Friday, 14th December 2018  

Vijayavani

ಚಾಮರಾಜನಗರದಲ್ಲಿ ವಿಷವಾದ ಮಾರಮ್ಮನ ಪ್ರಸಾದ- ನಾಲ್ವರ ಸಾವು-40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, ಜಿಲ್ಲಾಧಿಕಾರಿ ಭೇಟಿ        ರಾಜಸ್ಥಾನ ಸಿಎಂ ಆಗಿ ಆಶೋಕ್ ಗೆಹ್ಲೋಟ್, ಯುವ ನಾಯಕ ಸಚಿನ್ ಪೈಲಟ್​​ಗೆ ಡಿಸಿಎಂ ಪಟ್ಟ- ಕಾಂಗ್ರೆಸ್​ನಿಂದ ಅಧಿಕೃತ ಘೋಷಣೆ        ಚೆನ್ನೈನ ರೇಲಾ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​ವೈ- ಸಿಎಂ ಎಚ್​ಡಿಕೆ ಚೆನ್ನೈಗೆ ಪ್ರಯಾಣ        ಭದ್ರತೆಗಾಗಿ ರಫೇಲ್ ಖರೀದಿ-ಸುಪ್ರೀಂಕೋರ್ಟ್ ತೀರ್ಪಿನಿಂದ ಭ್ರಮನಿರಸನ-ರಾಗಾ ವಿರುದ್ಧ ಹಾಲಿ ಮಾಜಿ ರಕ್ಷಣಾ ಸಚಿವರ ಕಿಡಿ        ನಾಲ್ಕು ದಿನದಲ್ಲಿ ಎಲ್ಲ ಸರಿಹೋಗುತ್ತೆ-ಪ್ರಯಾಣಿಕರಿಗೆ ಯಾವುದೇ ಆತಂಕ ಬೇಡ-ಪಿಲ್ಲರ್ ಬಿರುಕಿಗೆ BMRCL ಎಂಡಿ ಸ್ಪಷ್ಟನೆ        ನನಗೂ ಸಚಿವೆಯಾಗುವ ಆಸೆ ಇದೆ- ಅಂತರಂಗ ತೆರೆದಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್- ಕೈ ಸಚಿವಾಕಾಂಕ್ಷಿಗಳ ಪಟ್ಟಿಗೆ ಈಗ ಹೊಸ ಸೇರ್ಪಡೆ       
Breaking News

ಸಾವಿತ್ರಿಯಾಗಿ ಬದಲಾದ್ರು ಕೀರ್ತಿ ಸುರೇಶ್!

Saturday, 11.08.2018, 3:04 AM       No Comments

ತೆಲುಗು ನಟಿ ಸಾವಿತ್ರಿ ಅಭಿನಯದ ಜತೆಗೆ ದಾನಕ್ಕೆ ಹೆಸರಾದವರು. ಯಾರಾದರೂ ಏನಾದರೂ ಸಹಾಯ ಕೇಳಿ ಬಂದರೆ ಇಲ್ಲ ಎಂದು ಅವರು ಹೇಳಿದ್ದೇ ಇಲ್ಲವಂತೆ. ಅವರ ಜೀವನ ಆಧರಿಸಿ ಸಿದ್ಧವಾದ ಚಿತ್ರ ‘ಮಹಾನಟಿ’ಯಲ್ಲಿ ಕೀರ್ತಿ ಸುರೇಶ್ ಮುಖ್ಯಭೂಮಿಕೆ ನಿರ್ವಹಿಸಿದ್ದರು. ಅಚ್ಚರಿಯ ವಿಚಾರ ಏನೆಂದರೆ ಸಾವಿತ್ರಿ ತತ್ವವನ್ನು ಕೀರ್ತಿ, ತಮ್ಮ ಜೀವನದಲ್ಲಿ ಅಳವಡಿಸಿಕೊಂಡಂತೆ ಕಾಣುತ್ತಿದೆ. ಅದಕ್ಕೆ ಕಾರಣ, ‘ಸಂಡಕೋಳಿ 2’ ಚಿತ್ರದಲ್ಲಿ ಕೆಲಸ ಮಾಡಿದ ಎಲ್ಲರಿಗೂ ಉಡುಗೊರೆಯಾಗಿ ಕೀರ್ತಿ ಚಿನ್ನದ ನಾಣ್ಯ ನೀಡಿದ್ದಾರೆ. ‘ಮಹಾನಟಿ’ ಚಿತ್ರೀಕರಣ ಪೂರ್ಣಗೊಂಡ ನಂತರ ಅವರು ಚಿತ್ರ ತಂಡದ ಸದಸ್ಯರಿಗೆ ಗೋಲ್ಡ್ ಕಾಯಿನ್ ನೀಡಿದ್ದರು ಎಂಬುದು ವಿಶೇಷ.

ಎನ್. ಲಿಂಗುಸ್ವಾಮಿ ನಿರ್ದೇಶನದ ‘ಸಂಡಕೋಳಿ 2’ರಲ್ಲಿ ವಿಶಾಲ್​ಗೆ ಜತೆಯಾಗಿ ಕೀರ್ತಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಅವರು ಚಿತ್ರಕ್ಕಾಗಿ ಶ್ರಮಿಸಿದ ಎಲ್ಲ ತಂತ್ರಜ್ಞರಿಗೆ ಹಾಗೂ ಕಲಾವಿದರಿಗೆ ಶೂಟಿಂಗ್ ಕೊನೆಯ ದಿನ ಗೋಲ್ಡ್ ಕಾಯಿನ್ ಗಿಫ್ಟ್ ಕೊಟ್ಟಿದ್ದಾರೆ. ಈ ಮೂಲಕ ಎಲ್ಲರ ಮನ ಗೆದ್ದಿದ್ದಾರೆ. -ಏಜೆನ್ಸೀಸ್

Leave a Reply

Your email address will not be published. Required fields are marked *

Back To Top