ಸಾವಯವ ಕೃಷಿಗೆ ಒತ್ತು ನೀಡಿ

blank

ಮಳವಳ್ಳಿ: ಅತಿಯಾದ ರಾಸಾಯನಿಕ ಬಳಕೆಯಿಂದ ಇಳುವರಿ ಕುಂಠಿತಗೊಳ್ಳುವುದರ ಜತೆಗೆ ಭೂಮಿ ಫಲವತ್ತತೆ ಕಳೆದುಕೊಂಡು ಬರಡಾಗುವುದರಿಂದ ರೈತರು ಈಗಿನಿಂದಲೇ ಜಾಗೃತರಾಗುವ ಮೂಲಕ ಸಾವಯವ ಕೃಷಿಗೆ ಒತ್ತು ನೀಡುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ತಿಳಿಸಿದರು.

ತಾಲೂಕಿನ ದಾಸನದೊಡ್ಡಿ ಗ್ರಾಮದ ಸಾವಯವ ಕೃಷಿಕ ಪಾಪಣ್ಣ ಅವರ ತೋಟದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಂಪೂರ್ಣ ಸಾವಯವ ಕೃಷಿಕರ ಸಂಘದ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಬಹಳಷ್ಟು ಅನ್ನದಾತರು ಬೆಳೆಗಳ ಇಳುವರಿಯ ಲಾಭಕ್ಕಾಗಿ ಈಗಾಗಲೇ ಕೃಷಿ ಭೂಮಿಯಲ್ಲಿ ರಾಸಾಯನಿಕ ಬಳಕೆ ಮಾಡುತ್ತಿರುವುದರಿಂದ ಮಣ್ಣಿನ ಸತ್ವ ಕಳೆದುಕೊಂಡಿದೆ. ಮುಂದಿನ ದಿನಗಳಲ್ಲಿ ಇದರ ದುಷ್ಪರಿಣಾಮದ ಫಲವನ್ನು ಸಹಜವಾಗಿ ರೈತರು ಎದುರಿಸುವ ಅನಿವಾರ್ಯತೆ ಬರುತ್ತದೆ. ಹಾಕಿದ ಬೆಳೆಗಳು ಇಳುವರಿ ಬಾರದೆ ಸಿಗದೆ ನಷ್ಟಕ್ಕೆ ಸಿಲುಕುವುದರ ಜತೆಗೆ ದೇಶದಲ್ಲಿ ಆಹಾರದ ಕೊರತೆ ಉಂಟಾಗಿ ತೀವ್ರ ಸಮಸ್ಯೆಗೆ ಮನುಕುಲ ಸಿಲುಕುವಂತ ಆತಂಕ ಕಾಡದಿರದು. ಈಗಿನಿಂದಲೇ ಸಾವಯವ ಕೃಷಿಗೆ ಒತ್ತು ನೀಡಿ ಬಹು ಬೆಳೆ ಪದ್ಧತಿ ಅಳವಡಿಸಿಕೊಂಡು ಭೂಮಿಯ ಫಲವತ್ತತೆ ಉಳಿಸಿಕೊಳ್ಳುವಂತೆ ಸಲಹೆ ನೀಡಿದರು.

ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ದೀಪಕ್ ಮಾತನಾಡಿ, ರೈತಕುಲ ಉಳಿದರೆ ದೇಶಕ್ಕೆ ಉಳಿಗಾಲ. ಹಾಗಾಗಿ ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಅನ್ನದಾತ ಮನಪರಿವರ್ತನೆ ಮಾಡಿಕೊಳ್ಳಬೇಕು. ಇಲಾಖೆಯಿಂದ ಸಿಗುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಯಶಸ್ವಿ ಕೃಷಿಕರಾಗುವಂತೆ ಹೇಳಿದರು.

ಸಂಪೂರ್ಣ ಸಾವಯವ ಕೃಷಿಕರ ಸಂಘದ ಅಧ್ಯಕ್ಷ ಎಂ.ಎನ್.ಮಹೇಶ್ ಕುಮಾರ್ ಮಾತನಾಡಿ, ಸರ್ಕಾರದಿಂದ ಸಿಗುವ ಸವಲತ್ತ್ತು ಗಳು ಹಾಗೂ ಪ್ರಶಸ್ತಿಗಳು ಸಾವಯುವ ಕೃಷಿಕರಿಗೆ ಪ್ರತ್ಯೇಕವಾಗಿ ದೊರಕುವಂತೆ ಮಾಡುವುದರಿಂದ ಸಾವಯವ ಕೃಷಿಗೆ ರೈತರನ್ನು ಪ್ರೋತ್ಸಾಹಿಸದಂತಾಗುತ್ತದೆ. ಆದ್ದರಿಂದ ಸರ್ಕಾರಕ್ಕೆ ಈ ವಿಚಾರವಾಗಿ ಶಿಫಾರಸು ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು.

ಭಾರತಿ ಕಾಲೇಜಿನ ಕಾರ್ಯದರ್ಶಿ ಬಿ.ಎಂ.ನಂಜೇಗೌಡ, ಕೆಆರ್‌ಎಸ್ ಅಣೆಕಟ್ಟೆಯ ನಿವೃತ್ತ ಇಂಜಿನಿಯರ್ ಬಸವರಾಜೇಗೌಡ, ಜೈನ್ ಕಂಪನಿ ವ್ಯವಸ್ಥಾಪಕ ವೃಷಭೇಂದರ್, ಸಾವಯವ ಕೃಷಿಕರಾದ ಪ್ರವೀಣ್ ಬಾದಾಮಿ, ಚಿಕ್ಕಣ್ಣ, ವಡ್ಡರಹಳ್ಳಿ ಶಿವಕುಮಾರ್, ಶಿವು ಹಂಚಿಪುರ, ನಾಗರಾಜು, ಶಾಂತಕೃಷ್ಣ, ತನುಜಾ, ಸುವರ್ಣಾ, ಸಿಂಧು, ಕಪನಿಗೌಡ ಇದ್ದರು.

Share This Article

ಈ 3 ನಕ್ಷತ್ರದವರು ಕೋಟೇಶ್ವರ ಯೋಗದೊಂದಿಗೆ ಹುಟ್ತಾರೆ! ಇವರನ್ನು ಅರಸಿ ಬರುತ್ತೆ ಅಪಾರ ಸಂಪತ್ತು | Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ನಿಮ್ಮ ಕನಸಿನಲ್ಲಿ ಹಾವು ಕಾಣಿಸಿಕೊಂಡರೆ ಅದರರ್ಥ ಏನು ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿ ಸಂಗತಿ | Snakes in a Dream

Snakes in a Dream : ಯಾವುದೇ ವ್ಯಕ್ತಿ ನಿದ್ರೆಗೆ ಜಾರಿದಾಗ ಸಹಜವಾಗಿ ಎದುರಾಗುವ ಸಂಗತಿಯೆಂದರೆ,…

ಈ ವಸ್ತುಗಳು ನಿಮ್ಮ ಮನೆಯಲ್ಲಿದ್ದರೆ ಈ ಕೂಡಲೇ ಹೊರಗೆ ಎಸೆಯಿರಿ… ಇಲ್ಲದಿದ್ರೆ ಅಪಾಯ ತಪ್ಪಿದ್ದಲ್ಲ! Household items

Household items : ಎಂದಾದರೂ ಮನೆಯನ್ನು ವಿಷಪೂರಿತಗೊಳಿಸುವ ವಸ್ತುಗಳು ಬಗ್ಗೆ ನೀವು ಯೋಚನೆ ಮಾಡಿದ್ದೀರಾ? ಮಾರುಕಟ್ಟೆಯಲ್ಲಿ…