳೆದ ಸೆಪ್ಟೆಂಬರ್​ನಲ್ಲಿಯೆ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿತ್ತು. ಮಂಗಗಳು ಸಾವನ್ನಪ್ಪುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೆ ಮಂಗಗಳನ್ನು ನಾವೇ ಸಾಯಿಸಿದ್ದೇವೆ ಎಂದು ಹಣೆಪಟ್ಟಿ ಕಟ್ಟುತ್ತಾರೆ ಎಂದು ಗ್ರಾಮಸ್ಥರು ಹೇಳುತ್ತಾರೆ.

ಈ ಎಲ್ಲ ವಿಚಾರಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯ ಜತೆಯಲ್ಲಿ ನಾನು ಮಾತನಾಡಿದ್ದೇನೆ. ಜನ ಗಾಬರಿಗೊಳ್ಳುವುದು ಬೇಡ. ಎಲ್ಲವನ್ನೂ ಈಗಲೇ ನಿರ್ಧರಿಸಿ ಹೇಳಲು ಸಾಧ್ಯವಿಲ್ಲ. ಸಂಪೂರ್ಣ ವಿಷಯವನ್ನು ಸಂಗ್ರಹಿಸಿ ಮಂಗನ ಕಾಯಿಲೆಗೆ ಸಂಬಂಧಿಸಿ ಆಗಬೇಕಾದ ಅಗತ್ಯತೆಯ ಬಗ್ಗೆಯೂ ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಮದನ್​ಗೋಪಾಲ್ ತಿಳಿಸಿದರು.

ನಿವೃತ್ತ ವೈದ್ಯರನ್ನು ನೇಮಕ ಮಾಡಿಕೊಳ್ಳಬಹುದು: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗನ ಕಾಯಿಲೆ ಉಲ್ಬಣಗೊಂಡು ಜನರು ಸಾವನ್ನಪ್ಪಿ ಪತ್ರಿಕೆಗಳಲ್ಲಿ ಅದು ದಾಖಲಾದ ಮೇಲೆ ಇಲಾಖೆಯವರು ಎಚ್ಚೆತ್ತುಕೊಂಡರೆ ಏನು ಪ್ರಯೋಜನ?. ಪ್ರತಿಯೊಂದು ವಿಚಾರವನ್ನೂ ನಾನು ರ್ಚಚಿಸಿ ವಿವರಗಳನ್ನು ಪಡೆಯುತ್ತಿದ್ದೇನೆ. ಈ ಕಾರ್ಯಾಚರಣೆಯಲ್ಲಿ ಐದು ಇಲಾಖೆಗಳು ಕಾರ್ಯ ನಿರ್ವಹಿಸಬೇಕಾಗುತ್ತದೆ. ನಮ್ಮದೇನು ಕೆಲಸ ಎಂದು ಇಲಾಖೆಗಳು ಕೇಳುವಂತಿಲ್ಲ. ಅದಕ್ಕೆ ಸರ್ಕಾರದ ಅಧಿಸೂಚನೆಯೆ ಹೊರಡಿಸಲಾಗಿದೆ. ಶುಶ್ರೂಷೆಗೆ ನಿವೃತ್ತ ವೈದ್ಯರನ್ನು ಸಹಿತ ನೇಮಕ ಮಾಡಿಕೊಳ್ಳಬಹುದಾಗಿದೆ. ಇದಕ್ಕೆ ಉಪವಿಭಾಗಾಧಿಕಾರಿಗೆ ಸಂಪೂರ್ಣ ಅಧಿಕಾರ ಇರುತ್ತದೆ ಎಂದು ತಿಳಿಸಿದರು.

ಸಂಶೋಧನೆಯಿಂದ ರೋಗ ತಡೆಗಟ್ಟಲು ಸಾಧ್ಯವಿಲ್ಲ: ಮಂಗಗಳು ಸಾಗರ ತಾಲೂಕಿನ ಸುತ್ತಮುತ್ತಲೂ ನಿರಂತರವಾಗಿ ಸಾವನ್ನಪ್ಪುತ್ತಿರುವ ಬಗ್ಗೆಯೂ ಕೂಡ ಸರ್ಕಾರಕ್ಕೆ ವರದಿ ನೀಡುತ್ತೇನೆ. ಬರಿ ಸಂಶೋಧನೆಗಳಿಂದ ರೋಗ ತಡೆಗಟ್ಟಲು ಸಾಧ್ಯವಿಲ್ಲ. ಕೆಲಸ ಮಾಡಬೇಕಾಗುತ್ತದೆ. ಬುಧವಾರ ಅರಳಗೋಡಿನಲ್ಲಿ ಸಾಗರ ತಾಪಂ ಅಧ್ಯಕ್ಷ ಹಕ್ರೆ ಮಲ್ಲಿಕಾರ್ಜುನ್ ಮನವಿಯೊಂದನ್ನು ನೀಡಿ ಅಗತ್ಯವಾಗಿ ಆಗಬೇಕಾಗಿರುವ ಕೆಲಸಗಳ ಕುರಿತು ಬೆಳಕು ಚೆಲ್ಲಿದ್ದಾರೆ. ವೈದ್ಯರ ತಂಡ, ದಾದಿಯರು, ಆಶಾ ಕಾರ್ಯಕರ್ತೆಯರು, ಕೆಎಫ್​ಡಿ ಘಟಕ ನಿರಂತರವಾಗಿ ಜನರ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವುದು, ಭೇಟಿ ನೀಡಿದ ಮನೆಗಳಿಗೆ ಕರಪತ್ರಗಳನ್ನು ನೀಡಿ ಸ್ಟಿಕ್ಕರ್​ಗಳನ್ನು ಅಂಟಿಸುವ ಕೆಲಸ ಕೂಡ ಮಾಡುತ್ತಿದ್ದಾರೆ ಎಂದರು. ಸಾಗರ ಉಪವಿಭಾಗಿಯ ಆಸ್ಪತ್ರೆಯ ಕೆಎಫ್​ಡಿ ಘಟಕದಲ್ಲಿ ಎಷ್ಟು ಜನ ದಾಖಲಾಗಿದ್ದರು. ಅವರು ಯಾವಾಗ ಗುಣಮುಖ ಹೊಂದಿದರು. ಅವರಿಗೆ ಏನೆಲ್ಲ ಶುಶ್ರೂಷೆ ನೀಡಿದ್ದಾರೆ ಎಂಬ ಸಂಪೂರ್ಣ ವಿವರವನ್ನು ಪಡೆದುಕೊಂಡರು.

ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಡಾ. ಸಜ್ಜನ್ ಶೆಟ್ಟಿ, ಜಿಲ್ಲಾ ವೈದ್ಯಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ, ಸಾಗರ ಉಪವಿಭಾಗೀಯ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಪ್ರಕಾಶ್ ಭೋಂಸ್ಲೆ, ಡಾ. ಜಗದೀಶ, ಮಂಡ್ಯ ವೈದ್ಯಕೀಯ ಕಾಲೇಜಿನ ನಿವೃತ್ತ ನಿರ್ದೇಶಕ ಡಾ. ಶಿವಕುಮಾರ ವೀರಯ್ಯ, ಡಾ. ಮುನಿವೆಂಕಟರಾಜು, ಡಾ. ಕೆ.ಪಿ. ಅಚ್ಯುತ್ ಹಾಜರಿದ್ದರು.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...